ಹೈ-ಕ 6 ಜಿಲ್ಲೆಗಳ ಉತ್ತಮ ವಿಜ್ಞಾನ ಶಿಕ್ಷಕ ಪ್ರಶಸ್ತಿ ಪ್ರದಾನ
ರಾಯಚೂರು: ನಗರದ ಜಿಲ್ಲಾ ವಿಜ್ಞಾನ ಕೇಂದ್ರದಲ್ಲಿ ಇತ್ತೀಚೆಗೆ ನಡೆದ ಸಮಾರಂಭದಲ್ಲಿ ಹೈ.ಕ. ಭಾಗದ ಆರು ಜಿಲ್ಲೆಗಳ ಉತ್ತಮ ವಿಜ್ಞಾನ ಶಿಕ್ಷಕ ಪ್ರಶಸ್ತಿ ಹಾಗೂ ಅತೀ ಹೆಚ್ಚು ಅಂಕಗಳಿಸಿದ ವಿದ್ಯಾರ್ಥಿಗಳ ಸನ್ಮಾನ ಸಮಾರಂಭ ಆಯೋಜಿಸಲಾಗಿತ್ತು.
ಸಮಾರಂಭದಲ್ಲಿ ಗುಲ್ಬರ್ಗ ಜಿಲ್ಲೆಯ ಚಿಂಚೋಳಿ ತಾಲೂಕಿನ ಭೂಂಯಾರ್ ಗ್ರಾಮದ ಸರ್ಕಾರಿ ಪ್ರೌಢಶಾಲೆಯ ಶಿಕ್ಷಕ ಶಂಕ್ರೆಪ್ಪ ಹೊಸದೊಡ್ಡಿ, ಬೀದರ್ ಜಿಲ್ಲೆ ಹುಮನಾಬಾದ್ ತಾಲೂಕಿನ ಚಿಟಗುಪ್ಪದ ಬಾಲಕರ ಸರ್ಕಾರಿ ಪ್ರೌಢಶಾಲೆಯ ಶಿಕ್ಷಕ ಗುಂಡಪ್ಪ ಹುಡಗೆ, ಕೊಪ್ಪಳ ಜಿಲ್ಲೆ ಗಂಗಾವತಿ ತಾಲೂಕಿನ ಚಿಕ್ಕಡಂಕನಕಲ್ ಗ್ರಾಮದ ಪೊಲೀಸ್ ಪಾಟೀಲ್ ಸರ್ಕಾರಿ ಪ್ರೌಢಶಾಲೆಯ ಶಿಕ್ಷಕ ಸಿದ್ಧಲಿಂಗೇಶ್ವರ ಪೂಲಭಾವಿ, ಯಾದಗಿರಿಯ ಸರ್ಕಾರಿ ಪಪೂ ಕಾಲೇಜಿನ ಶಿಕ್ಷಕ ಹನುಮಯ್ಯ ಕಲಾಲ್, ಬಳ್ಳಾರಿ ಜಿಲ್ಲೆಯ ಹೊಸಪೇಟೆಯ ಸರ್ಕಾರಿ ಪಪೂ ಕಾಲೇಜಿನ ಶಿಕ್ಷಕ ಪ್ರಭುರಾಜ ಪಾಟೀಲ್, ಮಾನವಿಯ ಕಲ್ಮಠದ ಎಸ್.ಎಸ್. ಕೆ. ಕಾಲೇಜಿನ ಶಿಕ್ಷಕ ಟಿ. ಶಿವಕುಮಾರ ಉತ್ತಮ ವಿಜ್ಞಾನ ಶಿಕ್ಷಕ ಪ್ರಶಸ್ತಿ ಪ್ರದಾನ ಮಾಡಲಾಯಿತು.