ರಾಜ್ಯದೇಶರಾಜಕೀಯಕ್ರಿಕೆಟ್ವಿದೇಶವಾಣಿಜ್ಯ
ಸಿನಿಮಾ▾
ಅಂಕಣಗಳು
⋮
ರಾಯಚೂರು

ಸಿಇಟಿ ಉಚಿತ ತರಬೇತಿ ಶಿಬಿರ

Rashmi Kasaragodu
Updated On : 25 Mar 2013, 11:32 am

ಗುಲ್ಬರ್ಗ: ಅಖಿಲ ಭಾರತೀಯ ವಿದ್ಯಾರ್ಥಿ ಪರಿಷತ್ ನಗರದ ಶಾಖೆ ವತಿಯಿಂದ ದ್ವಿತೀಯ ವರ್ಷದ ವಿಜ್ಞಾನ ವಿಭಾಗದ ವಿದ್ಯಾರ್ಥಿಗಳಿಗೆ ಉಚಿತ ಸಿಇಟಿ ತರಬೇತಿ ಶಿಬಿರವನ್ನು ಏ.2ರಿಂದ 14 ರವರೆಗೆ ನಗರದ ಸತ್ಯಂ ಪದವಿ ಪೂರ್ವ ಕಾಲೇಜಿನಲ್ಲಿ ನಡೆಸಲು ತೀರ್ಮಾನಿಸಲಾಗಿದೆ.
ಬಡ ಹಾಗೂ ಪ್ರತಿಭಾವಂತ ಗ್ರಾಮೀಣ ವಿದ್ಯಾರ್ಥಿಗಳು ಸಿಇಟಿ ಪರೀಕ್ಷೆಗಳನ್ನು ಸಮರ್ಥವಾಗಿ ಎದುರಿಸಲು  ಉಚಿತ ಸಿಇಟಿ ತರಬೇತಿ ಶಿಬಿರ ಹಮ್ಮಿಕೊಳ್ಳಲಾಗಿದೆ. ಶಿಬಿರದಲ್ಲಿ ಅನುಭವಿ ಹಾಗೂ ನುರಿತ ಉಪನ್ಯಾಸಕರಿಂದ ತರಗತಿಗಳು ನಡೆಯಲಿದ್ದು, ತರಬೇತಿ ಕೊನೆಯಲ್ಲಿ ಸಿಇಟಿ ಮಾದರಿಯ ಪರೀಕ್ಷೆಗಳನ್ನು ಪ್ರತಿ ವಿಷಯದಲ್ಲೂ ನಡೆಸಲಾಗುವುದು. ಆದ್ದರಿಂದ ಗುಲ್ಬರ್ಗ ಜಿಲ್ಲೆಯ ಬಡ ಹಾಗೂ ಪ್ರತಿಭಾವಂತ ವಿದ್ಯಾರ್ಥಿಗಳು ಇದರ ಲಾಭ ಪಡೆದುಕೊಳ್ಳಬೇಕೆಂದು ಸಿಇಟಿ ಸಂಚಾಲಕಿ ರೋಹಿಣಿ ಪಾಟೀಲ್ ಹಾಗೂ ನಗರ ಕಾರ್ಯದರ್ಶಿ ಪ್ರವೀಣ ನಾಯಕ ತಿಳಿಸಿದ್ದಾರೆ. ಹೆಚ್ಚಿನ ಮಾಹಿತಿಗಾಗಿ ಮೊ. 9448084262 ಹಾಗೂ 8147377109 ಗೆ ಸಂಪರ್ಕಿಸಲು ಕೋರಲಾಗಿದೆ.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Advertisement