ರಾಜ್ಯದೇಶರಾಜಕೀಯಕ್ರಿಕೆಟ್ವಿದೇಶವಾಣಿಜ್ಯ
ಸಿನಿಮಾ▾
ಅಂಕಣಗಳು
⋮
ರಾಯಚೂರು

ವಿದ್ಯಾರ್ಥಿನಿಯರಿಗೆ ಸೂಕ್ತ ರಕ್ಷಣೆ: ಶರಣಪ್ರಕಾಶ್

Mainashree
Updated On : 24 Jun 2013, 11:47 am

ರಾಯಚೂರು: ಮಣಿಪಾಲ್‌ನಲ್ಲಿ ವೈದ್ಯ ವಿದ್ಯಾರ್ಥಿನಿ ಮೇಲೆ ನಡೆದ ಸಾಮೂಹಿಕ ಅತ್ಯಾಚಾರ ಪ್ರಕರಣದ ಹಿನ್ನೆಲೆ ಸ್ಥಳೀಯ ಮತ್ತು ಹೊರ ರಾಜ್ಯಗಳಿಂದ ಆಗಮಿಸಿ ವೈದ್ಯಕೀಯ ಶಿಕ್ಷಣದ ವ್ಯಾಸಂಗ ಮಾಡುತ್ತಿರುವ ವಿದ್ಯಾರ್ಥಿನಿಯರಿಗೆ ಸೂಕ್ತ ರಕ್ಷಣೆ ನೀಡಲು ಆದೇಶಿಸಲಾಗಿದೆ ಎಂದು ವೈದ್ಯಕೀಯ ಶಿಕ್ಷಣ ಸಚಿವ ಡಾ.ಶರಣಪ್ರಕಾಶ್ ಪಾಟೀಲ್ ತಿಳಿಸಿದ್ದಾರೆ.
ನಗರದಲ್ಲಿ ಭಾನುವಾರ ಸುದ್ದಿಗಾರರೊಂದಿಗೆ ಮಾತನಾಡಿ, ವೈದ್ಯ ವಿದ್ಯಾರ್ಥಿನಿ ಗ್ಯಾಂಗ್‌ರೇಪ್ ಪ್ರಕರಣಕ್ಕೆ ಸಂಬಂಧಿಸಿದಂತೆ ಗೃಹ ಸಚಿವರು ಈಗಾಗಲೇ ಪೊಲೀಸರಿಗೆ ಕಟ್ಟುನಿಟ್ಟಿನ ಆದೇಶ ನೀಡಿದ್ದಾರೆ. ಆದರೆ ಮುಂದಿನ ದಿನಗಳಲ್ಲಿ ಇಂಥ ಪ್ರಕರಣಗಳು ನಡೆಯದಂತೆ ಎಲ್ಲ ಮುನ್ನೆಚ್ಚರಿಕೆ ಕ್ರಮ ಕೈಗೊಳ್ಳಲಾಗುತ್ತದೆ. ಬೀದರ್, ರಾಯಚೂರು, ಬೆಳಗಾವಿ, ಮೈಸೂರು ಸರ್ಕಾರಿ ವೈದ್ಯಕೀಯ ಕಾಲೇಜುಗಳಿಗೆ ಎಂಸಿಐ ವಿವಿಧ ಕಾರಣಗಳನ್ನೊಡ್ಡಿ ಪ್ರವೇಶಕ್ಕೆ ಅನುಮತಿ ನೀಡಲು ನಿರಾಕರಿಸಿತ್ತು. ಆದರೆ ರಾಜ್ಯ ಸರ್ಕಾರದ ಭರವಸೆ ಮೇರೆಗೆ ಬೆಳಗಾವಿ, ಹುಬ್ಬಳ್ಳಿ, ಮೈಸೂರು ಮೆಡಿಕಲ್ ಕಾಲೇಜುಗಳಿಗೆ ಪ್ರವೇಶವಕಾಶ ಕಲ್ಪಿಸಿದೆ. ಶೀಘ್ರವೇ ಬೀದರ್ ಮತ್ತು ರಾಯಚೂರು ಕಾಲೇಜುಗಳಿಗೆ ಎಂಸಿಐ ಸಮ್ಮತಿ ಸೂಚಿಸುವ ಸಾಧ್ಯತೆ ಇದೆ ಎಂದರು. 371ನೇ ಕಲಂ(ಜೆ) ಜಾರಿ ಹಿನ್ನೆಲೆ ರಚಿಸಿರುವ ಸಂಪುಟ ಉಪಸಮಿತಿಯು ಜು.8ರ ನಂತರ ಕೇಂದ್ರ ಸರ್ಕಾರಕ್ಕೆ ತನ್ನ ಅಂತಿಮ ವರದಿ ಸಲ್ಲಿಸಲಿದೆ ಎಂದರು.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Advertisement