ಸರ್ಕಾರಿ ವೈದ್ಯಕೀಯ ಕಾಲೇಜು ಸ್ಥಳ ಪರಿಶೀಲನೆ
ದೇವದುರ್ಗ: ಪಟ್ಟಣದಲ್ಲಿ ಸ್ಥಾಪಿಸಲು ಉದ್ದೇಶಿಸಿರುವ ಸರ್ಕಾರಿ ವೈದ್ಯಕೀಯ ಕಾಲೇಜಿನ ಹಿನ್ನೆಲೆಯಲ್ಲಿ ಭಾನುವಾರ ಪಟ್ಟಣಕ್ಕೆ ಆಗಮಿಸಿದ್ದ ರಾಜೀವಗಾಂಧಿ ಆರೋಗ್ಯ ವಿಶ್ವವಿದ್ಯಾಲಯ ತಜ್ಞರ ತಂಡವು ಪಟ್ಟಣದ ಸರ್ಕಾರಿ ಆಸ್ಪತ್ರೆ ಮತ್ತು ಕಾಲೇಜು ನಿರ್ಮಾಣದ ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿತು.
ಡಾ. ಜಿತೇಂದ್ರ ಅವರ ನೇತೃತ್ವದ ತಂಡದವರು ಮೊದಲಿಗೆ ಸರ್ಕಾರಿ ಆಸ್ಪತ್ರೆಗೆ ಭೇಟಿ ನೀಡಿ ಅವಲೋಕಿಸಿದರು.
ನಂತರ ಪಟ್ಟಣದ ಹೊರವಲಯದ ಸಿರವಾರ ಕ್ರಾಸ್ ಬಳಿಯಿರುವ ಕರಿಮಲ್ಡಿ ತಾಂಡಾದ ಬಳಿಯ ಸರ್ಕಾರಿ ವೈದ್ಯಕೀಯ ಕಾಲೇಜು ನಿರ್ಮಾಣದ ಉದ್ದೇಶಿತ ಸ್ಥಳಕ್ಕೆ ತೆರಳಿ ಪರಿಶೀಲಿಸಿದರು.
ಈ ಸಂದರ್ಭದಲ್ಲಿ ತಂಡದೊಂದಿಗೆ ಬಿಜೆಪಿ ತಾಲೂಕು ಅಧ್ಯಕ್ಷ ಸಿ.ಎಸ್. ಪಾಟೀಲ್, ತಾಪಂ ಮಾಜಿ ಅಧ್ಯಕ್ಷ ಆದನಗೌಡ ಸೇರಿದಂತೆ ಅನೇಕರಿದ್ದರು.