ರಾಜ್ಯದೇಶರಾಜಕೀಯಕ್ರಿಕೆಟ್ವಿದೇಶವಾಣಿಜ್ಯ
ಸಿನಿಮಾ▾
ಅಂಕಣಗಳು
⋮
ರಾಯಚೂರು

ಶುದ್ಧ ಕುಡಿವ ನೀರು ಪೂರೈಕೆಗೆ ಬದ್ಧ

Vishwanath S
Updated On : 18 Jun 2013, 11:35 am

ಕನ್ನಡಪ್ರಭ ವಾರ್ತೆ ,   ರಾಯಚೂರು ,   ಜೂ.17
ಶುದ್ಧ ಕುಡಿಯುವ ನೀರು ಎಲ್ಲರ ಹಕ್ಕು. ರಾಜ್ಯ ಸರ್ಕಾರ ಗ್ರಾಮೀಣ ಭಾಗದ ಜನತೆಗೆ ಶುದ್ಧ ಕುಡಿಯುವ ನೀರೊದಗಿಸುವ ನಿಟ್ಟಿನಲ್ಲಿ ಬದ್ಧವಾಗಿದೆ ಎಂದು ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಸಚಿವ ಎಚ್.ಕೆ.ಪಾಟೀಲ್ ಭರವಸೆ ನೀಡಿದರು.
ಮಾನವಿ ತಾಲೂಕಿನ ಪಾಮನಕಲ್ಲೂರು ಗ್ರಾಮದಲ್ಲಿ ಸೋಮವಾರ ಆರ್ಸೆನಿಕ್ ಯುಕ್ತ  ಕುಡಿಯುವ ನೀರಿನ ಗ್ರಾಮಗಳ ಸಮಸ್ಯಾತ್ಮಕ ಗ್ರಾಮಗಳಿಗೆ ಭೇಟಿ ನೀಡಿದ ವೇಳೆ ಮಾತನಾಡಿ, ಗ್ರಾಮೀಣ ಭಾಗದಲ್ಲಿ ಆರ್ಸೆನಿಕ್‌ಯುಕ್ತ ನೀರು ಪೂರೈಕೆಯಾಗುತ್ತಿರುವ ಗ್ರಾಮಗಳಲ್ಲಿ ಜನತೆ ಎದುರಿಸುತ್ತಿರುವ ಸಮಸ್ಯೆಗಳ ಬಗ್ಗೆ ಸರ್ಕಾರಕ್ಕೆ  ಮಾಹಿತಿಯಿದ್ದು, ಸಮಸ್ಯೆ ನಿವಾರಣೆಗೆ ಸರ್ಕಾರ ಯೋಜನೆ ಜಾರಿಗೆ ತರಲಾಗುತ್ತಿದೆ ಎಂದರು.
ಈಗಾಗಲೇ ಸಮೂಹ ಸಂಸ್ಥೆಯು ಆರ್ಸೆನಿಕ್ ಯುಕ್ತ ನೀರಿನ ಗ್ರಾಮಗಳ ಬಗ್ಗೆ ಮಾಹಿತಿ ಸಂಗ್ರಹಿಸಿದ್ದು, ಶುದ್ಧ ಕುಡಿಯುವ ನೀರೊದಗಿಸುವ ನಿಟ್ಟಿನಲ್ಲಿ ಪ್ರಯತ್ನ ನಡೆಸಿದೆ. ರಾಜ್ಯ ಸರ್ಕಾರ ಗ್ರಾಮೀಣ ಜನತೆಗೆ ಸರ್ಕಾರ ಶುದ್ಧ ನೀರೊದಗಿಸಲಿದೆ. ಜನರ ಆರೋಗ್ಯದ ಬಗ್ಗೆ ಸರ್ಕಾರಕ್ಕೆ ಕಾಳಜಿಯಿದೆ ಎಂದು ತಿಳಿಸಿದರು.
