ರಾಜ್ಯದೇಶರಾಜಕೀಯಕ್ರಿಕೆಟ್ವಿದೇಶವಾಣಿಜ್ಯ
ಸಿನಿಮಾ▾
ಅಂಕಣಗಳು
⋮
ರಾಯಚೂರು

ವಿವಿಗೆ ನೇಮಕ, ಸ್ಥಳೀಯರಿಗೆ ಆದ್ಯತೆ: ಕರವೇ ಆಗ್ರಹ

Vishwanath S
Updated On : 24 Jun 2013, 11:33 am

ರಾಯಚೂರು: ರಾಯಚೂರು ಕೃಷಿ ವಿವಿ ವ್ಯವಸ್ಥಾಪನಾ ಮಂಡಳಿ ಹಾಗೂ ವಿಸ್ತರಣಾ ಪರಿಷತ್‌ಗೆ ಸ್ಥಳೀಯರಿಗೆ ನೇಮಿಸುವಂತೆ ಕರವೇ ಸಂಘಟನೆ ಆಗ್ರಹಿಸಿದೆ.
ಈ ಕುರಿತು ಕೃಷಿ ಸಚಿವ ಕೃಷ್ಣ ಭೈರೇಗೌಡ ಭಾನುವಾರ ಮನವಿ ಸಲ್ಲಿಸಿದ ಕರವೇ ಕಾರ್ಯಕರ್ತರು, ಈಚೇಗೆ ರಾಯಚೂರು ಕೃಷಿ ವಿವಿ ವ್ಯವಸ್ಥಾಪನಾ ಮಂಡಳಿ ಹಾಗೂ ವಿಸ್ತರಣಾ ಪರಿಷತ್‌ಗೆ ನೇಮಿಸಿದವರಲ್ಲಿ ಎಲ್ಲರೂ ಹೊರ ಜಿಲ್ಲೆಯವರಾಗಿದ್ದಾರೆ. ಇದರಿಂದ ಹೈ.ಕ. ಭಾಗದವರಿಗೆ ಅನ್ಯಾಯವಾಗಿದೆ ಎಂದು ದೂರಿದರು.
ಹೈ.ಕ.ಭಾಗದ ಯಾಮೊಬ್ಬ ವ್ಯಕ್ತಿಯನ್ನು ನೇಮಕಕ್ಕೆ ಪರಿಗಣಿಸದೇ ಹೊರಗಿನವರನನ್ನೇ ಆಯ್ಕೆ ಮಾಡಲಾಗಿದೆ. ಈ ಹಿನ್ನೆಲೆಯಲ್ಲಿ ಸ್ಥಳೀಯರಿಗೆ ನೇಮಕಾತಿಯಲ್ಲಿ ಮೊದಲಾದ್ಯತೆ ನೀಡಬೇಕೆಂದು ಒತ್ತಾಯಿಸಿದರು.
ಇದಕ್ಕೆ ಪ್ರತಿಕ್ರಿಯಿಸಿದ ಸಚಿವ ಕೃಷ್ಣ ಭೈರೇಗೌಡ ಅವರು, ರಾಜ್ಯಪಾಲರು ಮಾಡಿರುವ ನೇಮಕಾತಿಯು ತಮ್ಮ ವ್ಯಾಪ್ತಿಗೆ ಮೀರಿದ್ದಾಗಿದೆ. ಮುಂದಿನ ದಿನಗಳಲ್ಲಿ ಸರ್ಕಾರದಿಂದ ಈ ನಿಟ್ಟಿನಲ್ಲಿ ಅನ್ಯಾಯವಾಗದಂತೆ ಎಚ್ಚರಿಕೆ ವಹಿಸುವುದಾಗಿ ಭರವಸೆ ನೀಡಿದರು.
ಕರವೇ ಸಂಘಟನೆಯ ಜಿಲ್ಲಾಧ್ಯಕ್ಷ ಅಶೋಕ ಕುಮಾರ್ ಜೈನ್, ಖಲೀಲ್ ಪಾಷಾ, ಮಾನಸಿಂಗ್ ಠಾಕೂರ್ ಇದ್ದರು.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Advertisement