ರಾಜ್ಯದೇಶರಾಜಕೀಯಕ್ರಿಕೆಟ್ವಿದೇಶವಾಣಿಜ್ಯ
ಸಿನಿಮಾ▾
ಅಂಕಣಗಳು
⋮
ರಾಯಚೂರು

ದೋಷಪೂರಿತ ಮತದಾರರ ಪಟ್ಟಿ: ಶೀಘ್ರವೇ ಚು. ಆಯೋಗಕ್ಕೆ ದೂರು

Lingaraj Badiger
Updated On : 8 Mar 2013, 10:59 am

ಕ.ಪ್ರ. ವಾರ್ತೆ, ರಾಯಚೂರು, ಮಾ.7
ಸ್ಥಳೀಯ ನಗರಸಭೆಯ ಚುನಾವಣೆಯ ಮತದಾರರ ಪಟ್ಟಿಯಿಂದ ಅರ್ಹ ಮತದಾರರ ಹೆಸರು ನಾಪತ್ತೆಯಾಗಿರುವ ಪ್ರಕರಣಕ್ಕೆ ಸಂಬಂಧಿಸಿ ರಾಜ್ಯ ಚುನಾವಣೆ ಆಯೋಗಕ್ಕೆ ಶೀಘ್ರ ದೂರು ಸಲ್ಲಿಸುವುದಾಗಿ ಬಿಜೆಪಿ ಜಿಲ್ಲಾಧ್ಯಕ್ಷ ಬಸನಗೌಡ ಬ್ಯಾಗವಾಟ್ ತಿಳಿಸಿದರು.
ನಗರದಲ್ಲಿ ಗುರುವಾರ 'ಕನ್ನಡಪ್ರಭ'ದೊಂದಿಗೆ ಮಾತನಾಡಿ, ಸಾವಿರಾರು ಸಂಖ್ಯೆಯ ಮತದಾರರು ಮತದಾನದ ಹಕ್ಕಿನಿಂದ ವಂಚಿತರಾಗಿದ್ದಾರೆ. ಇದಕ್ಕೆ ಜಿಲ್ಲಾಡಳಿತವೇ ನೇರ ಹೊಣೆಯಾಗಿದೆ. ಹೆಸರು ಕೈಬಿಟ್ಟಿರುವುದರ ಹಿಂದಿನ ಉದ್ದೇಶವಾದರೂ ಏನು ಎಂಬುದನ್ನು ಜಿಲ್ಲಾಡಳಿತ ಸ್ಪಷ್ಟಪಡಿಸಬೇಕಿದೆ ಎಂದು ಆಗ್ರಹಿಸಿದರು.
ಪ್ರತಿಯೊಂದೂ ಮತಗಟ್ಟೆಯಲ್ಲಿ ನೂರಾರು ಸಂಖ್ಯೆಯ ಮತದಾರರು ಮತದಾನ ಮಾಡಲು ಸಾಧ್ಯವಾಗಿಲ್ಲ. ದೋಷಪೂರಿತ ಮತದಾರರ ಪಟ್ಟಿಯಿಂದಾಗಿ ಚುನಾವಣೆ ಪ್ರಕ್ರಿಯೆಗೆ ತೀವ್ರ ಹಿನ್ನಡೆಯಾಗಿದೆ.
ಜಿಲ್ಲಾಡಳಿತದ ಕಾರ್ಯವೈಖರಿಯೇ ಅನುಮಾನಕ್ಕೆ ದಾರಿ ಮಾಡಿದೆ. ಈ ಹಿನ್ನೆಲೆಯಲ್ಲಿ ಪಕ್ಷಕ್ಕೆ ಈ ಮೊದಲು ಒದಗಿಸಿರುವ ಮತದಾರರ ಪಟ್ಟಿ ಹಾಗೂ ಹೊಸದಾಗಿ ಮತದಾರರ ಪಟ್ಟಿ ಪಡೆದು ರಾಜ್ಯ ಚುನಾವಣೆ ಆಯೋಗಕ್ಕೆ ಶೀಘ್ರದಲ್ಲಿಯೇ ದೂರು ಸಲ್ಲಿಸುವುದಾಗಿ ತಿಳಿಸಿದರು.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Advertisement