ರಾಜ್ಯದೇಶರಾಜಕೀಯಕ್ರಿಕೆಟ್ವಿದೇಶವಾಣಿಜ್ಯ
ಸಿನಿಮಾ▾
ಅಂಕಣಗಳು
⋮
ರಾಯಚೂರು

ನ್ಯಾಯಸಮ್ಮತ ಚುನಾವಣೆಗೆ ಆಗ್ರಹ

Rashmi Kasaragodu
Updated On : 29 Jun 2013, 11:13 am

ರಾಯಚೂರು: ರಾಜ್ಯ ಸರ್ಕಾರಿ ನೌಕರರ ಸಂಘದ ಮಾನವಿ ತಾಲೂಕು ಘಟಕಕ್ಕೆ ಚುನಾವಣೆಯನ್ನು ಮುಕ್ತ, ಪಾರದರ್ಶಕ ಹಾಗೂ ನ್ಯಾಯಸಮ್ಮತ ರೀತಿಯಲ್ಲಿ ನಡೆಸುವಂತೆ ನೌಕರರ ಸಂಘದ ಸದಸ್ಯ ರಾಮಚಂದ್ರಪ್ಪ ಒತ್ತಾಯಿಸಿದ್ದಾರೆ. ಈ ಕುರಿತು ಅವರು ಪ್ರಕಟಣೆ ನೀಡಿ, ಮಾನವಿ ತಾಲೂಕು ಸಂಘಕ್ಕೆ ನಡೆಯಲಿರುವ ಚುನಾವಣೆಯ ಉಸ್ತುವಾರಿ ಹೊತ್ತ ಚುನಾವಣಾಧಿಕಾರಿಗಳು ಸೂಕ್ತ ಕ್ರಮ ಕೈಗೊಳ್ಳಬೇಕು. ಇದುವರೆಗೆ ತಾಲೂಕಿನ ನೌಕರರಿಗೆ ಚುನಾವಣೆಗೆ ಸಂಬಂಧಿಸಿ ಯಾವುದೇ ಮಾಹಿತಿ ದೊರೆತಿಲ್ಲ ಎಂದು ಆರೋಪಿಸಿದ್ದಾರೆ. ಚುನಾವಣೆಗೆ ಸಂಬಂಧಿಸಿ ಮಾಹಿತಿ ಮತ್ತು ವ್ಯಾಪಕ ಪ್ರಚಾರ ಕೈಗೊಳ್ಳುವಲ್ಲಿ ತಾಲೂಕು ಘಟಕ ವಿಫಲವಾಗಿದೆ. ರಾಜ್ಯ ಸಂಘಕ್ಕೆ ಈ ಕುರಿತು ದೂರು ಸಲ್ಲಿಸಿದ್ದು, ಮಾನವಿ ತಾಲೂಕಿನ ನೌಕರರ ಹಿತದೃಷ್ಟಿಯಿಂದ ಚುನಾವಣೆಯನ್ನು ಪಾರದರ್ಶಕ ಹಾಗೂ ಕಾನೂನಿನಂತೆ ನಡೆಸಲು ಆಗ್ರಹಿಸಿರುವ ಅವರು, ನೌಕರರು ತಮ್ಮ ಹೆಸರು ಮತದಾರರ ಪಟ್ಟಿಯಲ್ಲಿರುವ ಬಗ್ಗೆ ಖಚಿತಪಡಿಸಿಕೊಳ್ಳಲು ಮನವಿ ಮಾಡಿದ್ದಾರೆ.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Advertisement