ಜಿಲ್ಲಾದ್ಯಂತ ದ್ವಿತೀಯ ಪಿಯು ಪರೀಕ್ಷೆ ಶುರು
ರಾಯಚೂರು: ಜಿಲ್ಲೆಯಲ್ಲಿ ಬುಧವಾರದಿಂದ ದ್ವಿತೀಯ ಪಿಯುಸಿ ಪರೀಕ್ಷೆ ಆರಂಭಗೊಂಡಿದ್ದು, ಮೊದಲ ದಿನ ಒಟ್ಟು 734 ವಿದ್ಯಾರ್ಥಿಗಳು ಪರೀಕ್ಷೆಗೆ ಗೈರು ಹಾಜರಾಗಿದ್ದರು.
ನಗರ ಸೇರಿದಂತೆ ಜಿಲ್ಲಾದ್ಯಂತ ವಿವಿಧೆಡೆ ನಡೆದ ಇತಿಹಾಸ ವಿಷಯದ ಪರೀಕ್ಷೆಗೆ ಒಟ್ಟು 9523 ವಿದ್ಯಾರ್ಥಿಗಳ ನೋಂದಣಿ ಮಾಡಿಕೊಂಡಿದ್ದು, ಅದರಲ್ಲಿ 8822 ವಿದ್ಯಾರ್ಥಿಗಳು ಪರೀಕ್ಷೆ ಬರೆದರು. 701 ವಿದ್ಯಾರ್ಥಿಗಳು ಗೈರು ಹಾಜರಾದರು. ಅದೇ ರೀತಿ ಕಂಪ್ಯೂಟರ್ ಸೈನ್ಸ್ ವಿಷಯದ ಪರೀಕ್ಷೆಗೆ ಒಟ್ಟು 738 ವಿದ್ಯಾರ್ಥಿಗಳು ನೋಂದಣಿ ಮಾಡಿದ್ದು, ಅದರಲ್ಲಿ 705 ವಿದ್ಯಾರ್ಥಿಗಳು ಪರೀಕ್ಷೆಗೆ ಹಾಜರಾದರು. 33 ಜನ ವಿದ್ಯಾರ್ಥಿಗಳು ಪರೀಕ್ಷೆಗೆ ಹಾಜರಾಗಲಿಲ್ಲ. ಜಿಲ್ಲೆಯಲ್ಲಿ ಯಾವುದೇ ವಿದ್ಯಾರ್ಥಿ ಪರೀಕ್ಷೆಯ ವೇಳೆ ಡಿಬಾರ್ ಆಗಿಲ್ಲ ಎಂದು ಡಿಡಿಪಿಯು ಇಲಾಖೆ ತಿಳಿಸಿದೆ.