ಸಿಂಧನೂರು; ಟ್ರಾಲಿಯಿಂದ ಬಿದ್ದು ಸಾವು
ರಾಯಚೂರು: ಸಿಂಧನೂರು ತಾಲೂಕಿನ ಗಣೇಶನಗರ ಕ್ಯಾಂಪಿನ ಬಳಿ ಟ್ರ್ಯಾಕ್ಟರ್ ಟ್ರಾಲಿಯಿಂದ ಕೆಳಗೆ ಬಿದ್ದು ವ್ಯಕ್ತಿಯೊಬ್ಬ ಮೃತಪಟ್ಟಿದ್ದಾನೆ. ಮೃತನನ್ನು ಈರಪ್ಪ ಎಂದು ಗುರುತಿಸಲಾಗಿದೆ. ಈತ ಟ್ರ್ಯಾಕ್ಟರ್ ಟ್ರಾಲಿಯಲ್ಲಿ ಕುಳಿತು ಹೊರಟಿದ್ದಾಗ ಚಾಲಕನ ನಿರ್ಲಕ್ಷ್ಯದ ಚಾಲನೆಯಿಂದ ಟ್ರಾಲಿಯಿಂದ ಪುಟಿದು ಕೆಳಗೆ ಬಿದ್ದಿದ್ದರಿಂದ ತಲೆಗೆ ಭಾರಿ ಗಾಯವಾಗಿ ಸ್ಥಳದಲ್ಲಿಯೇ ಮೃತಪಟ್ಟಿದ್ದಾನೆಂದು ಪೊಲೀಸರು ತಿಳಿಸಿದ್ದಾರೆ. ಈ ಕುರಿತು ಸಿಂಧನೂರ ಗ್ರಾಮೀಣ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.