ಉದ್ಯೋಗಿನಿ ಸಾಲಕ್ಕೆ ಅರ್ಜಿ ಆಹ್ವಾನ
ಆಳಂದ: ತಾಲೂಕಿನ ಶಿಶು ಅಭಿವೃದ್ಧಿ ಯೋಜನೆ ಹಾಗೂ ಮಹಿಳಾ ಮತ್ತು ಮಕ್ಕಳ ಕಲ್ಯಾಣ ಅಭಿವೃದ್ಧಿ ಇಲಾಖೆಯು ಕರ್ನಾಟಕ ರಾಜ್ಯ ಮಹಿಳಾ ಅಭಿವೃದ್ಧಿ ನಿಗಮದ ಉದ್ಯೋಗಿನಿ ಯೋಜನೆಯಡಿ ಆರ್ಥಿಕವಾಗಿ ಹಿಂದುಳಿದ ನಿರುದ್ಯೋಗಿ ಮಹಿಳೆಯರಿಗೆ ನೇರವಾಗಿ ಸ್ವಂತ ಉದ್ಯಮ ಮತ್ತು ಸೇವಾ ಕ್ಷೇತ್ರ ಪ್ರಾರಂಭಿಸಲು ಮತ್ತು ವ್ಯಾಪಾರದಲ್ಲಿ ತೊಡಗಿಕೊಳ್ಳಲು ಮಹಿಳಾ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ. 18 ವರ್ಷ ಮೇಲ್ಪಟ್ಟ ಹಾಗೂ 45 ವರ್ಷದೊಳಗಿನ ಅರ್ಹ ಮಹಿಳೆಯರು ಅರ್ಜಿ ಸಲ್ಲಿಸಲು ಅರ್ಹರು. ದಾಖಲೆಗಳನ್ನು ಸ್ವಂತ ವ್ಯಾಪಾರ ಉದ್ಯಮಗಳ ಯೋಜನಾ ವೆಚ್ಚದ ಗುರಿ. ಜಾತಿ ಮತ್ತು ಆದಾಯ ಪ್ರಮಾಣಪತ್ರ, ಭಾವಚಿತ್ರಗಳು, ಗುರುತಿನ ಚೀಟಿ ಅಥವಾ ವಾಸಸ್ಥಳ, ಪಡಿತರ ಚೀಟಿ ಎಲ್ಲ ದಾಖಲಾತಿಗಳೊಂದಿಗೆ ಭರ್ತಿ ಮಾಡಿದ ಅರ್ಜಿಯನ್ನು ಜುಲೈ 15ರೊಳಗಾಗಿ ಆಳಂದ ಶಿಶು ಅಭಿವೃದ್ಧಿ ಯೋಜನಾಧಿಕಾರಿಗಳ ಕಚೇರಿಗೆ ಸಲ್ಲಿಸಬೇಕೆಂದು ತಾಲೂಕು 10 ಅಧಿಕಾರಿಗಳು ತಿಳಿಸಿದ್ದಾರೆ.