ರಾಜ್ಯದೇಶರಾಜಕೀಯಕ್ರಿಕೆಟ್ವಿದೇಶವಾಣಿಜ್ಯ
ಸಿನಿಮಾ▾
ಅಂಕಣಗಳು
⋮
ರಾಯಚೂರು

'ಪಕ್ಷದಿಂದ 3500 ಅಭ್ಯರ್ಥಿಗಳ ಸ್ಪರ್ಧೆ'

Lingaraj Badiger
Updated On : 5 Mar 2013, 10:55 am

ರಾಯಚೂರು: ಜಿಲ್ಲೆಯಲ್ಲಿ ನಡೆಯುತ್ತಿರುವ ನಗರಸಭೆ, ಪುರಸಭೆ ಮತ್ತು ಪಟ್ಟಣ ಪಂಚಾಯ್ತಿ ಚುನಾವಣೆಗೆ ಸ್ಪರ್ಧಿಸಿದ ಬಿಎಸ್‌ಆರ್ ಕಾಂಗ್ರೆಸ್ ಅಭ್ಯರ್ಥಿಗಳ ಗೆಲುವು ಬಹುತೇಕ ಖಚಿತ ಎಂದು ಪಕ್ಷದ ರಾಜ್ಯಾಧ್ಯಕ್ಷ ಬಿ. ಶ್ರೀರಾಮುಲು ವಿಶ್ವಾಸ ವ್ಯಕ್ತಪಡಿಸಿದರು. ಪಟ್ಟಣದ ಪಕ್ಷದ ಕಚೇರಿಯಲ್ಲಿ ಸೋಮವಾರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ರಾಜ್ಯದಲ್ಲಿ ನಗರಸಭೆ, ಪುರಸಭೆ ಮತ್ತು ಪಟ್ಟಣ ಪಂಚಾಯ್ತಿ ಸೇರಿದಂತೆ ಸ್ಥಳೀಯ ಸಂಸ್ಥೆ ಚುನಾವಣೆಯಲ್ಲಿ ಪಕ್ಷದಿಂದ ಸುಮಾರು 3500 ಅಭ್ಯರ್ಥಿಗಳು ಸ್ಪರ್ಧಿಸಿದ್ದು, ಚುನಾವಣೆಯಲ್ಲಿ ಶೇ.50ರಷ್ಟು ಅಭ್ಯರ್ಥಿಗಳು ಗೆಲ್ಲುವ ನಿರೀಕ್ಷೆ ಹೊಂದಲಾಗಿದೆ. ಪ್ರಾದೇಶಿಕ ಪಕ್ಷದಿಂದ ಮಾತ್ರ ರಾಜ್ಯದ ಅಭಿವೃದ್ಧಿ ಸಾಧ್ಯವಾಗಿದ್ದು, ಈ ನಿಟ್ಟಿನಲ್ಲಿ ಚುನಾವಣೆ ನಿಮಿತ್ತ ಪ್ರಚಾರ ಕೈಗೊಂಡ ಸಮಯದಲ್ಲಿ ಜನರಿಂದ ಉತ್ತಮ ಪ್ರತಿಕ್ರಿಯೆ ವ್ಯಕ್ತವಾಗುತ್ತಿದೆ ಎಂದರು.
'ಅಧಿಕಾರಕ್ಕೆ ಬಂದರೆ ರೈತರ ಸಾಲ ಮನ್ನಾ'
ಮುದಗಲ್: ರಾಜ್ಯದಲ್ಲಿ ಬಿಎಸ್‌ಆರ್ ಕಾಂಗ್ರೆಸ್ ಅಧಿಕಾರಕ್ಕೆ ಬಂದರೆ ರೈತರ ಬ್ಯಾಂಕ್ ಸಾಲ ಸಂಪೂರ್ಣ ಮನ್ನಾ ಮಾಡುವುದಾಗಿ ಬಿಎಸ್‌ಆರ್ ಕಾಂಗ್ರೆಸ್‌ನ ಸಂಸ್ಥಾಪಕ ಶ್ರೀರಾಮುಲು ಹೇಳಿದರು. ಪಟ್ಟಣದಲ್ಲಿ ಪ.ಪಂ. ಚುನಾವಣೆಯ ಅಂಗವಾಗಿ ಏರ್ಪಡಿಸಿದ್ದ ಪ್ರಚಾರ ಸಭೆಯನ್ನು ಉದ್ಘಾಟಿಸಿ ಮಾತನಾಡಿದರು. ಪ್ರಸಕ್ತ ನಡೆಯುತ್ತಿರುವ ಪಟ್ಟಣ ಪಂಚಾಯಿತಿ, ಪುರಸಭೆ ಚುನಾವಣೆಗಳಲ್ಲಿ ಬಿಎಸ್‌ಆರ್ ಕಾಂಗ್ರೆಸ್ ಅಭ್ಯರ್ಥಿಗಳನ್ನು ಗೆಲ್ಲಿಸಿ ಅಭಿವೃದ್ಧಿಗೆ ಸಹಕಾರ ನೀಡಬೇಕು ಎಂದು ಮತ ಯಾಚಿಸಿದರು. ಮಾಜಿ ಸಂಸದ ಕೆ. ವಿರುಪಾಕ್ಷಪ್ಪ, ಸಂಸದ ಸಣ್ಣ ಫಕೀರಪ್ಪ, ನಿಯೋಜಿತ ಅಭ್ಯಾರ್ಥಿ ಸಿದ್ದು ಬಂಡಿ, ಅಭ್ಯರ್ಥಿಗಳು, ಮುಖಂಡರು ಭಾಗವಹಿಸಿದ್ದರು.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Advertisement