ರಾಜ್ಯದೇಶರಾಜಕೀಯಕ್ರಿಕೆಟ್ವಿದೇಶವಾಣಿಜ್ಯ
ಸಿನಿಮಾ▾
ಅಂಕಣಗಳು
⋮
ರಾಯಚೂರು

ಶಾಂತಿಸಭೆಗೆ ಮುಖಂಡರ ಕಡೆಗಣನೆ; ಆರೋಪ

Rashmi Kasaragodu
Updated On : 26 Mar 2013, 11:02 am

ಕ.ಪ್ರ. ವಾರ್ತೆ   ಸಿಂಧನೂರು   ಮಾ.25
ಬಳಗಾನೂರು ಪೊಲೀಸ್ ಠಾಣೆಯಲ್ಲಿ ಹೋಳಿ ಹಬ್ಬದ ಪ್ರಯುಕ್ತ ನಡೆದ ಶಾಂತಿಸಭೆಗೆ ಶಾಂತಿಪಾಲನಾ ಸಮಿತಿ ಸದಸ್ಯರು ಹಾಗೂ ಗ್ರಾಮದ ಪ್ರಮುಖರನ್ನು ಆಹ್ವಾನಿಸದೇ ನಡೆಸಲಾಗಿದೆ ಎಂದು ಮುಖಂಡರು ಆರೋಪಿಸಿದ್ದಾರೆ.
ಈ ಕುರಿತು ಸೋಮವಾರ ಪತ್ರಿಕಾ ಹೇಳಿಕೆ ನೀಡಿರುವ ಗ್ರಾಮ ಪಂಚಾಯಿತಿ ಮಾಜಿ ಅಧ್ಯಕ್ಷ ಸಿದ್ದನಗೌಡ ಮಾಲಿ ಪಾಟೀಲ್, ಠಾಣೆಗೆ ಪಿಎಸ್ಐ ಆಗಿ ಬಂದಾಗಿನಿಂದಲೂ ಬಾಳನಗೌಡ ಅವರು ಶಾಂತಿಪಾಲನಾ ಸಭೆಗೆ ಪ್ರಮುಖರನ್ನು ಕಡೆಗಣಿಸುತ್ತಾ ಬಂದಿದ್ದಾರೆ. ಸೌಜನ್ಯಕ್ಕಾದರೂ ತಿಳಿಸುವುದಿಲ್ಲ. ಇದರಿಂದ ಗ್ರಾಮದಲ್ಲಿ ಶಾಂತಿ, ಸುವ್ಯವಸ್ಥೆಗೆ ಅಡಚಣೆ ಉಂಟಾಗುತ್ತಿದೆ ಎಂದು ಬೇಸರ ವ್ಯಕ್ತಪಡಿಸಿದ್ದಾರೆ.
ವಿಫಲ ಆರೋಪ: ಗ್ರಾಮದಲ್ಲಿ ಮಟ್ಕಾ, ಇಸ್ಪೀಟ್ ಜೂಜಾಟ, ಅಕ್ರಮ ಮದ್ಯ ಮಾರಾಟ ಸೇರಿದಂತೆ ಆಗಾಗ ಸಣ್ಣಪುಟ್ಟ ಜಗಳಗಳು ಸಾಮಾನ್ಯವಾಗಿದ್ದು, ಅಕ್ರಮ ಚಟುವಟಿಕೆಗಳಿಗೆ ಕಡಿವಾಣ ಹಾಕುವಲ್ಲಿ ಪೊಲೀಸ್ ಠಾಣಾ ಸಿಬ್ಬಂದಿ ವಿಫಲರಾಗಿದ್ದಾರೆ ಎಂದು ದೂರಿದ್ದಾರೆ. ಈ ಹಿಂದೆ ನಿಗದಿತವಾಗಿ ಸಭೆ ಜರುಗುತ್ತಿದ್ದವು. ಅಲ್ಲದೆ, ಎಲ್ಲರನ್ನೂ ಕರೆಯುತ್ತಿದ್ದರೂ ಈಚೆಗೆ ನಿರ್ಲಕ್ಷ್ಯ ಮಾಡಲಾಗುತ್ತಿದೆ ಎಂದು ಗ್ರಾಪಂ ಅಧ್ಯಕ್ಷೆ ಜಿ.ಗುತ್ತೇದಾರ, ವಿಎಸ್ಎಸ್ಎನ್ ಅಧ್ಯಕ್ಷ ರಾಘವೇಂದ್ರ ಕುಲಕರ್ಣಿ ಅಸಮಾಧಾನ ವ್ಯಕ್ತಪಡಿಸಿದರು.
ಠಾಣಾ ವ್ಯಾಪ್ತಿಯ ಎಲ್ಲ ಹಳ್ಳಿಗಳಲ್ಲಿ ಶಾಂತಿ- ಸುವ್ಯವಸ್ಥೆ ಕಾಪಾಡುವ ಹಿನ್ನೆಲೆಯಲ್ಲಿ ಸದಸ್ಯರನ್ನು ಒಳಗೊಂಡ ಸಮಿತಿ ರಚಿಸುವಂತೆ ಸಾರ್ವಜನಿಕರು ಮನವಿ ಮಾಡಿದ್ದಾರೆ.


Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Advertisement