ರಾಜ್ಯದೇಶರಾಜಕೀಯಕ್ರಿಕೆಟ್ವಿದೇಶವಾಣಿಜ್ಯ
ಸಿನಿಮಾ▾
ಅಂಕಣಗಳು
⋮
ರಾಯಚೂರು

ವಿವಿಧೆಡೆ ಪರೀಕ್ಷೆ ಸುಲಲಿತ

Lingaraj Badiger
Updated On : 14 Mar 2013, 11:00 am

ಲಿಂಗಸ್ಗೂರು: ತಾಲೂಕಿನಲ್ಲಿ ಪದವಿ ಪೂರ್ವ ಪರೀಕ್ಷೆಗಳು ಆರಂಭಗೊಂಡಿದ್ದು, ಪ್ರಥಮ ದಿನವಾದ ಬುಧವಾರ ಇತಿಹಾಸ ವಿಷಯದ ಪರೀಕ್ಷೆಗೆ ಒಟ್ಟು 2400 ವಿದ್ಯಾರ್ಥಿಗಳು ಹಾಜರಾಗಿದ್ದರು.
ಲಿಂಗಸ್ಗೂರು ಪಟ್ಟಣದಲ್ಲಿ 3 ಪರೀಕ್ಷಾ ಕೇಂದ್ರಗಳು, ಮುದಗಲ್, ಮಸ್ಕಿ ಮತ್ತು ಹಟ್ಟಿಯಲ್ಲಿ ತಲಾ ಒಂದು ಪರೀಕ್ಷೆ ಕೇಂದ್ರದ ವ್ಯವಸ್ಥೆ ಕಲ್ಪಿಸಲಾಗಿತ್ತು. ಲಿಂಗಸ್ಗೂರು ಪಟ್ಟಣದ ಸರ್ಕಾರಿ ಪದವಿ ಪೂರ್ವ ಕಾಲೇಜು ಪರೀಕ್ಷಾ ಕೇಂದ್ರದಲ್ಲಿ ಒಟ್ಟು 406 ನೋಂದಣಿ ಪೈಕಿ 379 ವಿದ್ಯಾರ್ಥಿಗಳು ಪರೀಕ್ಷೆಗೆ ಹಾಜರಾಗಿದ್ದು, 27 ಜನ ಗೈರು ಹಾಜರಾಗಿದ್ದರು. ಒಳಬಳ್ಳಾರಿ ಚೆನ್ನಬಸವೇಶ್ವರ ಮಹಾವಿದ್ಯಾಲಯದ ಪರೀಕ್ಷಾ ಕೇಂದ್ರದಲ್ಲಿ ಒಟ್ಟು 334 ನೋಂದಣಿ ಪೈಕಿ 291 ವಿದ್ಯಾರ್ಥಿಗಳು ಪರೀಕ್ಷೆಗೆ ಹಾಜರಾಗಿದ್ದು, 43 ಜನ ವಿದ್ಯಾರ್ಥಿಗಳು ಗೈರು ಹಾಜರಾಗಿದ್ದರು.
ಗೈರು ಹಾಜರು: ಬಸವೇಶ್ವರ ಪದವಿ ಪೂರ್ವ ಕಾಲೇಜು ಪರೀಕ್ಷಾ ಕೇಂದ್ರದಲ್ಲಿ ಒಟ್ಟು 499 ನೋಂದಣಿ ಪೈಕಿ 474 ವಿದ್ಯಾರ್ಥಿಗಳು ಪರೀಕ್ಷೆಗೆ ಹಾಜರಾಗಿದ್ದು, 25 ವಿದ್ಯಾರ್ಥಿಗಳು ಗೈರು ಹಾಜರಾಗಿದ್ದರು.
ಮುದಗಲ್ ಪಟ್ಟಣದ ಸರ್ಕಾರಿ ಪದವಿ ಪೂರ್ವ ಕಾಲೇಜು ಪರೀಕ್ಷಾ ಕೇಂದ್ರದಲ್ಲಿ ಒಟ್ಟು 440 ನೋಂದಣಿ ಪೈಕಿ 421 ವಿದ್ಯಾರ್ಥಿಗಳು ಪರೀಕ್ಷೆಗೆ ಹಾಜರಾಗಿದ್ದು, 19 ವಿದ್ಯಾರ್ಥಿಗಳು ಗೈರು ಹಾಜರಾಗಿದ್ದರು. ಬಾಲಕರ ಸರಕಾರಿ ಪದವಿ ಪೂರ್ವ ಕಾಲೇಜು ಪರೀಕ್ಷಾ ಕೇಂದ್ರದಲ್ಲಿ ಒಟ್ಟು 516 ನೊಂದಣಿ ಪೈಕಿ 499 ವಿದ್ಯಾರ್ಥಿಗಳು ಪರೀಕ್ಷೆಗೆ ಹಾಜರಾಗಿದ್ದು, 17 ವಿದ್ಯಾರ್ಥಿಗಳು ಗೈರು ಹಾಜರಾಗಿದ್ದರು. ಹಟ್ಟಿ ಗ್ರಾಮದ ಸರಕಾರಿ ಪದವಿ ಪೂರ್ವ ಕಾಲೇಜು ಪರೀಕ್ಷಾ ಕೇಂದ್ರದಲ್ಲಿ ಒಟ್ಟು 380 ನೋಂದಣಿ ಪೈಕಿ 336 ವಿದ್ಯಾರ್ಥಿಗಳು ಗೈರು ಹಾಜರಾಗಿದ್ದು, 44 ವಿದ್ಯಾರ್ಥಿಗಳು ಗೈರು ಹಾಜರಾಗಿದ್ದರು. ಮಸ್ಕಿ ಪಟ್ಟಣದ ಸರ್ಕಾರಿ ಪದವಿ ಪೂರ್ವ ಕಾಲೇಜು ಪರೀಕ್ಷಾ ಕೇಂದ್ರದಲ್ಲಿ ಒಟ್ಟು 516 ನೊಂದಣಿ ಪೈಕಿ 499 ವಿದ್ಯಾರ್ಥಿಗಳು ಹಾಜರಾಗಿದ್ದು, 17 ವಿದ್ಯಾರ್ಥಿಗಳು ಗೈರು ಹಾಜರಾಗಿದ್ದಾರೆ.
ತಾಲೂಕಿನ ಲಿಂಗಸ್ಗೂರು, ಮುದಗಲ್, ಮಸ್ಕಿ ಮತ್ತು ಹಟ್ಟಿ ಸೇರಿದಂತೆ ಒಟ್ಟು 6 ಪರೀಕ್ಷಾ ಕೇಂದ್ರಗಳಲ್ಲಿ ಒಟ್ಟು 2575 ನೋಂದಣಿ ಪೈಕಿ 2400 ವಿದ್ಯಾರ್ಥಿಗಳು ಹಾಜರಾಗುವ ಮೂಲಕ ಪರೀಕ್ಷೆ ಬರೆದಿದ್ದು, 175 ವಿದ್ಯಾರ್ಥಿಗಳು ಪರೀಕ್ಷೆಗೆ ಗೈರು ಹಾಜರಾಗಿದ್ದರು.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Advertisement