ಚುನಾವಣೆಗೆ 28 ಬಸ್: ವೆಂಕಟೇಶ್ವರ ರೆಡ್ಡಿ
ರಾಯಚೂರು: ಜಿಲ್ಲೆಯಲ್ಲಿ ಮಾ.7ರಂದು ನಡೆಯುವ ನಗರ ಮತ್ತು ಸ್ಥಳೀಯ ಸಂಸ್ಥೆಯ ಚುನಾವಣೆಗೆ ಒಟ್ಟು 28 ಬಸ್ ಗಳನ್ನು ಒದಗಿಸಲಾಗಿದೆ ಎಂದು ಸಾರಿಗೆ ಸಂಸ್ಥೆಯ ವಿಭಾಗೀಯ ನಿಯಂತ್ರಣಾಧಿಕಾರಿ ವೆಂಕಟೇಶ್ವರ ರೆಡ್ಡಿ ತಿಳಿಸಿದ್ದಾರೆ.
ಈ ಕುರಿತು 'ಕನ್ನಡಪ್ರಭ' ಜೊತೆ ಮಾತನಾಡಿದ ಅವರು, ಮತದಾನ ಕಾರ್ಯಕ್ಕಾಗಿ ಸಿಬ್ಬಂದಿಯನ್ನು ಕರೆದೊಯ್ಯಲು 28 ಬಸ್‌ಗಳನ್ನು ಒದಗಿಸಲಾಗಿದೆ. ಆದರೆ ಅದರಿಂದ ಪ್ರಯಾಣಿಕರ ಸಂಚಾರಕ್ಕೆ ಯಾವುದೇ ತೊಂದರೆಯಾಗದು ಎಂದು ಸ್ಪಷ್ಟಪಡಿಸಿದರು. ಸಾರಿಗೆ ಸಂಸ್ಥೆಯಲ್ಲಿ ಹೆಚ್ಚುವರಿಯಾಗಿರುವ ಬಸ್‌ಗಳನ್ನು ಚುನಾವಣೆ ಕಾರ್ಯಕ್ಕೆ ಪಡೆದಿರುವುದರಿಂದ ಪ್ರಯಾಣಿಕರು ನಿರಾತಂಕವಾಗಿ ಸಂಚರಿಸಬಹುದಾಗಿದೆ. ಅದೇ ರೀತಿ ಶಿವರಾತ್ರಿ ಹಿನ್ನೆಲೆ ಶ್ರೀಶೈಲಂಗೆ ತೆರಳಲು ಹೊಸ ಬಸ್‌ಗಳ ವ್ಯವಸ್ಥೆ ಮಾಡಲಾಗಿದೆ ಎಂದು ತಿಳಿಸಿದರು.