ಎಎನ್ಎಂಗಳ ನೇಮಕಾತಿಗೆ ಎಐಯುಟಿಯುಸಿ ಒತ್ತಾಯ
ಕನ್ನಡಪ್ರಭ ವಾರ್ತೆ ರಾಯಚೂರು ಮಾ.24
ಕಿರಿಯ ಮಹಿಳಾ ಆರೋಗ್ಯ ಸಹಾಯಕಿಯರ ನೇಮಕಾತಿಯಲ್ಲಿನ ಲೋಪಗಳನ್ನು ಸರಿಪಡಿಸಿ ಶೀಘ್ರ ಆಯ್ಕೆ ಪಟ್ಟಿ ಬಿಡುಗಡೆಗೊಳಿಸುವಂತೆ ಎಐಯುಟಿಯುಸಿ ಆಗ್ರಹಿಸಿದೆ.
ಈ ಬಗ್ಗೆ ಸಂಘಟನೆಯ ಕಾರ್ಯಕರ್ತರು ಜಿಲ್ಲಾಧಿಕಾರಿಗಳ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸೇವೆಗಳ ಆಯುಕ್ತರಿಗೆ ಮನವಿ ಸಲ್ಲಿಸಿ, ಆರೋಗ್ಯ ಇಲಾಖೆಯಲ್ಲಿ ಕಿರಿಯ ಮಹಿಳಾ ಆರೋಗ್ಯ ಸಹಾಯಕಿಯರ ತರಬೇತಿಯನ್ನು ಪೂರ್ಣಗೊಳಿಸಿದ ಪ್ರಶಿಕ್ಷಣಾರ್ಥಿಗಳಿಗೆ ಇಲಾಖೆಯಲ್ಲಿ ಕೂಡಲೇ ಖಾಲಿಯಿರುವ ಹುದ್ದೆಗಳಿಗೆ ನೇಮಕಾತಿ ಮಾಡಬೇಕೆಂದು ಆಗ್ರಹಿಸಿದ್ದಾರೆ.
2008- 09ರಿಂದ ಇದುವರೆಗೆ ಎಎನ್ಎಂ ಕೋರ್ಸು ಪೂರ್ಣಗೊಳಿಸಿದ ಎಲ್ಲರನ್ನು ಹುದ್ದೆಗಳ ಲಭ್ಯತೆಗೆ ತಕ್ಕಂತೆ ನೇಮಕಾತಿ ಮಾಡಿಕೊಳ್ಳಬೇಕು. ಇಲಾಖೆಯ ವಿಶೇಷ ನೇಮಕಾತಿ ಸಮಿತಿಯು 7.4.2011ರ ಅಧಿಸೂಚನೆಯಂತೆ ನೇಮಕಾತಿ ಮಾಡಿಕೊಳ್ಳುವಂತೆ ಒತ್ತಾಯಿಸಿದ್ದಾರೆ.
ಕಿರಿಯ ಆರೋಗ್ಯ ಸಹಾಯಕರ ಹುದ್ದೆಗೆ ಈಗಾಗಲೇ ಸಲ್ಲಿಕೆಯಾದ ಅರ್ಜಿಗಳನ್ನು ಪರಿಶೀಲಿಸಿ ಆಯ್ಕೆ ಪಟ್ಟಿ ಪ್ರಕಟಿಸಬೇಕೆಂಬುದು ಸೇರಿ ವಿವಿಧ ಬೇಡಿಕೆಗಳನ್ನು ಈಡೇರಿಸುವಂತೆ ಸಂಘಟನೆಯ ಪ್ರಮುಖರಾದ ವೀರೇಶ್ ಎನ್.ಎಸ್., ರೇಣುಕಾ, ರೋಷನ್ ಹಟ್ಟಿ, ಸುವರ್ಣ, ಸವಿತಾ, ರತ್ನಮ್ಮ ಮತ್ತಿತರರು ಇದ್ದರು.