ವಿವಿಧ ಅಭಿವೃದ್ಧಿ ಕಾಮಗಾರಿಗೆ ಚಾಲನೆ
ಸಿಂಧನೂರು: ತಾಲೂಕಿನ ನಾರಾಯಣನಗರ ಕ್ಯಾಂಪ್ನಿಂದ ಹಾಲಾಪುರ ಗ್ರಾಮಕ್ಕೆ ಸಂಪರ್ಕ ಕಲ್ಪಿಸುವ ರಸ್ತೆ ಕಾಮಗಾರಿ, ಸಮುದಾಯ ಭವನ ಮತ್ತಿತರ ಅಭಿವೃದ್ಧಿ ಕಾಮಗಾರಿಗೆ ಮಸ್ಕಿ ಶಾಸಕ ಪ್ರತಾಪಗೌಡ ಪಾಟೀಲ್ ಚಾ ಲನೆ ನೀಡಿದರು.
ಅವರು ಈ ಹಿಂದೆ ನೀಡಿದ ಭರವಸೆಯಂತೆ ಅಭಿವೃದ್ಧಿ ಕಾಮಗಾರಿಗಳನ್ನು ಕೈಗೊಳ್ಳಲಾಗುತ್ತಿದೆ. ಜನರ ವಾಸ್ತವ ಸಮಸ್ಯೆಗಳನ್ನು ಅರಿತು ಶಾಶ್ವತ ಪರಿಹಾರದ ದೃಷ್ಟಿಯಿಂದ ಕಾರ್ಯ ನಿರ್ವಹಿಸುವುದಾಗಿ ಅವರು ಹೇಳಿದರು. ಬೇಸಿಗೆಯಲ್ಲಿ ಕುಡಿಯುವ ನೀರಿನ ಸಮಸ್ಯೆ ಉದ್ಬವವಾಗದಂತೆ ಬಳಗಾನೂರು ಗ್ರಾ.ಪಂ.ವ್ಯಾಪ್ತಿಯಲ್ಲಿ ಕ್ರಮ ಕೈಗೊಳ್ಳುವಂತೆ ಅಧಿಕಾರಿಗಳಿಗೆ ಸೂಚಿಸುವುದಾಗಿ ಭರವಸೆ ನೀಡಿದರು.
ಈ ಸಂದರ್ಭದಲ್ಲಿ ಯುವ ಮುಖಂಡ ವಿರುಪಣ್ಣ ಗುತ್ತೇದಾರ, ಎಪಿಎಂಸಿ ಮಾಜಿ ನಿರ್ದೇಶಕ ಶೇಖರಪ್ಪ ಮೇಟಿ, ಗ್ರಾಪಂ ಉಪಾಧ್ಯಕ್ಷ ಎಚ್. ಮಹಾಬಳೇಶ್ವರ, ಅಜಯಕುಮಾರ ನಾಡಗೌಡ, ಡಾ.ಬಿ.ಎಚ್. ದಿವಟರ್, ಗ್ರಾ.ಪಂ. ಸದಸ್ಯರಾದ ನಾಗರಾಜ ಕೊಂಡರೆಡ್ಡಿ, ಕುಮಾರಸ್ವಾಮಿ, ತಿಪ್ಪಣ್ಣ, ಟಿ.ಅಮರೇಶ ನಾಯಕ, ಸುಬ್ಬಾರಾವ್ ಇನ್ನಿತರರು ಇದ್ದರು.