ರಾಜ್ಯದೇಶರಾಜಕೀಯಕ್ರಿಕೆಟ್ವಿದೇಶವಾಣಿಜ್ಯ
ಸಿನಿಮಾ▾
ಅಂಕಣಗಳು
⋮
ರಾಯಚೂರು

ಅಧಿಕ ಹಣ ವಸೂಲಿ; ಕರವೇ ಆಗ್ರಹ

Rashmi Kasaragodu
Updated On : 26 Mar 2013, 11:01 am

ಕನ್ನಡಪ್ರಭ ವಾರ್ತೆ   ಲಿಂಗಸ್ಗೂರು   ಮಾ.25
ಪಡಿತರ ಚೀಟಿ ಭಾವಚಿತ್ರ ತೆಗೆಯುವ ಬಯೋ ಕೇಂದ್ರ(ಫ್ರಾಂಚೈಸಿ)ದಲ್ಲಿ ನಿಗದಿತ ದರಕ್ಕಿಂತ ಹೆಚ್ಚಿನ ಹಣ ವಸೂಲಿ ಮಾಡಲಾಗುತ್ತಿದೆ ಎಂದು ಆರೋಪಿಸಿದ ಕರ್ನಾಟಕ ರಕ್ಷಣಾ ವೇದಿಕೆ ಕಾರ್ಯಕರ್ತರು, ಕೂಡಲೇ ಕ್ರಮ ಕೈಗೊಳ್ಳುವಂತೆ ಸಹಾಯಕ ಆಯುಕ್ತರಿಗೆ ಸೋಮವಾರ ಮನವಿ ಸಲ್ಲಿಸಿದರು.
ಪಟ್ಟಣದ ಪುರಸಭೆ ವ್ಯಾಪ್ತಿಯಲ್ಲಿ ಆಹಾರ ಮತ್ತು ನಾಗರಿಕ ಸರಬರಾಜು ಮತ್ತು ಗ್ರಾಹಕರ ವ್ಯವಹಾರಗಳ ಇಲಾಖೆಯಿಂದ ಮಾನ್ಯತೆ ಪಡೆದು ಆನ್ಲೈನ್ ಮೂಲಕ ಹೊಸ ಪಡಿತರ ಚೀಟಿಗಳ ಭಾವಚಿತ್ರ ಸೆರೆ ಹಿಡಿಯಲು ನಾಲ್ಕು ಕಡೆಗಳಲ್ಲಿ ಬಯೋ ಕೇಂದ್ರಗಳನ್ನು ಸ್ಥಾಪಿಸಿರುವುದು ಸ್ವಾಗತಾರ್ಹ ಕ್ರಮವಾಗಿದೆ. ಆದರೆ ಸದರಿ ಫ್ರಾಂಚೈಸಿ ಕೇಂದ್ರಗಳ ಪೈಕಿ ಕೆಲವು ಕೆಂದ್ರಗಳಲ್ಲಿ ಸರ್ಕಾರ ನಿಗದಿ ಪಡಿಸಿದ ದರಕ್ಕಿಂತ ಹೆಚ್ಚಿನ ಹಣ ಪಡೆಯುತ್ತಿದ್ದು, ಇದರಿಂದ ಬಡವರಿಗೆ, ಕೂಲಿ ಕಾರ್ಮಿಕರಿಗೆ ತೀವ್ರ ತೊಂದರೆಯಾಗಿದೆ.
ಬಯೋ ಫ್ರಾಂಚೈಸಿ ಕೇಂದ್ರಗಳನ್ನು ಪರಿಶೀಲಿಸಿ ನಿಗದಿತ ದರಕ್ಕಿಂತ ಹೆಚ್ಚಿನ ಹಣ ವಸೂಲಿ ಮಾಡುತ್ತಿರುವ ಕೇಂದ್ರಗಳ ವಿರುದ್ಧ ಕ್ರಮ ಕೈಗೊಂಡು ಅವರ ಪರವಾನಗಿ ರದ್ದುಪಡಿಸಬೇಕು. ಇಲ್ಲದಿದ್ದರೆ ಫ್ರಾಂಚೈಸಿ ಕೇಂದ್ರಗಳ ಮುಂದೆ ಉಗ್ರ ಪ್ರತಿಭಟನೆ ನಡೆಸಲಾಗುವುದೆಂದು ಮನವಿಯಲ್ಲಿ ಎಚ್ಚರಿಕೆ ನೀಡಿದ್ದಾರೆ.
ಈ ಸಂದರ್ಭದಲ್ಲಿ ಕರವೇ ಕಾರ್ಯಕರ್ತರಾದ ಶಿವರಾಜ ನಾಯಕ, ಆಂಜನೇಯ ಭಂಡಾರಿ, ಅಜೀಜ್ ಪಾಶಾ, ಬಿ.ಎಸ್. ನಾಯಕ, ಅಮರೇಶ ನಾಯಕ, ಜಿಲಾನಿ ಹುಸೇನ, ನಿಷಾದ, ಯಾಸೀನ್, ಶೌಕತ್ ಅಲಿ, ರಾಘವೇಂದ್ರ, ರವಿ ಕುಮಾರ, ರಾಜು, ಲಕ್ಷ್ಮಣ ಸೇರಿದಂತೆ ಇನ್ನಿತರರು ಇದ್ದರು.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Advertisement