ಸರ್ಕಾರ ಮುಂದಿನ ದಿನಗಳಲ್ಲಿ ಕೈಗೊಳ್ಳುವ ಕಾರ್ಯಕ್ರಮಗಳ ಬಗ್ಗೆ ಆಯಾ ಗ್ರಾಪಂಗಳಿಗೆ ಮಾಹಿತಿ ನೀಡಲಾಗುತ್ತದೆ. ಆ ಮೂಲಕ ಆರ್ಸೆನಿಕ್ ಯುಕ್ತ ನೀರಿನ ಸಮಸ್ಯೆ ನಿವಾರಣೆಗೆ ಕ್ರಮ ಕೈಗೊಳ್ಳಲಾಗುತ್ತದೆ. ಅಶುದ್ಧ ನೀರಿನ ಸೇವನೆಯಿಂದ ಆರೋಗ್ಯಕ್ಕೆ ಹಾನಿಯಾಗುತ್ತದೆ. ಗ್ರಾಮೀಣರು ಶುದ್ಧ ನೀರಿನ ಸೇವನೆಗೆ ಹೆಚ್ಚಿನ ಆದ್ಯತೆ ನೀಡಬೇಕೆಂದು ಮನವಿ ಮಾಡಿದರು.
ಸಮಾರಂಭದಲ್ಲಿ ಶಾಸಕ ಪ್ರತಾಪಗೌಡ ಪಾಟೀಲ್ ಮಾತನಾಡಿ, ಪಾಮನಕಲ್ಲೂರು, ಹಾಲಾಪುರ ಹಾಗೂ ಅಮೀನಗಡ ಗ್ರಾಪಂ ವ್ಯಾಪ್ತಿಯ ಗ್ರಾಮಗಳಿಗೆ ಶುದ್ಧ ಕುಡಿಯುವ ನೀರೊದಗಿಸುವ ನಿಟ್ಟಿನಲ್ಲಿ ರಾಜೀವ್‌ಗಾಂಧಿ ಕುಡಿಯುವ ನೀರಿನ ಯೋಜನೆ ಜಾರಿಗೆ ಕಳೆದ ಅವಧಿಯಲ್ಲಿ ಕ್ರಮ ಕೈಗೊಂಡಿದ್ದು, ತುಂಗಭದ್ರಾ ಎಡದಂಡೆ ಕಾಲುವೆಯ ಬಳಿ ಕೆರೆ ನಿರ್ಮಿಸಲು ಟೆಂಡರ್ ಪ್ರಕ್ರಿಯೆ ಪೂರ್ಣಗೊಂದೆ. ಅಧಿಕಾರಿಗಳು ಕಾಮಗಾರಿಗೆ ಆದೇಶಿಸಬೇಕಾಗಿದೆ ಎಂದರು.
ಜಿಲ್ಲಾ ಕಾಂಗ್ರೆಸ್ ಮುಖಂಡ, ಮಾಜಿ ಶಾಸಕ ಬೋಸರಾಜು, ಜಿಲ್ಲೆಯ ಬಹುತೇಕ ಗ್ರಾಮಗಳಲ್ಲಿ ಶುದ್ಧ ಕುಡಿಯುವ ನೀರಿನ ಕೊರತೆಯಿದ್ದು, ಫ್ಲೋರೈಡ್ ಮತ್ತು ಆರ್ಸೆನಿಕ್ ಅಂಶವಿರುವ ನೀರು ದೊರೆಯತ್ತಿದೆ. ಅದರ ಸೇವನೆಯಿಂದ ಜನರ ಆರೋಗ್ಯ ಸಂಬಂಧಿ ಸಮಸ್ಯೆಗಳನ್ನು ಎದುರಿಸುತ್ತಿದ್ದಾರೆ. ನದಿ ನೀರು ಪೂರೈಕೆ ಯೋಜನೆಗಳ ಜಾರಿ ಮೂಲಕ ಜನತೆಗೆ ಶುದ್ಧ ಕುಡಿಯುವ ನೀರೊದಗಿಸುವಂತೆ ಮನವಿ ಮಾಡಿದರು.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Advertisement