ರಾಜ್ಯದೇಶರಾಜಕೀಯಕ್ರಿಕೆಟ್ವಿದೇಶವಾಣಿಜ್ಯ
ಸಿನಿಮಾ▾
ಅಂಕಣಗಳು
⋮
ರಾಯಚೂರು

ಮತದಾರರ ಪಟ್ಟಿ ಗೊಂದಲ: ನ್ಯಾಯಾಂಗ ತನಿಖೆಗೆ ಆಗ್ರಹ

Parashurama
Updated On : 10 Mar 2013, 11:57 am

ರಾಯಚೂರು: ನಗರಸಭೆಗೆ ಇತ್ತೀಚೆಗೆ ನಡೆದ ಚುನಾವಣೆಯ ವೇಳೆ ಮತದಾರರ ಹೆಸರುಗಳನ್ನು ವಿನಾಕಾರಣ ಪಟ್ಟಿಯಿಂದ ತೆಗೆದು ಹಾಕಿರುವುದು ಪೂರ್ವ ನಿಯೋಜಿತ ಸಂಚು ಆಗಿದ್ದು, ಅಧಿಕಾರಿಗಳು ಈ ನಿಟ್ಟಿನಲ್ಲಿ ಅಧಿಕಾರಿಗಳೊಂದಿಗೆ ಕೈಜೋಡಿಸಿ ಇಂಥ ಕೃತ್ಯ ಎಸಗಿದ್ದಾರೆ. ಈ ಬಗ್ಗೆ ನ್ಯಾಯಾಂಗ ತನಿಖೆಗೆ ಆದೇಶಿಸುವಂತೆ ಜಿಲ್ಲಾ ಕಾಂಗ್ರೆಸ್‌ನ ಹಿರಿಯ ನಾಯಕ ಪಾರಸಮಲ್ ಸುಖಾಣಿ ಸರ್ಕಾರವನ್ನು ಒತ್ತಾಯಿಸಿದ್ದಾರೆ.
ಈ ಕುರಿತು ಜಿಲ್ಲಾಧಿಕಾರಿಗೆ ದೂರು ನೀಡಿರುವ ಅವರು, ನಗರಸಭೆಯ ಚುನಾವಣೆಯಲ್ಲಿ ಸುಮಾರು 20 ಸಾವಿರಕ್ಕೂ ಹೆಚ್ಚಿನ ಸಂಖ್ಯೆಯ ಮತದಾರರ ಹೆಸರುಗಳನ್ನು ಆಧಾರವಿಲ್ಲದೇ ಪಟ್ಟಿಯಿಂದ ಕೈಬಿಡಲಾಗಿದೆ. ಅದರಿಂದ ಅನೇಕರು ಮತದಾನದಿಂದ ವಂಚಿತರಾಗಿದ್ದಾರೆಂದು ದೂರಿದ್ದಾರೆ.
ಪ್ರತಿ ಮತದಾನ ಕೇಂದ್ರದಲ್ಲಿ 500 ರಿಂದ 600 ಮತದಾರರ ಹೆಸರುಗಳು ನಾಪತ್ತೆಯಾಗಿರುವುದು ಆಘಾತಕಾರಿ ಸಂಗತಿ. ಮೃತರ ಹೆಸರನ್ನು ಮತದಾರರ ಪಟ್ಟಿಯಲ್ಲಿ ಮುಂದುವರಿಸಿದ್ದು, ಜೀವಂತವಾಗಿರುವ ಮತದಾರರ ಹೆಸರು ಪಟ್ಟಿಯಿಂದ ಕಿತ್ತು ಹಾಕಿರುವುದು ಅತಿರೇಕದ ಪರಮಾವಧಿ ಎಂದು ಟೀಕಿಸಿದ್ದಾರೆ.
ಪ್ರಜಾಪ್ರಭುತ್ವ ವ್ಯವಸ್ಥೆಯಲ್ಲಿ ಮತದಾನ ಎಂಬುದು ಪವಿತ್ರವಾದ ಕಾರ್ಯ. ಮತದಾನ ಪ್ರಕ್ರಿಯೆ ಪಾರದರ್ಶಕ ವಾಗಿರುವುದು ಅವಶ್ಯಕ. ಆದರೆ ನಗರಸಭೆಯ ಚುನಾವಣೆಯಲ್ಲಿ ಮತದಾರರ ಹೆಸರು ನಾಪತ್ತೆಯಾಗಿಸುವ ಮೂಲಕ ಅಧಿಕಾರಿಗಳು ಅಕ್ರಮದಲ್ಲಿ ಶಾಮೀಲಾಗಿದ್ದಾರೆ. ರಾಜ್ಯ ಸರ್ಕಾರ ಕೂಡಲೇ ಈ ನಿಟ್ಟಿನಲ್ಲಿ ನ್ಯಾಯಾಂಗ ತನಿಖೆಗೆ ಮುಂದಾಗಬೇಕೆಂದು ಒತ್ತಾಯಿಸಿದ್ದಾರೆ.
ಮುಂದಿನ ದಿನಗಳಲ್ಲಿ ನಡೆಯಲಿರುವ ವಿಧಾನಸಭೆಯ ಚುನಾವಣೆ ವೇಳೆಗೆ ದೋಷಪೂರಿತ ಮತದಾರರ ಪಟ್ಟಿ ಸರಿಪಡಿಸಬೇಕು. ಮತದಾರರ ಪಟ್ಟಿ ಪರಿಷ್ಕರಣೆ ಮೂಲಕ ಪಟ್ಟಿಯಲ್ಲಿ ತೆಗೆದು ಹಾಕಿದ ಮತದಾರರ ಹೆಸರುಗಳ ಪುನಾ ಸೇರ್ಪಡೆಗೆ ಆಡಳಿತ ಕೂಡಲೇ ಕ್ರಮ ಕೈಗೊಳ್ಳಬೇಕೆಂದು ಅವರು ಆಗ್ರಹಿಸಿದ್ದಾರೆ.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Advertisement

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.

Show comments