ರಾಜ್ಯದೇಶರಾಜಕೀಯಕ್ರಿಕೆಟ್ವಿದೇಶವಾಣಿಜ್ಯ
ಸಿನಿಮಾ▾
ಅಂಕಣಗಳು
⋮
ರಾಯಚೂರು

ತುಂಗಭದ್ರಾ ಎಡದಂಡೆ ಕಾಲುವೆ: ನಿಷೇಧಾಜ್ಞೆ ಜಾರಿ

Lingaraj Badiger
Updated On : 19 Mar 2013, 11:03 am

ರಾಯಚೂರು: ತುಂಗಭದ್ರಾ ನದಿಯಲ್ಲಿ ನೀರಿನ ಪ್ರಮಾಣ ಕಡಿಮೆಯಿರುವುದರಿಂದ ಎಡದಂಡೆ ಕಾಲುವೆಯ ಮೈಲ್ 47ರಿಂದ 100ನೇ ಮೈಲ್‌ವರೆಗೆ ಕಾಲುವೆಯ ವ್ಯಾಪ್ತಿಯಲ್ಲಿ ಕುಡಿಯುವ ನೀರಿನ ಸಂಗ್ರಹಣೆ ಹಿನ್ನೆಲೆ ನಿಷೇಧಾಜ್ಞೆ ಜಾರಿಗೆ ತರಲಾಗಿದೆ.
ಜಿಲ್ಲಾಧಿಕಾರಿ ನಾಗರಾಜು ಅವರು ಈ ಕುರಿತು ಆದೇಶ ಹೊರಡಿಸಿದ್ದು, ಮೈಲ್ 47ರಿಂದ 100ರ ವ್ಯಾಪ್ತಿಯ ಸಿಂಧನೂರು, ಮತ್ತು ಮಾನವಿ ತಾಲೂಕುಗಳಲ್ಲಿ ಕಾಲುವೆಯ ಎಡ ಮತ್ತು ಬಲ ಭಾಗದಲ್ಲಿನ ಜಮೀನುಗಳ ರೈತರು ವಿತರಣಾ ಕಾಲುವೆಗಳಿಗೆ ಹಾನಿ ಉಂಟು ಮಾಡುವ ಸಂಭವವಿರುವುದರಿಂದ ಕಾನೂನು ಸುವ್ಯವಸ್ಥೆ ಕಾಪಾಡುವ ಉದ್ದೇಶದಿಂದ ನಿಷೇಧಾಜ್ಞೆ ಜಾರಿಗೆ ತರಲಾಗಿದೆ ಎಂದು ತಿಳಿಸಿದ್ದಾರೆ.
ನಿಷೇಧಾಜ್ಞೆಯು ಮಾ.18ರ ಬೆಳಗ್ಗೆ 6ರಿಂದ ಮಾ.25ರ ಬೆಳಗಿನ 6 ರವರೆಗೆ ಜಾರಿಯಲ್ಲಿರುತ್ತದೆ. ಈ ವ್ಯಾಪ್ತಿ ಪ್ರದೇಶದಲ್ಲಿ ನೀರಾವರಿ ಇಲಾಖೆಯ ಅಧಿಕಾರಿಗಳು ಮಾತ್ರ ಕಾಲುವೆಯ ತೂಬುಗಳನ್ನು ತೆರೆಯುವ ಮತ್ತು ಮುಚ್ಚುವ ಕಾರ್ಯ ನಿರ್ಳಹಿಸಲಿದ್ದು, ಅನ್ಯರಿಗೆ ಈ ಕಾರ್ಯನಿರ್ವಹಿಸಲು ನಿಷೇಧಿಸಲಾಗಿದೆ ಎಂದು ತಿಳಿಸಿದ್ದಾರೆ.  ಕುಡಿಯುವ ನೀರಿನ ಸಮಸ್ಯೆ ನಿವಾರಣೆ ನಿಟ್ಟಿನಲ್ಲಿ ಈ ಕ್ರಮ ಕೈಗೊಳ್ಳಲಾಗಿದ್ದು, ಸಂಬಂಧಿಸಿದ ನೀರಾವರಿ ಇಲಾಖೆಯ ಹಿರಿಯ, ಕಿರಿಯ ಅಧಿಕಾರಿಗಳು ತಮ್ಮ ಕಾರ್ಯವ್ಯಾಪ್ತಿ ಪ್ರದೇಶದಲ್ಲಿದ್ದು, ನೀರಿನ ನಿರ್ವಹಣೆ ಮೇಲೆ ನಿಗಾಯಿರಿಸಬೇಕು.  ಡಿಸಿ ಲಿಖಿತ ಪೂರ್ವಾನುಮತಿ ಪಡೆಯದೇ ರಜಾ ದಿನಗಳೂ ಸೇರಿ ಕೇಂದ್ರ ಸ್ಥಾನ ಬಿಡುವಂತಿಲ್ಲ ಎಂದು ಎಚ್ಚರಿಸಿದ್ದಾರೆ.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Advertisement