ಸಫಾಯಿ ಕರ್ಮಚಾರಿಗಳಿಗೆ ಸವಲತ್ತು ನೀಡಲು ಒತ್ತಾಯ
ರಾಯಚೂರು: ಸಫಾಯಿ ಕರ್ಮಚಾರಿಗಳಿಗೆ ವಿವಿಧ ಯೋಜನೆಗಳ ಪ್ರಯೋಜನ ದೊರಕಿಸಿಕೊಡುವಲ್ಲಿ ವಿಫಲರಾಗಿರುವ ಅಧಿಕಾರಿಗಳ ವಿರುದ್ಧ ಕ್ರಮ ಕೈಗೊಳ್ಳಬೇಕು ಎಂಬುದು ಸೇರಿ ವಿವಿಧ ಬೇಡಿಕೆಗಳ ಈಡೇರಿಕೆಗೆ ಆಗ್ರಹಿಸಿ ರಾಷ್ಟ್ರೀಯ ಸಫಾಯಿ ಮಜ್ದೂರ್ ಕಾಂಗ್ರೆಸ್ನಿಂದ ಈಚೇಗೆ ಜಿಲ್ಲಾಡಳಿತಕ್ಕೆ ಮನವಿ ಸಲ್ಲಿಸಲಾಯಿತು.ಈ ಕುರಿತು ಸಂಘಟನೆಯ ಪ್ರಮುಖರು ಸಹಾಯಕ ಆಯುಕ್ತೆ ಮಂಜುಶ್ರೀ ಅವರಿಗೆ ಮನವಿ ಸಲ್ಲಿಸಿ, ಸರ್ಕಾರದ ವಿವಿಧ ಯೋಜನೆಗಳ ಲಾಭ ಅರ್ಹ ಸಫಾಯಿ ಕರ್ಮಚಾರಿಗಳಿಗೆ ದೊರೆತಿಲ್ಲ. ಅನರ್ಹರಿಗೆ ಅಧಿಕಾರಿಗಳು ಯೋಜನೆಗಳ ನೆರವು ಮಂಜೂರು ಮಾಡಿದ್ದಾರೆ. ಅಂಥವರ ವಿರುದ್ಧ ಕಠಿಣ ಕ್ರಮ ಕೈಗೊಳ್ಳುವಂತೆ ಒತ್ತಾಯಿಸಿದರು.ಅದೇ ರೀತಿ ಸಫಾಯಿ ಕರ್ಮಚಾರಿಗಳ ಸ್ಮಶಾನ ಪ್ರದೇಶಕ್ಕೆ ಆವರಣ ಗೋಡೆ ನಿರ್ಮಾಣಕ್ಕೆ 10 ಲಕ್ಷ ಮಂಜೂರು ಮಾಡಬೇಕು. ಸಫಾಯಿ ಕರ್ಮಚಾರಿಗಳಿಗೆ ಅಗತ್ಯ ಸಂದರ್ಭದಲ್ಲಿ ಸಾಲ ನೀಡಲು ಕ್ರಮ ಕೈಗೊಳ್ಳಬೇಕು ಎಂದು ಆಗ್ರಹಿಸಿದರು.