ಎಬಿವಿಪಿಯಿಂದ ಬಲಿದಾನ ದಿನ
ರಾಯಚೂರು: ನಗರದ ಜೇಸಿಐ ಭವನದಲ್ಲಿ ಈಚೆಗೆ ಭಗತ್ ಸಿಂಗ್, ಸುಖದೇವ್, ರಾಜಗುರು ಅವರ ಬಲಿದಾನದ ನೆನಪಿನಲ್ಲಿ ಎಬಿವಿಪಿ ಸಂಘಟನೆಯಿಂದ ಸಮಾರಂಭ ಆಯೋಜಿಸಲಾಗಿತ್ತು. ಕಾರ್ಯಕ್ರಮದಲ್ಲಿ ಎಬಿವಿಪಿ ರಾಷ್ಟ್ರೀಯ ಕಾರ್ಯದರ್ಶಿ ವಿನಯ್ ಬಿದರೆ ಮುಖ್ಯ ಅತಿಥಿಯಾಗಿ ಪಾಲ್ಗೊಂಡು ವಿವಿಧ ಸ್ಪರ್ಧೆಗಳ ವಿಜೇತರಿಗೆ ಬಹುಮಾನ ವಿತರಿಸಿದರು. ಸಮಾರಂಭದ ಅಧ್ಯಕ್ಷತೆಯನ್ನು ಎಸ್ಕೆಇ ಶಿಕ್ಷಣ ಸಮೂಹ ಸಂಸ್ಥೆಯ ಅಧ್ಯಕ್ಷ ಬಾಬುರಾವ್ ಶೇಗುಣಸಿ ವಹಿಸಿದ್ದರು. ಎಸ್ಎಸ್ಎಂ ಮಹಾವಿದ್ಯಾಲಯದ ಪ್ರಾಚಾರ್ಯ ಎಸ್.ಎ. ಮಾಲಿಪಾಟೀಲ್, ಎಬಿವಿಪಿ ಜಿಲ್ಲಾ ಪ್ರಮುಖ್ ನಿಜಾನಂದರೆಡ್ಡಿ, ನಗರ ಕಾರ್ಯದರ್ಶಿ ಬಸವೇಶ್ ಕೋರಿ ಸೇರಿದಂತೆ ಅನೇಕರು ಪಾಲ್ಗೊಂಡಿದ್ದರು. ಎಬಿವಿಪಿ ಕಾರ್ಯಕರ್ತರು ಸಮಾರಂಭದಲ್ಲಿದ್ದರು.