ರಾಜ್ಯದೇಶರಾಜಕೀಯಕ್ರಿಕೆಟ್ವಿದೇಶವಾಣಿಜ್ಯ
ಸಿನಿಮಾ▾
ಅಂಕಣಗಳು
⋮
ರಾಯಚೂರು

ಇಂದಿನಿಂದ ಕಾರ್ಯಾಗಾರ

Lingaraj Badiger
Updated On : 14 Mar 2013, 11:00 am

ರಾಯಚೂರು: ಜಿಲ್ಲಾಮಟ್ಟದ ಎರಡು ದಿನಗಳ ದೈಹಿಕ ಶಿಕ್ಷಣ ಶಿಕ್ಷಕರ ಬಲವರ್ಧನೆ ಹಾಗೂ ಅಭಿವೃದ್ಧಿ ಕಾರ್ಯಾಗಾರವನ್ನು ಮಾ.14ರಂದು ಆಯೋಜಿಸಲಾಗಿದೆ. ಅಂದು ನಗರದ ರಂಗಮಂದಿರದಲ್ಲಿ ಬೆಳಗ್ಗೆ 10.30ಕ್ಕೆ ಜಿಲ್ಲಾ ಉಸ್ತುವಾರಿ ಸಚಿವ ಆನಂದ ಅಸ್ನೋಟಿಕರ್ ಕಾರ್ಯಾಗಾರ ಉದ್ಘಾಟಿಸಲಿದ್ದಾರೆ. ಅಧ್ಯಕ್ಷತೆಯನ್ನು ಶಾಸಕ ಸೈಯದ್ ಯಾಸೀನ್ ವಹಿಸುವರು. ಮುಖ್ಯ ಅತಿಥಿಗಳಾಗಿ ಜಿಪಂ ಅಧ್ಯಕ್ಷ ಲಲಿತಮ್ಮ, ಸಂಸದರಾದ ಸಣ್ಣಪಕೀರಪ್ಪ, ಶಿವರಾಮೇಗೌಡ ಸೇರಿದಂತೆ ಜಿಲ್ಲೆಯ ಶಾಸಕರು ಹಾಗೂ ಶಿಕ್ಷಣ ಇಲಾಖೆಯ ಅಧಿಕಾರಿಗಳು ಪಾಲ್ಗೊಳ್ಳಲಿದ್ದಾರೆ. ಕಾರ್ಯಾಗಾರದ ಸಮಾರೋಪ ಸಮಾರಂಭವು ಮಾ.15ರಂದು ಮಧ್ಯಾಹ್ನ 3.30ಕ್ಕೆ ನಡೆಯಲಿದ್ದು, ಡಿಡಿಪಿಐ ಪರಮೇಶ್ ಅಧ್ಯಕ್ಷತೆ ವಹಿಸುವರು. ಗುಲ್ಬರ್ಗದ ಸಾರ್ವಜನಿಕ ಶಿಕ್ಷಣ ಇಲಾಖೆಯ ಅಪರ ಆಯುಕ್ತ ಅಬ್ದುಲ್ ರಬ್, ಡಯಟ್ ಉಪನಿರ್ದೇಶಕ ಕೆಂಚೇಗೌಡ ಸೇರಿದಂತೆ ಜಿಲ್ಲೆಯ ಎಲ್ಲ ಬಿಇಒಗಳು ಭಾಗವಹಿಸಲಿದ್ದಾರೆಂದು ಜಿಲ್ಲಾ ಮತ್ತು ತಾಲೂಕು ದೈಹಿಕ ಶಿಕ್ಷಣ ಶಿಕ್ಷಕರ ಸಂಘ ತಿಳಿಸಿದೆ.
ನಾಳೆ ಹೊರಗುತ್ತಿಗೆ ನೌಕರರ ಸಮಾವೇಶ
ರಾಯಚೂರು: ನಗರದಲ್ಲಿ ಮಾ.15ರಂದು ಆರೋಗ್ಯ ಇಲಾಖೆಯ ವಾಹನ ಚಾಲಕರು ಮತ್ತು ಡಿ ಗ್ರೂಪ್ ನಾನ್ ಕ್ಲಿನಿಕಲ್ ಹೊರಗುತ್ತಿಗೆ ನೌಕರರ ಜಿಲ್ಲಾ ಸಮಾವೇಶ ಆಯೋಜಿಸಲಾಗಿದೆ. ಅಂದು ಬೆಳಗ್ಗೆ 10.30ಕ್ಕೆ ನಗರದ ಸ್ಪಂದನ ಸಭಾಭವನದಲ್ಲಿ ನಡೆಯುವ ಜಿಲ್ಲಾ ಸಮಾವೇಶದಲ್ಲಿ ಎಐಯುಟಿಯುಸಿ ರಾಜ್ಯಾಧ್ಯಕ್ಷ ಕೆ.ರಾಧಾಕೃಷ್ಣ ಮಾತನಾಡಲಿದ್ದಾರೆ. ಸಮಾವೇಶದ ಅಧ್ಯಕ್ಷತೆಯನ್ನು ಸಂಘದ ಅಧ್ಯಕ್ಷ ಎನ್.ಎಸ್.ವೀರೇಶ್ ವಹಿಸುವರು ಎಂದು ಸಂಘದ ಪ್ರಕಟಣೆ ತಿಳಿಸಿದ್ದು, ಸಮಾವೇಶದಲ್ಲಿ ಆರೋಗ್ಯ ಇಲಾಖೆಯ ಸಿಬ್ಬಂದಿ ಪಾಲ್ಗೊಳ್ಳುವಂತೆ ಮನವಿ ಮಾಡಿದ್ದಾರೆ.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Advertisement