ರಾಜ್ಯದೇಶರಾಜಕೀಯಕ್ರಿಕೆಟ್ವಿದೇಶವಾಣಿಜ್ಯ
ಸಿನಿಮಾ▾
ಅಂಕಣಗಳು
⋮
ರಾಯಚೂರು

ಸಂಕ್ಷಿಪ್ತ ಸುದ್ದಿ

Mainashree
Updated On : 22 Mar 2013, 11:58 am

ಇಂದು ಉಚಿತ ತಪಾಸಣೆ ಶಿಬಿರ
ರಾಯಚೂರು:
ನಗರದ ಚಿರಾಯು ಆಸ್ಪತ್ರೆಯಿಂದ ಮಾ.22ರಂದು ಆರೋಗ್ಯದ ಉಚಿತ ತಪಾಸಣೆ ಶಿಬಿರ ಆಯೋಜಿಸಲಾಗಿದೆ. ಈ ಕುರಿತು ಆಸ್ಪತ್ರೆ ಅಧ್ಯಕ್ಷ ಹಾಗೂ ವೈದ್ಯಕೀಯ ನಿರ್ದೇಶಕ ಡಾ. ಮಂಜುನಾಥ ದೋಶೆಟ್ಟಿ ಪ್ರಕಟಣೆ ನೀಡಿ, ಅಂದು ಬೆಳಗ್ಗೆ 10ರಿಂದ ಸಂಜೆ 5ರವರೆಗೆ ಲೇಸರ್ ತಂತ್ರಜ್ಞಾನದ ಮೂಲಕ ಆರೋಗ್ಯದ ಸಂಪೂರ್ಣ ಉಚಿತ ತಪಾಸಣೆ ಶಿಬಿರವನ್ನು ಆಯೋಜಿಸಲಾಗಿದೆ ಎಂದು ತಿಳಿಸಿದ್ದಾರೆ. ನೋಂದಣಿಗಾಗಿ ಆಸ್ಪತ್ರೆಯ ಮೊ. 98444 03484, 84949 04305 ಇಲ್ಲಿಗೆ ಸಂಪರ್ಕಿಸಬಹುದು.

ನಾಳೆ ವಿದ್ಯಾರ್ಥಿಗಳ ಸಂಘ ಉದ್ಘಾಟನೆ
ರಾಯಚೂರು
: ನಗರದ ನಂದಿನಿ ಶಿಕ್ಷಣ ಮಹಾವಿದ್ಯಾಲಯದಲ್ಲಿ ಮಾ.23ರಂದು ವಿದ್ಯಾರ್ಥಿಗಳ ಸಂಘದ ಉದ್ಘಾಟನೆ ಆಯೋಜಿಸಲಾಗಿದೆ. ಅಂದು ಮಧ್ಯಾಹ್ನ 3ಕ್ಕೆ ಗುಲ್ಬರ್ಗ ವಿಶ್ವವಿದ್ಯಾಲಯದ ಕುಲಸಚಿವ ಪ್ರೊ. ದಯಾನಂದ ಅಗಸರ ಉದ್ಘಾಟಿಸಲಿದ್ದಾರೆ. ಕಾರ್ಯಕ್ರಮದ ಅಧ್ಯಕ್ಷತೆಯನ್ನು ಡಾ. ಜಿ.ಮಹಾಲಿಂಗ ವಹಿಸಲಿದ್ದಾರೆ. ಜಿಪಂ ಉಪಾಧ್ಯಕ್ಷ ಕೆ.ಶರಣಪ್ಪ ಮತ್ತಿತರರು ಪಾಲ್ಗೊಳ್ಳಲಿದ್ದಾರೆಂದು ಕಾಲೇಜಿನ ಪ್ರಕಟಣೆ ತಿಳಿಸಿದೆ.

ಟೆಂಡರ್ ಮುಂದಕ್ಕೆ
ಸಿಂಧನೂರು:
ತಾಲೂಕಿನ ಬಳಗಾನೂರು ಗ್ರಾಮ ಪಂಚಾಯಿತಿಯಲ್ಲಿ ಮಾ. 22ರಂದು ಕರೆಯಲಾಗಿದ್ದ ವಾರದ ಸಂತೆ ಹರಾಜು ಹಾಗೂ ಮಾರಾಟ ಮಳಿಗೆಗಳ ಹರಾಜು ಪ್ರಕ್ರಿಯೆಯನ್ನು ಚುನಾವಣೆ ನೀತಿ ಸಂಹಿತೆ ಹಿನ್ನೆಲೆಯಲ್ಲಿ ಮುಂದೂಡಲಾಗಿದೆ ಎಂದು ಗ್ರಾಪಂ ಅಭಿವೃದ್ಧಿ ಅಧಿಕಾರಿ ನಾಗೇಶ ತಿಳಿಸಿದ್ದಾರೆ. ಚುನಾವಣೆ ಮುಗಿದ ಬಳಿಕ ಟೆಂಡರ್ ಪ್ರಕ್ರಿಯೆ ನಡೆಯಲಿದೆ ಎಂದು ಹೇಳಿದ್ದಾರೆ.

