ರಾಜ್ಯದೇಶರಾಜಕೀಯಕ್ರಿಕೆಟ್ವಿದೇಶವಾಣಿಜ್ಯ
ಸಿನಿಮಾ▾
ಅಂಕಣಗಳು
⋮
ರಾಯಚೂರು

ಸಿಂಧನೂರು; ಆಧಾರ್‌ಗಾಗಿ ರಾತ್ರಿಯಿಡೀ ಜಾಗರಣೆ

Mainashree
Updated On : 21 Mar 2013, 11:48 am

ಕ.ಪ್ರ. ವಾರ್ತೆ, ಸಿಂಧನೂರು, ಮಾ.20
ಆಧಾರ್ ಪಡೆಯಲು ಜನರು ರಾತ್ರಿಯಿಡೀ ಜಾಗರಣೆ ಮಾಡುತ್ತಿದ್ದಾರೆ. ಇಂದಿರಾನಗರ, ಗಂಗಾನಗರ, ಖದರಿಯಾ ಕಾಲೋನಿ, ಬಂಗಾಲಿ ಕ್ಯಾಂಪ್, 3ನೇ ಮೈಲ್ ಕ್ಯಾಂಪ್ ಸೇರಿದಂತೆ ಇನ್ನಿತರ ವಾರ್ಡ್‌ಗಳ ನೂರಾರು ಜನ ಎಪಿಎಂಸಿಯ ಆಧಾರ್ ವಿತರಣಾ ಕೇಂದ್ರದ ಮುಂಭಾಗದಲ್ಲಿ 3 ದಿನಗಳಿಂದ ರಾತ್ರಿ ಅಲ್ಲಿಯೇ ಮಲಗುತ್ತಿದ್ದಾರೆ.
ಆಧಾರ್ ಕಾರ್ಡ್ ಪಡೆಯಲು ಕುಟುಂಬದ ಸದಸ್ಯರೆಲ್ಲರೂ ಕೇಂದ್ರಕ್ಕೆ ಬಂದು ಸರದಿಸಾಲಿನಲ್ಲಿ ನಿಲ್ಲಬೇಕು. ಇದರಿಂದ ವಯೋವೃದ್ಧರು ತೀವ್ರ ತೊಂದರೆ ಅನುಭವಿಸುತ್ತಿದ್ದಾರೆ. ಸಾಯಂಕಾಲದವರೆಗೆ ನಿಂತರೂ ಕಾರ್ಡ್ ದೊರೆಯದೇ ರಾತ್ರಿ ಅಲ್ಲಿಯೇ ವಾಸ್ತವ್ಯ ಹೂಡುತ್ತಿದ್ದಾರೆ.
ನೂಕುನುಗ್ಗಲು: ಆಧಾರ್ ಕಾರ್ಡ್ ಆಕಾಂಕ್ಷಿಗಳ ಸಂಖ್ಯೆ ದಿನದಿಂದ ದಿನಕ್ಕೆ ಹೆಚ್ಚುತ್ತಿದ್ದು, ಸರದಿಯಲ್ಲಿ ನೂಕುನುಗ್ಗಲು ಸಾಮಾನ್ಯವಾಗಿದೆ. ಇದರಿಂದಾಗಿ ಸಣ್ಣಪುಟ್ಟ ಜಗಳಗಳಾಗುತ್ತಿವೆ. ಬಂದೋಬಸ್ತ್‌ಗೆ ಪೊಲೀಸ್ ಸಿಬ್ಬಂದಿ ಇಲ್ಲದ ಕಾರಣ ಕೆಲವರು ಪ್ರಭಾವ ಬಳಸಿಕೊಂಡು ಕಾರ್ಡ್ ಪಡೆಯುತ್ತಿದ್ದಾರೆ ಎಂದು ಫಲಾನುಭವಿಗಳು ಆಕ್ರೋಶ ವ್ಯಕ್ತಪಡಿಸಿದರು. ಎಲ್ಲ ವಾರ್ಡ್‌ಗಳಲ್ಲಿ ಆಧಾರ್ ವಿತರಣಾ ಕೇಂದ್ರ ಸ್ಥಾಪಿಸುವ ಮೂಲಕ ಜನತೆಗೆ ಅನುಕೂಲ ಕಲ್ಪಿಸಬೇಕು. ಒಂದೇ ಕೇಂದ್ರದಿಂದ ವಿತರಣೆ ಮಾಡುವುದು ಅಸಾಧ್ಯದ ಮಾತು ಎಂದು ಅಂಗವಿಕಲರ ಸಂಘದ ಜಿಲ್ಲಾಧ್ಯಕ್ಷ ಹುಸೇನಸಾಬ ಪರಾಪುರ, ಮಂಜುನಾಥಗೌಡ ಮನವಿ ಮಾಡಿದರು.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Advertisement