ನೀರಿನಲ್ಲಿ ಮುಳುಗಿ ವ್ಯಕ್ತಿ ಸಾವು
ರಾಯಚೂರು: ಶಕ್ತಿನಗರದ ಬಳಿಯ ಕೃಷ್ಣಾ ನದಿಯಲ್ಲಿ ಈಜಲು ಹೋದ ವ್ಯಕ್ತಿಯೊಬ್ಬ ನೀರಿನಲ್ಲಿ ಮುಳುಗಿ ಸಾವಿಗೀಡಾಗಿದ್ದಾನೆ.
ಮೃತನನ್ನು ಮರಿಯಪ್ಪ ಎಂದು ಗುರುತಿಸಲಾಗಿದೆ. ಈತ ಮದ್ಯ ಸೇವಿಸಿದ್ದು ಅದೇ ಅಮಲಿನಲ್ಲಿ ಈಜಲು ನೀರಿಗಿಳಿದ್ದು ಮೇಲೆ ಬಾರದೇ ಸಾವಿಗೀಡಾಗಿದ್ದಾನೆಂದು ಪೊಲೀಸರು ತಿಳಿಸಿದ್ದಾರೆ. ಈ ಕುರಿತು ಶಕ್ತಿನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಅಪರಿಚಿತ ಶವ ಪತ್ತೆ
ರಾಯಚೂರು: ತಾಲೂಕಿನ ಶಕ್ತಿನಗರದ ಬಳಿ ಕೃಷ್ಣಾ ನದಿಯಲ್ಲಿ ಅಪರಿಚಿತ ಮಹಿಳೆ ಶವ ಪತ್ತೆಯಾಗಿದೆ. ಶಕ್ತಿನಗರದ ಶಂಕ್ರಪ್ಪ ಎಂಬುವವರು ನದಿ ದಂಡೆಯಲ್ಲಿ ಸಾಗುತ್ತಿದ್ದಾಗ ದಡದಲ್ಲಿ ಮಹಿಳೆಯೊಬ್ಬರ ಶವ ನೋಡಿ ಈ ಬಗ್ಗೆ ಪೊಲೀಸರಿಗೆ ದೂರಿದ್ದಾರೆ. ಮಹಿಳೆಯ ಗುರುತು ಪತ್ತೆಯಾಗಿಲ್ಲ. ಈ ಕುರಿತು ಶಕ್ತಿನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.