ಮಸ್ಕಿ ಕ್ಷೇತ್ರದಿಂದ ಸ್ಪರ್ಧೆ: ನಾಯಕ ವಿಶ್ವಾಸ
ಮಸ್ಕಿ: ರಾಜ್ಯ ವಿಧಾನಸಭೆಯ ಚುನಾವಣೆಗೆ ಮಸ್ಕಿ ಕ್ಷೇತ್ರದಲ್ಲಿ ಜೆಡಿಎಸ್ ಪಕ್ಷದಿಂದ ತಾವು ಸ್ಪರ್ಧಿಸುತ್ತಿರುವುದಾಗಿ ಜೆಡಿಎಸ್ ಮುಖಂಡ ಅಮರೇಶ ನಾಯಕ ಬಲ್ಲಟಗಿ ಹೇಳಿದರು. ಪಟ್ಟಣದಲ್ಲಿ ಮಂಗಳವಾರ ಸುದ್ದಿಗಾರರೊಂದಿಗೆ ಮಾತನಾಡಿ, ಜೆಡಿಎಸ್ ರಾಜ್ಯಾಧ್ಯಕ್ಷ ಕುಮಾರಸ್ವಾಮಿ ಅವರು ತಮಗೆ ಟಿಕೆಟ್ ನೀಡುವ ಬಗ್ಗೆ ಭರವಸೆ ನೀಡಿದ್ದು ತಮ್ಮ ಸ್ಪರ್ಧೆ ಖಚಿತವೆಂದು ವಿಶ್ವಾಸ ವ್ಯಕ್ತಪಡಿಸಿದರು.
ಈಗಾಗಲೇ ಮಸ್ಕಿ ವಿಧಾನಸಭಾ ಕ್ಷೇತ್ರದ ವ್ಯಾಪ್ತಿಯಲ್ಲಿನ ಮಾನ್ವಿ ತಾಲೂಕಿನ ಗ್ರಾಮಗಳಲ್ಲಿ ಮೊದಲ ಹಂತದ ಪಕ್ಷದ ಸಂಘಟನೆಯನ್ನು ಪೂರ್ಣಗೊಳಿಸಿರುವುದಾಗಿ ತಿಳಿಸಿದರು. ಮಸ್ಕಿ ಪಟ್ಟಣ ಹಾಗೂ ಸುತ್ತಲಿನ ಗ್ರಾಮಗಳಲ್ಲಿ ಹಾಗೂ ಕ್ಷೇತ್ರದ ಸಿಂಧನೂರು ವ್ಯಾಪ್ತಿಯಲ್ಲಿನ ಗ್ರಾಮಗಳಲ್ಲಿ ಪಕ್ಷ ಸಂಘಟನೆಗೆ ಒತ್ತು ನೀಡಲಾಗುತ್ತಿದೆ ಎಂದರು. ಈ ವೇಳೆ ಎ. ಪರ್ವತರಡ್ಡಿ, ರಾಮು ಮತ್ತಿತರರು ಇದ್ದರು.