'ಬಿಎಸ್ವೈ ಯೋಜನೆ ಎಲ್ಲರಿಗೂ ಪೂರಕ'
ಕ.ಪ್ರ. ವಾರ್ತೆ ಸಿಂಧನೂರು ಮಾ.21
ಮುಖ್ಯಮಂತ್ರಿಯಾಗಿದ್ದಾಗ ಯಡಿಯೂರಪ್ಪನವರು ಕೈಗೊಂಡ ಯೋಜನೆಗಳು ಎಲ್ಲ ಜಾತಿ, ಜನಾಂಗಕ್ಕೆ ಪೂರಕವಾಗಿವೆ ಎಂದು ವಿಧಾನ ಪರಿಷತ್ ಮಾಜಿ ಸದಸ್ಯ ಲಕ್ಷ್ಮೀನಾರಾಯಣ ಅಭಿಪ್ರಾಯಪಟ್ಟರು.
ನಗರದ ಖಾಸಗಿ ಹೊಟೇಲ್ ಸಭಾಂಗಣದಲ್ಲಿ ನಡೆದ ಕಾರ್ಯಕರ್ತರ ಸಭೆಯನ್ನುದ್ದೇಶಿಸಿ ಮಾತನಾಡಿ, ಯಡಿಯೂರಪ್ಪ ವೀರಶೈವ ಸಮಾಜಕ್ಕೆ ಮಾತ್ರ ಸೀಮಿತ ಎಂದು ಪರಿಗಣಿಸುತ್ತಿರುವುದು ಸರಿಯಲ್ಲ. ರಾಜ್ಯದಲ್ಲಿನ ಎಲ್ಲ ಸಮಾಜಗಳ ಅಭಿವೃದ್ಧಿಗೆ ಕೋಟ್ಯಂತರ ಹಣ ಬಿಡುಗಡೆ ಮಾಡುವ ಮೂಲಕ ಹಿಂದುಳಿದ ವರ್ಗದ ಜನರ ಅಭಿವೃದ್ಧಿಗೆ ಶ್ರಮಿಸಿದ್ದಾರೆ. ನೇಕಾರ ಸಮಾಜಕ್ಕೆ 60 ಕೋಟಿ ಅನುದಾನ ಸೇರಿದಂತೆ 23 ಹೊಸ ಯೋಜನೆಗಳನ್ನು ರೂಪಿಸಿದ್ದರು. ಅವರು ಅನುಷ್ಠಾನಗೊಳಿಸಿದ ಯೋಜನೆಗಳ ಬಗ್ಗೆ ಮನವರಿಕೆ ಮಾಡುವ ಕಾರ್ಯವನ್ನು ಕಾರ್ಯಕರ್ತರು ಮಾಡಬೇಕು ಎಂದು ಕರೆ ನೀಡಿದರು.