ರಾಜ್ಯದೇಶರಾಜಕೀಯಕ್ರಿಕೆಟ್ವಿದೇಶವಾಣಿಜ್ಯ
ಸಿನಿಮಾ▾
ಅಂಕಣಗಳು
⋮
ರಾಯಚೂರು

ಘೋಷ್ ನೂತನ ಡಿಸಿ

Rashmi Kasaragodu
Updated On : 28 Mar 2013, 11:32 am

ಕನ್ನಡಪ್ರಭ ವಾರ್ತೆ   ರಾಯಚೂರು   ಮಾ.27
ಜಿಲ್ಲೆಯ ನೂತನ ಜಿಲ್ಲಾಧಿಕಾರಿಯಾಗಿ ಉಜ್ವಲ್‌ಕುಮಾರ್ ಘೋಷ್ ಅವರನ್ನು ನೇಮಿಸಿ ರಾಜ್ಯ ಸರ್ಕಾರ ಬುಧವಾರ ವರ್ಗಾವಣೆ ಆದೇಶ ಹೊರಡಿಸಿದೆ ಎಂದು ಗೊತ್ತಾಗಿದೆ.
ಸದ್ಯ ಜಿಲ್ಲಾಧಿಕಾರಿಯಾಗಿರುವ ಎಸ್.ಎನ್. ನಾಗರಾಜು ಅವರ ಸ್ಥಾನಕ್ಕೆ ಘೋಷ್ ಅವರನ್ನು ನೇಮಿಸಲಾಗಿದೆ. ಎಸ್.ಎನ್. ನಾಗರಾಜು ಅವರು ಫೆ.19ರಂದು ಜಿಲ್ಲೆಯ ಜಿಲ್ಲಾಧಿಕಾರಿಯಾಗಿ ಅಧಿಕಾರ ವಹಿಸಿಕೊಂಡಿದ್ದರು. ರಾಜ್ಯ ವಿಧಾನಸಭೆ ಚುನಾವಣೆಯ ಹಿನ್ನೆಲೆಯಲ್ಲಿ ಚುನಾವಣೆ ಆಯೋಗದ ಸೂಚನೆ ಮೇರೆಗೆ ಸರ್ಕಾರ ಉಜ್ವಲ್‌ಕುಮಾರ್ ಘೋಷ್ ಅವರನ್ನು ಜಿಲ್ಲಾಧಿಕಾರಿಯಾಗಿ ವರ್ಗಾಯಿಸಿದೆ ಎಂದು ಹೇಳಲಾಗಿದೆ.
ವರ್ಗಾವಣೆಗೇನು ಕಾರಣ?: ಇತ್ತೀಚೆಗೆ ನಡೆದ ಸ್ಥಳೀಯ ಸಂಸ್ಥೆಯ ಚುನಾವಣೆಯಲ್ಲಿ ನಗರ ಸೇರಿದಂತೆ ಜಿಲ್ಲಾದ್ಯಂತ ಮತದಾರರ ಹೆಸರುಗಳು ಮತದಾರರ ಪಟ್ಟಿಯಿಂದ ನಾಪತ್ತೆಯಾಗಿದ್ದ ಪ್ರಕರಣದ ಬಗ್ಗೆ ಚುನಾವಣೆ ಆಯೋಗಕ್ಕೆ ಅನೇಕ ರಾಜಕೀಯ ನಾಯಕರು ದೂರು ಸಲ್ಲಿಸಿದ್ದರು. ಆ ಹಿನ್ನೆಲೆಯಲ್ಲಿ ಸದ್ಯದ ಜಿಲ್ಲಾಧಿಕಾರಿಗಳ ವರ್ಗಾವಣೆ ನಡೆದಿದೆ ಎಂದು ಹೇಳಲಾಗಿದೆ.
ಆದರೆ ಅದೇ ರೀತಿ ಚುನಾವಣೆ ವೇಳೆ ನಗರ ಸೇರಿದಂತೆ ತಾಲೂಕು ಮಟ್ಟದ ಅಧಿಕಾರಿಗಳ ಅಸಮರ್ಪಕ ಕಾರ್ಯನಿರ್ವಹಣೆ ಬಗ್ಗೆ ಜಿಲ್ಲಾಧಿಕಾರಿ ಎಸ್.ಎನ್. ನಾಗರಾಜು ತೀವ್ರ ಬೇಸರ ವ್ಯಕ್ತಪಡಿಸಿದ್ದರು. ರಾಜ್ಯ ವಿಧಾನಸಭೆ ಚುನಾವಣೆಯ ಹಿನ್ನೆಲೆಯಲ್ಲಿ ಅವರು ಜಿಲ್ಲಾಡಳಿತದಲ್ಲಿನ ಅವ್ಯವಸ್ಥೆಯಿಂದ ಬೇಸತ್ತು ತಮ್ಮ ವರ್ಗಾವಣೆಗೆ ಪ್ರಯತ್ನ ನಡೆಸಿದ್ದರೆಂದು ಹೇಳಲಾಗಿತ್ತು.
ಜಿಲ್ಲೆಯ ನೂತನ ಜಿಲ್ಲಾಧಿಕಾರಿ ಉಜ್ವಲಕುಮಾರ್ ಘೋಷ್ ಅವರು ಈ ಹಿಂದೆ ಜಿಲ್ಲೆಯ ಲಿಂಗಸ್ಗೂರು ವಿಭಾಗದ ಸಹಾಯಕ ಆಯುಕ್ತರಾಗಿ ಕಾರ್ಯನಿರ್ವಹಿಸಿದ್ದಾರೆ. ಅದೇ ರೀತಿ ರಾಯಚೂರು ಪ್ರಭಾರಿ ಉಪವಿಭಾಗಾಧಿಕಾರಿಯಾಗಿಯೂ ಕಾರ್ಯನಿರ್ವಹಿಸಿದ್ದಾರೆ.


Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Advertisement