ರಾಜ್ಯದೇಶರಾಜಕೀಯಕ್ರಿಕೆಟ್ವಿದೇಶವಾಣಿಜ್ಯ
ಸಿನಿಮಾ▾
ಅಂಕಣಗಳು
⋮
ರಾಯಚೂರು

ಅಮರೇಶ್ವರ ಜಾತ್ರೆಗೆ ವಿಶೇಷ ಬಸ್ ಸೌಲಭ್ಯ

Rashmi Kasaragodu
Updated On : 25 Mar 2013, 11:27 am

ರಾಯಚೂರು: ಲಿಂಗಸ್ಗೂರು ತಾಲೂಕಿನ ಅಮರೇಶ್ವರದ ಜಾತ್ರಾ ಮಹೋತ್ಸವದ ಅಂಗವಾಗಿ ಈಶಾನ್ಯ ಸಾರಿಗೆ ಸಂಸ್ಥೆಯು ಮಾ. 25ರಿಂದ ಮಾ. 31ರವರೆಗೆ ವಿಶೇಷ ಬಸ್ ಸೌಲಭ್ಯ ಕಲ್ಪಿಸಿದೆ. ಈ ಕುರಿತು ಸಾರಿಗೆ ಸಂಸ್ಥೆಯ ವಿಭಾಗೀಯ ನಿಯಂತ್ರಣಾಧಿಕಾರಿ ವೆಂಕಟೇಶ್ವರ ರೆಡ್ಡಿ ಪ್ರಕಟಣೆ ನೀಡಿದ್ದು, ಲಿಂಗಸ್ಗೂರು- ಅಮರೇಶ್ವರ, ಸಿರವಾರ- ಹಟ್ಟಿ- ಅಮರೇಶ್ವರ, ದೇವದುರ್ಗ- ತಿಂಥಿಣಿ- ಅಮರೇಶ್ವರ, ಕವಿತಾಳ- ಹಟ್ಟಿ- ಅಮರೇಶ್ವರ ಹಾಗೂ ಹಟ್ಟಿ- ಅಮರೇಶ್ವರ ಮಾರ್ಗದಲ್ಲಿ ಜಾತ್ರಾ ವಿಶೇಷ ಬಸ್ಗಳನ್ನು ಓಡಿಸಲಿದೆ ಎಂದು ತಿಳಿಸಿದ್ದಾರೆ. ಜಿಲ್ಲೆಯ ಯಾವುದೇ ಗ್ರಾಮದಿಂದ 50 ಜನ ಪ್ರಯಾಣಿಕರು ನೇರವಾಗಿ ಅಮರೇಶ್ವರ ಜಾತ್ರೆಯಲ್ಲಿ ಪಾಲ್ಗೊಳ್ಳಲು ಬಯಸಿದಲ್ಲಿ ಅಂಥವರು ಸಮೀಪದ ಸಾರಿಗೆ ಸಂಸ್ಥೆಯ ಕಚೇರಿಯನ್ನು ಸಂಪರ್ಕಿಸಿದಲ್ಲಿ ಅಂಥ ಗ್ರಾಮದಿಂದಲೇ ಬಸ್ ಸೌಲಭ್ಯ ಒದಗಿಸಲಾಗುತ್ತದೆ ಎಂದು ತಿಳಿಸಿದ್ದಾರೆ. ಜಾತ್ರಾ ಮಹೋತ್ಸವಕ್ಕೆ ತೆರಳುವ ಭಕ್ತರು ಸಾರಿಗೆ ಸಂಸ್ಥೆಯು ಒದಗಿಸಿರುವ ಸರ್ಕಾರಿ ಬಸ್ಗಳ ಸೌಲಭ್ಯದ ಸದುಪಯೋಗ ಪಡೆಯುವಂತೆ ಮನವಿ ಮಾಡಿದ್ದಾರೆ.
ವ್ಯಕ್ತಿ ಆತ್ಮಹತ್ಯೆ
ರಾಯಚೂರು: ಲಿಂಗಸ್ಗೂರು ತಾಲೂಕಿನ ತಲೆಖಾನ್ ಗ್ರಾಮದಲ್ಲಿ ವ್ಯಕ್ತಿಯೊಬ್ಬ ಆತ್ಮಹತ್ಯೆ ಮಾಡಿಕೊಂಡಿದ್ದಾನೆ. ಮೃತನನ್ನು ಅಮರೇಶ್ ಎಂದು ಗುರುತಿಸಲಾಗಿದೆ. ಈತ ಕಳೆದ ಅನೇಕ ದಿನಗಳಿಂದ ಹೊಟ್ಟೆನೋವಿನಿಂದ ಬಳಲುತ್ತಿದ್ದು, ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಕೊಡಿಸಲಾಗಿತ್ತು. ಅದರಿಂದ ಈತನ ಆರೋಗ್ಯ ಸುಧಾರಿಸಿತ್ತು. ಆದರೆ ಆತನ ಶವ ಗ್ರಾಮದ ಹಳ್ಳದ ದಂಡೆಯಲ್ಲಿರುವ ಹೊಲದಲ್ಲಿನ ಮರಕ್ಕೆ ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡಿದ್ದಾನೆಂದು ಪೊಲೀಸರು ತಿಳಿಸಿದ್ದಾರೆ.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Advertisement