ಅಂತಾರಾಷ್ಟ್ರೀಯ ಮಹಿಳಾ ದಿನಾಚರಣೆ
ರಾಯಚೂರು: ಮಹಿಳೆಯರು ದೇಶದ ಎಲ್ಲ ರಂಗಗಳಲ್ಲಿ ಪ್ರಗತಿ ಸಾಧಿಸುವ ನಿಟ್ಟಿನಲ್ಲಿ ತೊಡಗಿಸಿಕೊಳ್ಳುವಂತೆ ಹಿರಿಯ ಶಿಕ್ಷಕಿ ಸುಶೀಲಾ ಕರೆ ನೀಡಿದರು. ಅವರು ಭಾರತ ಸೇವಾ ದಳ, ನೆಹರು ಯುವ ಕೇಂದ್ರವತಿಯಿಂದ ನಗರದ ಗಾಜಗಾರಪೇಟೆ ಸರ್ಕಾರಿ ಪ್ರೌಢಶಾಲೆಯಲ್ಲಿ ಈಚೆಗೆ ಆಯೋಜಿಸಿದ್ದ ಮಹಿಳಾ ದಿನಾಚರಣೆ ಸಮಾರಂಭದ ಅಧ್ಯಕ್ಷತೆ ವಹಿಸಿ ಮಾತನಾಡಿದರು.
ಸಮಾರಂಭದಲ್ಲಿ ಭಾರತ ಸೇವಾ ದಳದ ಜಿಲ್ಲಾ ಸಂಘಟಕ ವಿದ್ಯಾಸಾಗರ್ ಚಿಣಮಗೇರಿ, ಯುವರೆಡ್ ಕ್ರಾಸ್ ಘಟಕದ ಸಂಚಾಲಕ ಅತಾವುಲ್ಲಾ ವಕೀಲರು, ರಾಮಯ್ಯ ನಾಯಕ ವಕೀಲರು,ಮುಖ್ಯ ಗುರು ಜುಹರಾ ಸುಲ್ತಾನಾ ಮತ್ತಿತರರು ಇದ್ದರು. ಶಾಲೆಯ ಬೋಧಕ ವರ್ಗ ಮತ್ತು ವಿದ್ಯಾರ್ಥಿಗಳು ಪಾಲ್ಗೊಂಡಿದ್ದರು.
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.