ರಾಜ್ಯದೇಶರಾಜಕೀಯಕ್ರಿಕೆಟ್ವಿದೇಶವಾಣಿಜ್ಯ
ಸಿನಿಮಾ▾
ಅಂಕಣಗಳು
⋮
ರಾಯಚೂರು

ಶ್ರೀರಾಮ ಮಂದಿರದಲ್ಲಿ ಯಾಜ್ಞವಲ್ಕ್ಯರ ಜಯಂತಿ

Lingaraj Badiger
Updated On : 21 Jun 2013, 11:12 am

ಸಿಂಧನೂರು: ನಗರದ ಬ್ರಾಹ್ಮಣರ ಓಣಿಯ ಶ್ರೀರಾಮ ಮಂದಿರದಲ್ಲಿ ಮಂಗಳವಾರ ಅದ್ಧೂರಿಯಾಗಿ ಯೋಗೀಶ್ವರ ಯಾಜ್ಞವಲ್ಕ್ಯ ಗುರುಗಳ ಜಯಂತ್ಯುತ್ಸವ ನಡೆಯಿತು.
ಜಯಂತಿ ಅಂಗವಾಗಿ ಬೆಳಿಗ್ಗೆ ಆರು ಗಂಟೆಗೆ ಕಾಡ ಮಾರುತಿ ದೇವಸ್ಥಾನದಿಂದ ಯೋಗೀಶ್ವರ ಯಾಜ್ಞವಲ್ಕ್ಯ ಗುರುಗಳ ಭಾವಚಿತ್ರವನ್ನು ಮೆರವಣಿಗೆ ಮೂಲಕ ಶ್ರೀರಾಮ ಮಂದಿರಕ್ಕೆ ಕರೆ ತಂದು ಪ್ರತಿಷ್ಠಾಪಿಸಲಾಯಿತು. ನಂತರ ಪಂಚಾಮೃತ ಅಭಿಷೇಕ, ಸತ್ಯನಾರಾಯಣ ಪೂಜೆ, ತೀರ್ಥ ಪ್ರಸಾದ ಕಾರ್ಯಕ್ರಮಗಳು ಜರುಗಿದವು.
 ಇದೇ ಸಂದರ್ಭದಲ್ಲಿ ಹುಣಸಿಹೊಳೆಯ ಕಣ್ವ ಮಠದ ಅಭಿವೃದ್ಧಿ ಕಾರ್ಯಗಳಿಗೆ ಸಹಕರಿಸಿದ ದಾನಿಗಳನ್ನು ಗೌರವಿಸಲಾಯಿತು. ಸುಮಾರು ರು. 50 ಲಕ್ಷದ ವೆಚ್ಚದಲ್ಲಿ ವಿವಿಧ ಕೆಲಸಗಳನ್ನು ಕೈಗೆತ್ತಿಕೊಳ್ಳಲಾಗುತ್ತಿದ್ದು, ವಿಪ್ರ ಬಾಂಧವರು ತನು, ಮನ, ಧನಗಳಿಂದ ಸಹಕರಿಸಬೇಕೆಂದು ಸೇವಾ ಸಮಿತಿಯ ಕಿಶನ ರಾವ್, ಮನೋಹರ ಮುಂತಾದವರು ಕೋರಿದರು.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Advertisement