ಮಾನವಿ: ಮತ ಎಣಿಕೆಗೆ ಸಕಲ ಸಿದ್ಧತೆ
ರಾಯಚೂರು: ಮಾನವಿ ಪುರಸಭೆಗೆ ಈಚೆಗೆ ನಡೆದ ಚುನಾವಣೆಯ ಮತಗಳ ಎಣಿಕೆ ಕಾರ್ಯ ಮಾ.11ರಂದು ನಡೆಯಲಿದೆ. ಅದಕ್ಕಾಗಿ ಅಗತ್ಯ ಸಿದ್ಧತೆ ಮಾಡಿಕೊಳ್ಳಲಾಗಿದೆ ಎಂದು ಚುನಾವಣಾಧಿಕಾರಿ ಹಾಗೂ ತಹಸೀಲ್ದಾರ್ ಎಂ. ಗಂಗಪ್ಪ ಕಲ್ಲೂರು ತಿಳಿಸಿದರು.
ಅವರು ಈ ಕುರಿತು ಸುದ್ದಿಗಾರರೊಂದಿಗೆ ಮಾತನಾಡಿ, ಮಾ.11ರಂದು ಪಟ್ಟಣದ ಹೊರವಲಯದ ಸರ್ಕಾರಿ ಪದವಿ ಕಾಲೇಜಿನಲ್ಲಿ ಬೆಳಗ್ಗೆ 8ಕ್ಕೆ ಮತಗಳ ಎಣಿಕೆ ಕಾರ್ಯ ಆರಂಭವಾಗಲಿದೆ. ಮತ ಎಣಿಕೆಗೆ 3 ಕೊಠಡಿಗಳನ್ನು ನಿಗದಿಪಡಿಸಲಾಗಿದೆ ಎಂದು ತಿಳಿಸಿದರು.
ನಿಯೋಜನೆ: ಮತಗಳ ಎಣಿಕೆ ನಡೆಯುವ ಪ್ರತಿ ಕೊಠಡಿಯಲ್ಲಿ ಒಬ್ಬ ಚುನಾವಣಾಧಿಕಾರಿ, ಒಬ್ಬ ಮೇಲ್ವಿಚಾರಕ, ಒಬ್ಬ ಸಹಾಯಕ ಹಾಗೂ ಒಬ್ಬ ಲೆಕ್ಕ ಪರಿಶೋಧಕರನ್ನು ನಿಯೋಜಿಸಲಾಗಿದೆ. ಚುನಾವಣಾಧಿಕಾರಿ ವಿನೋದಕುಮಾರ ಗುಪ್ತ, ಅನಿಲ್ ರಾಜ್, ಕಲ್ಲಪ್ಪ ಸೇರಿದಂತೆ ಇತರೆ 9 ಜನ ಸಿಬ್ಬಂದಿ ಎಣಿಕೆ ಕಾರ್ಯ ನಿರ್ವಹಿಸಲಿದ್ದಾರೆಂದು ತಿಳಿಸಿದರು.
ಎಣಿಕೆ ವೇಳೆ ಪ್ರತಿ ಅಭ್ಯರ್ಥಿ ಅಥವಾ ಅಭ್ಯರ್ಥಿಗಳ ಪರವಾಗಿ ಒಬ್ಬರನ್ನು ಏಜೆಂಟರೆಂದು ಎಣಿಕೆ ಕೇಂದ್ರದಲ್ಲಿ ಪ್ರವೇಶಿಸಲು ಅವಕಾಶ ಕಲ್ಪಿಸಲಾಗುತ್ತದೆ. ಮತ ಎಣಿಕೆ ಒಂದನೇ ಕೊಠಡಿಯಲ್ಲಿ 1ನೇ ವಾರ್ಡಿನಿಂದ 8ನೇ ವಾರ್ಡ್ವರೆಗೆ ಮತಗಳ ಎಣಿಕೆ ನಡೆಯಲಿದೆ.
2ನೇ ಕೊಠಡಿಯಲ್ಲಿ 9ನೇ ವಾರ್ಡಿನಿಂದ 16ನೇ ವಾರ್ಡ್ವರೆಗೆ ಹಾಗೂ 3ನೇ ಕೊಠಡಿಯಲ್ಲಿ 17ನೇ ವಾರ್ಡಿನಿಂದ 23ನೇ ವಾರ್ಡಿನ ಮತಗಳ ಎಣಿಕೆ ಕಾರ್ಯ ನಡೆಯಲಿದೆ. ಒಟ್ಟು 9 ಸುತ್ತಿನ ಮತಗಳ ಎಣಿಕೆ ನಡೆಯಲಿದೆ ಎಂದು ಅವರು ತಿಳಿಸಿದರು.
Disclaimer : ಕಾಮೆಂಟ್ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.