ಹೆತ್ತವರಿಗಿಂತ ನೀತಿ ಕಲಿಸಿದ ಗುರು ದೊಡ್ಡವನು: ಶರಣಪ್ಪ
ಮುದಗಲ್: ಜನ್ಮದಾತರಿಗಿಂತ ಜೀವನಕ್ಕೆ ಉತ್ತಮ ನೀತಿಯನ್ನು ಕಲಿಸಿ ಸಮಾಜದಲ್ಲಿ ಗಣ್ಯವ್ಯಕ್ತಿಯನ್ನಾಗಿ ರೂಪಿಸುವ ಗುರು ದೊಡ್ಡವರು ಎಂದು ನಿವೃತ್ತ ಪ್ರಾಚಾರ್ಯ ಸಿ.ಶರಣಪ್ಪ ಅಭಿಪ್ರಾಯಪಟ್ಟರು.
ಸ್ಥಳೀಯ ಬಾಲಕಿಯರ ಸರ್ಕಾರಿ ಪ್ರೌಢಶಾಲೆಯಲ್ಲಿ ಶನಿವಾರ ನಡೆದ ಎಸ್ಸೆಸ್ಸೆಲ್ಸಿ ವಿದ್ಯಾರ್ಥಿಗಳ ಬೀಳ್ಕೊಡುಗೆ ಸಮಾರಂಭದಲ್ಲಿ ಮಾತನಾಡಿ, ಪಾಕಿಸ್ತಾನದಲ್ಲಿ ಹೆಣ್ಣು ಮಕ್ಕಳ ಶಿಕ್ಷಣ ಹಕ್ಕಿನ ಬಗ್ಗೆ ಮಾತನಾಡಿದ ಬಾಲಕಿ ಮೇಲೆ ದುಷ್ಟರಿಂದ ಗುಂಡಿನ ದಾಳಿ ನಡೆಯಿತು.
ಆದರೆ ನಮ್ಮ ದೇಶದಲ್ಲಿ ಹೆಣ್ಣು ಮಕ್ಕಳು ಶಿಕ್ಷಣ ಪಡೆದರೆ ಬಹುಮಾನ ನೀಡಿ ಗೌರವಿಸಲಾಗುತ್ತಿದೆ. ಪಾಲಕರು ಕೂಡ ವಿದ್ಯಾರ್ಥಿನಿಯರ ಶಿಕ್ಷಣಕ್ಕೆ ಹೆಚ್ಚು ಹೊತ್ತು ನೀಡಬೇಕು ಎಂದರು.
ನಿಸ್ವಾರ್ಥದಿಂದ ಸೇವೆ ಮಾಡುವ ಶಿಕ್ಷಕರಿಗೆ ವಿದ್ಯಾರ್ಥಿಗಳು ಪರೀಕ್ಷೆಯಲ್ಲಿ ಹೆಚ್ಚು ಅಂಕ ಪಡೆದರೆ ಅದೇ ಶಿಕ್ಷಕರಿಗೆ ಬಹುಮಾನ ಎಂದರು.
ಕಾರ್ಯಕ್ರಮವನ್ನು ಉದ್ಘಾಟಿಸಿದ ಪಪಂ ಮುಖ್ಯಾಧಿಕಾರಿ ಎಂ.ವಿಜಯಲಕ್ಷ್ಮೀ, ಮುಖ್ಯ ಶಿಕ್ಷಕ ಬಾಲಚಂದ್ರ ದಾಸರ ಮಾತನಾಡಿದರು. ಕಾರ್ಯಕ್ರಮದ ಅಧ್ಯಕ್ಷತೆಯನ್ನ ಎಸ್ಡಿಎಂಸಿ ಅಧ್ಯಕ್ಷ ಚಂದಾವಲಿಸಾಬ ವಹಿಸಿದ್ದರು.
ವೇದಿಕೆಯಲ್ಲಿ ಅಮರಯ್ಯ ಸ್ವಾಮಿ ಕಂಚಿಮಠ, ಸಜ್ಜಲಶ್ರೀ ಪ್ರೌಢಶಾಲೆಯ ಮುಖ್ಯ ಗುರು ಪವಾಡೆಪ್ಪ ಚಲುವಾದಿ, ಎಸ್ಬಿಐ ಬ್ಯಾಂಕಿನ ವ್ಯವಸ್ಥಾಪಕ ನಾರಾಯಣ ರಾವ್, ಕ್ಷೇತ್ರ ಅಧಿಕಾರಿ ರಾಜಣ್ಣ, ಪ್ರೌಢಶಾಲೆ ಗುಖ್ಯಗುರು ಆರ್.ಎನ್. ಗೌಡರ್, ಅಯ್ಯನಗೌಡ, ಶಿಕ್ಷಕಿ ಸಂಪದ, ಎಸ್ಡಿಎಂಸಿ ಉಪಾಧ್ಯಕ್ಷೆ ಅನುರಾದ ಸಿದ್ದಯ್ಯ ಸಾಲಿಮ, ಬಾಲಪ್ಪ ಉಪ್ಪಾರ ಇದ್ದರು. ಶಿಕ್ಷಕ ಮಲ್ಲಪ್ಪ ಸ್ವಾಗತಿಸಿದರು. ಮಲ್ಲಿಕಾರ್ಜುನ ಗೌಡರ ನಿರೂಪಿಸಿ, ವಂದಿಸಿದರು.
Disclaimer : ಕಾಮೆಂಟ್ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.