ರಾಜ್ಯದೇಶರಾಜಕೀಯಕ್ರಿಕೆಟ್ವಿದೇಶವಾಣಿಜ್ಯ
ಸಿನಿಮಾ▾
ಅಂಕಣಗಳು
⋮
ರಾಯಚೂರು

ಡಿಇಸಿ ಮಾತ್ರೆ ವಿತರಣಾ ಕಾರ್ಯಕ್ರಮಕ್ಕೆ ಚಾಲನೆ

Lingaraj Badiger
Updated On : 6 Mar 2013, 11:08 am

ಕ.ಪ್ರ. ವಾರ್ತೆ, ಸಿಂಧನೂರು, ಮಾ.5
9ನೇ ಸುತ್ತಿನ ರಾಷ್ಟ್ರೀಯ ಆನೆಕಾಲು ರೋಗ ನಿಯಂತ್ರಣ ಕಾರ್ಯಕ್ರಮ ಅಡಿಯಲ್ಲಿ ಉಚಿತ ಡಿಇಸಿ ಮಾತ್ರೆಗಳ ವಿತರಣಾ ಕಾರ್ಯಕ್ರಮವು ಮಂಗಳವಾರ ಸಿಂಧನೂರು ತಾಲೂಕು ಆಸ್ಪತ್ರೆಯಲ್ಲಿ ಮಾತ್ರೆಗಳನ್ನು ಸೇವಿಸುವುದರ ಮೂಲಕ ಆನೆಕಾಲು ನಿರ್ಮೂಲನೆ ಕಾರ್ಯಕ್ರಮಕ್ಕೆ ಚಾಲನೆ ನೀಡಲಾಯಿತು ಎಂದು ತಾಲೂಕು ಆರೋಗ್ಯಾಧಿಕಾರಿ ಡಾ. ಸೈಯದ್ ಹಸನ್ ಹುಸೇನಿ ತಿಳಿಸಿದ್ದಾರೆ.
ತಾಲೂಕಿನ ಪ್ರಾಥಮಿಕ ಆರೋಗ್ಯ ಕೇಂದ್ರ ಹಾಗೂ ನಗರ ಆರೋಗ್ಯ ಕೇಂದ್ರಗಳಲ್ಲಿ ತಾಲೂಕು ಆಸ್ಪತ್ರೆಯಲ್ಲಿ ಎರಡು ವರ್ಷದಿಂದ 5 ವರ್ಷ ವಯಸ್ಸಿನವರಿಗೆ 1 ಮಾತ್ರೆ, 6 ವರ್ಷದಿಂದ 14 ವರ್ಷ ವಯಸ್ಸಿನವರಿಗೆ 2 ಮಾತ್ರೆ, 15 ವರ್ಷ ಮೇಲ್ಪಟ್ಟವರಿಗೆ 3 ಮಾತ್ರೆ ವಿತರಿಸಲಾಯಿತು. ಜೊತೆಗೆ ಪ್ರತಿಯೊಬ್ಬರಿಗೂ ಒಂದು ಚೀಪಬಹುದಾದ ಅಲ್ಬೆಂಡಜೋಲ್ ಮಾತ್ರೆ ವಿತರಿಸಲಾಯಿತು.
ಈ ಕಾರ್ಯಕ್ರಮದಲ್ಲಿ ಡಾ. ಸೈಯದ್ ಹಸನ್ ಹುಸೇನಿ, ಡಾ. ಕರವೀರಪ್ರಭು ಕ್ಯಾಲ್ಕೊಂಡ, ಹಿ.ಆ.ಸ ಪಿ.ವೆಂಕಟೇಶ (ಪು), ಎ.ಐ.ಪಾಟೀಲ್ ಹಿ.ಆ.ಸ(ಮ), ಈಶ್ವರ ಎಚ್. ದಾಸಪ್ಪನವರ ಕ್ಷೇತ್ರ ಆರೋಗ್ಯ ಶಿಕ್ಷಣಾಧಿಕಾರಿಗಳು, ವಿದ್ಯಾರ್ಥಿಗಳು, ಸ್ಥಳೀಯ ಮುಖಂಡರು ಕಾರ್ಯಕ್ರಮದಲ್ಲಿ ಭಾಗವಹಿಸಿ ಆನೆಕಾಲು ಮಾತ್ರೆ ಸೇವಿಸುವುದರೊಂದಿಗೆ ಕಾರ್ಯಕ್ರಮ ಯಶಸ್ವಿಗೊಳಿಸಿದರು.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Advertisement