ಅಪರಿಚಿತ ವಾಹನ ಡಿಕ್ಕಿ: ವ್ಯಕ್ತಿ ಸಾವು
ರಾಯಚೂರು:
ಲಿಂಗಸ್ಗೂರು- ರಾಯಚೂರು ರಸ್ತೆಯ ಮಾನವಿ ತಾಲೂಕಿನ ಯಕ್ಲಾಸಪುರ ಬಸ್ ನಿಲ್ದಾಣದ ಬಳಿ ರಸ್ತೆ ಬದಿಗೆ ಸಾಗುತ್ತಿದ್ದ ವ್ಯಕ್ತಿಗೆ ಅಪರಿಚಿತ ವಾಹನ ಡಿಕ್ಕಿ ಹೊಡೆದು ಮೃತಪಟ್ಟಿದ್ದಾನೆ.
ಮೃತನನ್ನು ಶಂಕ್ರಪ್ಪ ಕಡಬೂರು(40) ಎಂದು ಗುರುತಿಸಲಾಗಿದೆ. ಈತ ರಸ್ತೆ ಬದಿಗೆ ಸಾಗುತ್ತಿದ್ದಾಗ ಹಿಂದಿನಿಂದ ವೇಗವಾಗಿ ಬಂದ ಅಪರಿಚಿತ ವಾಹನವು ಡಿಕ್ಕಿ ಹೊಡೆದಿದ್ದರಿಂದ ತೀವ್ರ ಗಾಯಗೊಂಡ ಈತ ಸ್ಥಳದಲ್ಲಿಯೇ ಮೃತಪಟ್ಟಿದ್ದಾನೆ ಎಂದು ಪೊಲೀಸರು ತಿಳಿಸಿದ್ದಾರೆ. ಈ ಕುರಿತು ಕವಿತಾಳ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಡಿಕ್ಕಿ: ಅಪರಿಚಿತ ವ್ಯಕ್ತಿ ಸಾವು
ರಾಯಚೂರು:
ತಾಲೂಕಿನ ಅರಳಿಬೆಂಚಿ ಬಳಿ ಅಪರಿಚಿತ ವಾಹನವೊಂದು ವ್ಯಕ್ತಿಗೆ ಡಿಕ್ಕಿ ಹೊಡೆದು ಸಾವಿಗೀಡಾಗಿದ್ದಾನೆ.
ಮೃತನ ಗುರುತು ಪತ್ತೆಯಾಗಿಲ್ಲ. ಈ ವ್ಯಕ್ತಿ ರಸ್ತೆ ಬದಿಗೆ ಸಾಗುತ್ತಿದ್ದ ವೇಳೆ ಹಿಂದಿನಿಂದ ವೇಗವಾಗಿ ಬಂದ ವಾಹನ ಡಿಕ್ಕಿ ಹೊಡೆದಿದ್ದರಿಂದ ತೀವ್ರ ಗಾಯಗೊಂಡ ಈತ ಸ್ಥಳದಲ್ಲಿಯೇ ಮೃತಪಟ್ಟಿದ್ದಾನೆ ಎಂದು ಪೊಲೀಸರು ತಿಳಿಸಿದ್ದಾರೆ.
ಈ ಕುರಿತು ಯರಗೇರಾ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಇಸ್ಪೀಟ್: 6 ಮಂದಿ ಬಂಧನ
ರಾಯಚೂರು:
ಸಿಂಧನೂರು ನಗರದ ಸುಶೀಲಾ ರೈಸ್ ಮಿಲ್ ಹತ್ತಿರ ಇಸ್ಪೀಟ್ ಆಡುತ್ತಿದ್ದ 6 ಜನರನ್ನು ಪೊಲೀಸರು ಬಂಧಿಸಿದ್ದಾರೆ. ಬಂಧಿತರನ್ನು ನಗರದ ಬಾಬುಸಾಬ್, ಬಂದೇನವಾಜ್, ಮೌಲಾಸಾಬ್, ಯಂಕಪ್ಪ, ಮಹೆಬೂಬ್ ಸಾಬ್ ಮತ್ತು ಗೋವಿಂದಪ್ಪ ಎಂದು ಗುರುತಿಸಲಾಗಿದೆ. ಇವರು ಸಾರ್ವಜನಿಕ ಸ್ಥಳದಲ್ಲಿ ಜೂಜಾಡುತ್ತಿದ್ದ ವೇಳೆ ದಾಳಿ ಮಾಡಿದ ಪೊಲೀಸರು ಆರೋಪಿಗಳನ್ನು ಬಂಧಿಸಿ ಅವರಿಂದ 915 ನಗದು ಜಪ್ತಿ ಮಾಡಿದ್ದಾರೆ. ಸಿಂಧನೂರು ನಗರ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಹೆಂಡ ಮಾರಾಟ: ಬಂಧನ
ರಾಯಚೂರು:
ಇಲ್ಲಿನ ಅಶೋಕ ನಗರದಲ್ಲಿ ಅಕ್ರಮ ಹೆಂಡ ಮಾರಾಟ ಮಾಡುತ್ತಿದ್ದ ಇಬ್ಬರನ್ನು ಪೊಲೀಸರು ದಾಳಿ ಮಾಡಿ ಬಂಧಿಸಿದ್ದಾರೆ. ಬಂಧಿತರನ್ನು ಈರೇಶ ಮತ್ತು ತಾಯಮ್ಮ ಎಂದು ಗುರುತಿಸಲಾಗಿದೆ. ಇವರು ಅಶೋಕ ನಗರದಲ್ಲಿ ಅಕ್ರಮವಾಗಿ ಹೆಂಡ ಮಾರಾಟ ಮಾಡುತ್ತಿದ್ದ ವೇಳೆ ದಾಳಿ ಮಾಡಿ ಅವರನ್ನು ಬಂಧಿಸಿ ಅವರಿಂದ 180 ಹಾಗೂ 2 ಕೊಡಗಳಲ್ಲಿರಿಸಿದ್ದ ಹೆಂಡ ಜಪ್ತಿ ಮಾಡಲಾಗಿದೆ. ಈ ಕುರಿತು ನೇತಾಜಿ ನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Advertisement