ರಾಜ್ಯದೇಶರಾಜಕೀಯಕ್ರಿಕೆಟ್ವಿದೇಶವಾಣಿಜ್ಯ
ಸಿನಿಮಾ▾
ಅಂಕಣಗಳು
⋮
ರಾಯಚೂರು

ಬಸವ ಜಯಂತಿ ಶತಮಾನೋತ್ಸವ: ಇಂದು ಮಹಾಯಾತ್ರೆ

Lingaraj Badiger
Updated On : 19 Mar 2013, 10:42 am

ರಾಯಚೂರು: ಬಸವ ಜಯಂತಿ ಶತಮಾನೋತ್ಸವ ಅಂಗವಾಗಿ ಜಿಲ್ಲೆಯಿಂದ ಜಿಲ್ಲೆಗೆ ನಡೆಸಲಾಗುತ್ತಿರುವ ಶರಣ ಸಂಸ್ಕೃತಿ ಮಹಾಯಾತ್ರೆಯು ಜಿಲ್ಲೆಗೆ ಮಾ.19ರಂದು ಪ್ರವೇಶಿಸಲಿದ್ದು, ಮಾ.20 ರಂದು ನಗರದಲ್ಲಿ ಕಾರ್ಯಕ್ರಮ ಆಯೋಜಿಸಲಾಗಿದೆ ಎಂದು ಅಖಿಲ ಭಾರತ ವೀರಶೈವ ಮಹಾಸಭಾದ ಜಿಲ್ಲಾಧ್ಯಕ್ಷ ರವೀಂದ್ರ ಕಾಮರೆಡ್ಡಿ ತಿಳಿಸಿದರು.
ನಗರದಲ್ಲಿ ಸೋಮವಾರ ಕರೆದಿದ್ದ ಸುದ್ದಿಗೋಷ್ಠಿಯಲ್ಲಿ ಮಾತನಾಡಿ, ಕನ್ನಡ ಮತ್ತು ಸಂಸ್ಕೃತಿ ಇಲಾಖೆ, ಬಸವ ಸಮಿತಿ ಹಾಗೂ ವಿವಿಧ ಸಂಘಟನೆಗಳ ಆಶ್ರಯದಲ್ಲಿ ಆರಂಭಗೊಂಡಿರುವ ಮಹಾಪಾದಯಾತ್ರೆಯು ಮಾ.19ರಂದು ಲಿಂಗಸ್ಗೂರು ಪಟ್ಟಣಕ್ಕೆ ಆಗಮಿಸಲಿದ್ದು, ಮಾ.20ರಂದು ಸಂಜೆ 5ಕ್ಕೆ ನಗರಕ್ಕೆ ಆಗಮಿಸಲಿದೆ ಎಂದು ತಿಳಿಸಿದರು.
ಬಸವ ತತ್ವ ಪ್ರಚಾರ ಸಂದೇಶಗಳನ್ನು ಸಾರುವ ಉದ್ದೇಶದಿಂದ ಹಾಗೂ ಬಸವ ಜಯಂತಿ ಶತಮಾನೋತ್ಸವ ಆಚರಣೆ ಹಿನ್ನೆಲೆಯಲ್ಲಿ ನಡೆಯುತ್ತಿರುವ ಈ ಮಹಾಯಾತ್ರೆಯ ಅಂಗವಾಗಿ ಮಾ.20ರಂದು ನಗರದ ಸಿದ್ದರಾಮ ಜಂಬಲದಿನ್ನಿ ರಂಗಮಂದಿರದಿಂದ ವೀರಶೈವ ಕಲ್ಯಾಣ ಮಂಟಪದವರೆಗೆ ಮೆರವಣಿಗೆ ಆಯೋಜಿಸಲಾಗಿದೆ ಎಂದು ತಿಳಿಸಿದರು.
ನಂತರ ವೀರಶೈವ ಕಲ್ಯಾಣ ಮಂಟಪದಲ್ಲಿ ನಡೆಯುವ ಸಮಾರಂಭದಲ್ಲಿ ಬಸವ ಸಮಿತಿ ಪ್ರಮುಖ ಅರವಿಂದ ಜತ್ತಿ ಮತ್ತಿತರರು ಪಾಲ್ಗೊಂಡು ಬಸವತತ್ವಗಳ ಬಗ್ಗೆ ಮಾತನಾಡಲಿದ್ದಾರೆ. ಈ ಕಾರ್ಯಕ್ರಮದಲ್ಲಿ ಪಾಲ್ಗೊಂಡು ಯಶಸ್ವಿಗೊಳಿಸಲು ಅವರು ಮನವಿ ಮಾಡಿದರು. ಬಸವಾದಿ ಶರಣರ ಜೀವನ ಮೌಲ್ಯಗಳನ್ನು ಜನಸಾಮಾನ್ಯರಿಗೆ ತಲುಪಿಸುವ ಉದ್ದೇಶದಿಂದ ಈ ಯಾತ್ರೆಯು ಆರಂಭಗೊಂಡಿದ್ದು, ಕನ್ನಡ ಮತ್ತು ಸಂಸ್ಕೃತಿ ಇಲಾಖೆಯ ಸಹಯೋಗದಲ್ಲಿ ಮುನ್ನಡೆಯುತ್ತಿದ್ದು, ನಗರದಲ್ಲಿ ಯಾತ್ರೆಗೆ ಭವ್ಯ ಸ್ವಾಗತ ನೀಡಲಾಗುತ್ತಿದ್ದು, ನಗರದ ಜನತೆ ಪಾಲ್ಗೊಳ್ಳುವಂತೆ ಕೋರಿದರು.
ಈ ವೇಳೆ ಮಹಾಸಭಾ ಸೇರಿ ವಿವಿಧ ಸಂಘಟನೆಗಳ ಪ್ರಮುಖರಾದ ಗುರುಲಿಂಗಯ್ಯಸ್ವಾಮಿ, ಚಂದ್ರಶೇಖರ್ ಪಾಟೀಲ್, ದಂಡಪ್ಪ ಬಿರಾದಾರ್, ವಿಶ್ವನಾಥ್ ಪಾಟೀಲ್, ರಾಜೇಶ್ ಕುಮಾರ್ ಸೇರಿದಂತೆ ಅನೇಕರಿದ್ದರು.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Advertisement