ರಾಜ್ಯದೇಶರಾಜಕೀಯಕ್ರಿಕೆಟ್ವಿದೇಶವಾಣಿಜ್ಯ
ಸಿನಿಮಾ▾
ಅಂಕಣಗಳು
⋮
ರಾಯಚೂರು

ಮುಂದೆ ಕಾಂಗ್ರೆಸ್‌ಗೆ ಗೆಲುವು: ಶಾಸಕ

Lingaraj Badiger
Updated On : 19 Mar 2013, 10:42 am

ಮಸ್ಕಿ: ಮುಂದಿನ ವಿಧಾನಸಭೆ ಚುನಾವಣೆಯಲ್ಲಿ ಕಾಂಗ್ರೆಸ್ ಅಧಿಕಾರ ಹಿಡಿಯುವುದು ಖಚಿತ ಎಂದು ಶಾಸಕ ಪ್ರತಾಪಗೌಡ ಪಾಟೀಲ್ ವಿಶ್ವಾಸ ವ್ಯಕ್ತಪಡಿಸಿದರು.
ಅವರು ಇಲ್ಲಿಗೆ ಸಮೀಪದ ಚಿಕ್ಕಕಡಬೂರು ಗ್ರಾಮದಲ್ಲಿ ಸೋಮವಾರ ಬಸವಣ್ಣ ದೇವಸ್ಥಾನದ ಸಮುದಾಯ ಭವನದ ಉದ್ಘಾಟನೆ ಹಾಗೂ ಕಟ್ಟೆ ಮಲ್ಲಮ್ಮನ ದೇವಸ್ಥಾನದ ಸಮುದಾಯ ಭವನದ ಕಾಮಗಾರಿಗೆ ಭೂಮಿ ಪೂಜೆ ನೆರವೇರಿಸಿ ಗ್ರಾಮಸ್ಥರನ್ನುದ್ದೇಶಿಸಿ ಮಾತನಾಡಿದರು.
ತಾವು ಸದ್ಯ ಬಿಜೆಪಿ ಶಾಸಕನಾಗಿದ್ದು, ಬದಲಾದ ರಾಜಕೀಯ ಪರಿಸ್ಥಿತಿ ಹಾಗೂ ಕಾರ್ಯಕರ್ತರ ಮನವಿ ಮೇರೆಗೆ ಕಾಂಗ್ರೆಸ್‌ನಿಂದ ಚುನಾವಣೆಯಲ್ಲಿ ಸ್ಪರ್ಧಿಸುವುದಾಗಿ ಹೇಳಿದ ಅವರು, ಸ್ಥಳೀಯ ಹಾಗೂ ಜಿಲ್ಲಾ ಕಾಂಗ್ರೆಸ್ ಮುಖಂಡರು ತಮಗೆ ಬೆಂಬಲವನ್ನು ವ್ಯಕ್ತಪಡಿಸಿದ್ದು, ತಮಗೆ ಕಾಂಗ್ರೆಸ್ ಟಿಕೆಟ್ ಸಿಗುವುದು ಬಹುತೇಕ ಖಚಿತವಾಗಿದೆ ಎಂದರು.
ಎಪಿಎಂಸಿ ಅಧ್ಯಕ್ಷ ಮಂಜುನಾಥ ಪಾಟೀಲ್, ದೊಡ್ಡಪ್ಪ ಕಡಬೂರು, ಶಿವಕುಮಾರ ಮಸ್ಕಿ, ಅಜಯ ನಾಡಗೌಡ, ಶೇಖರಪ್ಪ ಮೇಟಿ, ಶ್ರೀಧರ ಪಾಟೀಲ್, ಶಂಕರರಾವ್, ಸುರೇಶ ಅರಸೂರು, ಮಲ್ಲಯ್ಯ ಬಳ್ಳಾ ನೂರಾರು ಜನ ಪಾಲ್ಗೊಂಡಿದ್ದರು.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Advertisement