ರಾಜ್ಯದೇಶರಾಜಕೀಯಕ್ರಿಕೆಟ್ವಿದೇಶವಾಣಿಜ್ಯ
ಸಿನಿಮಾ▾
ಅಂಕಣಗಳು
⋮
ರಾಯಚೂರು

ಅಕ್ರಮ ಮದ್ಯ ನಿಯಂತ್ರಣ ವೈಫಲ್ಯ; ಕ್ರಮಕ್ಕೆ ಆಗ್ರಹ

Mainashree
Updated On : 21 Mar 2013, 11:45 am

ರಾಯಚೂರು: ಜಿಲ್ಲೆಯಲ್ಲಿ ಅಕ್ರಮ ಮದ್ಯ ಮಾರಾಟ ಮತ್ತು ಸಿಎಚ್ ಪೌಡರ್ ಮಾರಾಟದ ನಿಯಂತ್ರಣಕ್ಕೆ ಅಬಕಾರಿ ವಿಫಲವಾಗಿದ್ದು, ಅಬಕಾರಿ ಅಧಿಕಾರಿಗಳ ವಿರುದ್ಧ ಕ್ರಮ ಕೈಗೊಳ್ಳುವಂತೆ ರಾಜ್ಯ ದಲಿತ ಸಂಘರ್ಷ ಸಮಿತಿ ಆಗ್ರಹಿಸಿದೆ.
ಈ ಕುರಿತು ಜಿಲ್ಲಾಧಿಕಾರಿಗೆ ದೂರು ಸಲ್ಲಿಸಿರುವ ಸಂಘದ ಜಿಲ್ಲಾ ಸಂಘಟನಾ ಸಂಚಾಲಕ ಶರಣಪ್ಪ ದಿನ್ನಿ, ಸಂಘಟನಾ ಸಂಚಾಲಕ ಹನುಮಂತ ಅರೋಲಿಕರ್, ಜಿಲ್ಲೆಯಲ್ಲಿ ಅಕ್ರಮ ಮದ್ಯ ಮಾರಾಟ ಮತ್ತು ಕಲಬೆರಕೆ ಹೆಂಡ ತಯಾರಿಸಲು ಬಳಸಲು ಸಿಎಚ್ ಪೌಡರ್ ಸಾಗಣೆ ತಡೆಯಬೇಕು. ಈ ನಿಟ್ಟಿನಲ್ಲಿ ಅಬಕಾರಿ ಇಲಾಖೆ ಅಧಿಕಾರಿಗಳು ನಿರ್ಲಕ್ಷ್ಯ ತೋರುತ್ತಿದ್ದು, ಅವರ ವಿರುದ್ಧ ಕ್ರಮ ಕೈಗೊಳ್ಳಬೇಕೆಂದು ಆಗ್ರಹಿಸಿದರು.
ಜಿಲ್ಲೆಯ ಅಬಕಾರಿ ಅಧಿಕಾರಿಗಳಿಗೆ ಅಕ್ರಮ ಮದ್ಯ ಮಾರಾಟ ಜಾಲದ ಬಗ್ಗೆ ಸಮರ್ಪಕ ಮಾಹಿತಿಯಿದ್ದರೂ ಅಧಿಕಾರಿಗಳು ನಿಯಂತ್ರಿಸುವಲ್ಲಿ ವಿಫಲರಾಗಿದ್ದಾರೆ. ಕಡುಬಡವರು, ನಿರ್ಗತಿಕರು, ದಿನಗೂಲಿ ಕಾರ್ಮಿಕರ ಕುಟುಂಬಗಳು ಅಕ್ರಮ ಮದ್ಯ ಸೇವನೆ ಮತ್ತು ಸಿಎಚ್ ಪೌಡರ್‌ನಿಂದ ತಯಾರಿಸಿದ ಕಲಬೆರಕೆ ಹೆಂಡ ಸೇವಿಸಿ ತೊಂದರೆಗೆ ಸಿಲುಕುತ್ತಿವೆ. ಇದರ ತಡೆಗೆ ಅಧಿಕಾರಿಗಳು ಪ್ರಯತ್ನಿಸುತ್ತಿಲ್ಲ ಎಂದು ಆರೋಪಿಸಿದರು.
ಅನೇಕ ಬಡ ಕುಟುಂಬಗಳ ಪ್ರಮುಖರು ಕುಡಿತದ ಚಟಕ್ಕೆ ಬಲಿಯಾಗಿದ್ದರಿಂದ ಕುಟುಂಬಗಳು ಬೀದಿಗೆ ಬಂದಿವೆ. ಇಂಥ ಪರಿಸ್ಥಿತಿಯಿದ್ದರೂ ಅಬಕಾರಿ ಅಧಿಕಾರಿಗಳು ಇಂಥ ಅಕ್ರಮಗಳಿಗೆ ಕಡಿವಾಣ ಹಾಕಲು ಹಿಂದೇಟು ಹಾಕುತ್ತಿದ್ದು ಅವರ ವಿರುದ್ಧ ಕಠಿಣ ಕ್ರಮ ಕೈಗೊಳ್ಳುವಂತೆ ಒತ್ತಾಯಿಸಿದರು.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Advertisement