ರಾಜ್ಯದೇಶರಾಜಕೀಯಕ್ರಿಕೆಟ್ವಿದೇಶವಾಣಿಜ್ಯ
ಸಿನಿಮಾ▾
ಅಂಕಣಗಳು
⋮
ರಾಯಚೂರು

ಉತ್ತಮ ಸಮಾಜ ನಿರ್ಮಾಣ ಹೊಣೆ ಶಿಕ್ಷಕರದ್ದು: ಉಷಾ

Lingaraj Badiger
Updated On : 16 Mar 2013, 10:53 am

ರಾಯಚೂರು: ಉತ್ತಮ ಸಮಾಜ ನಿರ್ಮಿಸುವ ಜವಾಬ್ದಾರಿ ಶಿಕ್ಷಕರ ಮೇಲಿದ್ದು, ಈ ನಿಟ್ಟಿನಲ್ಲಿ ಶಿಕ್ಷಕರು ಆತ್ಮವಿಶ್ವಾಸದಿಂದ ಕಾರ್ಯನಿರ್ವಹಸಬೇಕೆಂದು ಹಂಪಿ ಕನ್ನಡ ವಿವಿ ಪ್ರಾಧ್ಯಾಪಕಿ ಡಾ. ಉಷಾ ಹೇಳಿದರು.
ನಗರದಲ್ಲಿ ಶುಕ್ರವಾರ ಎಸ್‌ಆರ್‌ಕೆ ಶಿಕ್ಷಣ ಮಹಾವಿದ್ಯಾಲಯದಲ್ಲಿ ಆಯೋಜಿಸಿದ್ದ ವಿದ್ಯಾರ್ಥಿ ಸಂಘದ ಉದ್ಘಾಟನೆ ಮತ್ತು ಸನ್ಮಾನ ಸಮಾರಂಭಕ್ಕೆ ಚಾಲನೆ ನೀಡಿ ಮಾತನಾಡಿ, ವೃತ್ತಿಯನ್ನು ಗೌರವಿಸುವ ಹಾಗೂ ಪ್ರೀತಿಸುವ ಗುಣ ಬೆಳೆಸಿಕೊಳ್ಳಬೇಕು. ಬೃಹತ್ ಕಟ್ಟಡಗಳ ನಿರ್ಮಾಣಕ್ಕಿಂತ ಉತ್ತಮ ಸಮಾಜ ರೂಪಿಸುವ ಕಾರ್ಯ ಎಲ್ಲರಿಂದ ಆಗಬೇಕಿದೆ ಎಂದು ಹೇಳಿದರು.
ಶಿಕ್ಷಕರು ಸಮಾಜದ ಸವಾಲುಗಳನ್ನು ಸಮರ್ಥವಾಗಿ ಎದುರಿಸುವ ರೀತಿಯಲ್ಲಿ ವಿದ್ಯಾರ್ಥಿಗಳನ್ನು ಸಜ್ಜುಗೊಳಿಸಬೇಕಿದೆ ಎಂದು ತಿಳಿಸಿದರು.
ಟಾಗೋರ್ ಶಿಕ್ಷಣ ಸಂಸ್ಥೆಯ ಪ್ರಧಾನ ಕಾರ್ಯದರ್ಶಿ ಆರ್.ಕೆ.ಅಮರೇಶ್ ಸಮಾರಂಭದ ಅಧ್ಯಕ್ಷತೆ ವಹಿಸಿ ಮಾತನಾಡಿ, ದೇಶದ ಭವಿಷ್ಯ ಶಿಕ್ಷಕರ ಕೈಲಿದ್ದು, ಪ್ರತಿಯೊಬ್ಬರೂ ಪ್ರಾಮಾಣಿಕವಾಗಿ ಕಾರ್ಯನಿರ್ವಹಿಸುವ ಮೂಲಕ ಉತ್ತಮ ದೇಶ ನಿರ್ಮಿಸುವತ್ತ ಕಾಳಜಿ ಪ್ರದರ್ಶಿಸುವಂತೆ ಮನವಿ ಮಾಡಿದರು.
ಸಮಾರಂಭದಲ್ಲಿ ಸಂಸ್ಥೆಯ ಉಪಾಧ್ಯಕ್ಷ ಗೋಪಾಲರೆಡ್ಡಿ, ಭೀಮನಗೌಡ ಇಟಗಿ, ಕಾಲೇಜಿನ ಪ್ರಾಚಾರ್ಯ ಆಶಾ ಪ್ರೇಮಲತಾ ಉಪಸ್ಥಿತರಿದ್ದರು.
ಸಮಾರಂಭದಲ್ಲಿ ಕಾಲೇಜಿನ ವಿದ್ಯಾರ್ಥಿಗಳು ಹಾಗೂ ಬೋಧಕ ವರ್ಗ ಪಾಲ್ಗೊಂಡಿದ್ದರು.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Advertisement