ಸಭೆ ಮಾಡದೇ ಮನೆ ಹಂಚಿಕೆ: ದೂರು
ಯಾದಗಿರಿ: ಶಹಾಪುರ ತಾಲೂಕು ಬಿಳ್ಹಾರ ಗ್ರಾಪಂ ಅಭಿವೃದ್ಧಿ ಅಧಿಕಾರಿಯು ಗ್ರಾಮ ಸಭೆ ಮಾಡದೆ ತಮಗೆ ಬೇಕಾದವರಿಗೆ ಅಕ್ರಮವಾಗಿ ವಸತಿ ಯೋಜನೆಗಳ ಮನೆಗಳನ್ನು ಹಂಚಿಕೆ ಮಾಡಿದ್ದಾರೆ ಎಂದು ಅರೋಪಿಸಿ ಕರವೇ ಜಿಲ್ಲಾಧ್ಯಕ್ಷ ಟಿ.ಎನ್. ಭೀಮುನಾಯಕ ನೇತೃತ್ವದಲ್ಲಿ ಕಾರ್ಯಕರ್ತರು ಡಿಸಿಗೆ ಮನವಿ ಸಲ್ಲಿಸಿದ್ದಾರೆ.