ರಾಜ್ಯದೇಶರಾಜಕೀಯಕ್ರಿಕೆಟ್ವಿದೇಶವಾಣಿಜ್ಯ
ಸಿನಿಮಾ▾
ಅಂಕಣಗಳು
⋮
ರಾಯಚೂರು

ಡಿಕ್ಕಿ: ಮಾನಸಿಕ ಅಸ್ವಸ್ಥೆ ಸಾವು

Rashmi Kasaragodu
Updated On : 28 Mar 2013, 11:33 am

ರಾಯಚೂರು: ಮಾನವಿ ನಗರದ ಬಸ್ ನಿಲ್ದಾಣದಲ್ಲಿ ಮಾನಸಿಕ ಅಸ್ವಸ್ಥೆಗೆ ಬಸ್ ಡಿಕ್ಕಿ ಹೊಡೆದು ಆಕೆ ಮೃತಪಟ್ಟಿದ್ದಾಳೆ. ಮೃತಳನ್ನು ಪಾರ್ವತಿ ಎಂದು ಗುರುತಿಸಲಾಗಿದೆ. ಈಕೆ ಬಸ್ ನಿಲ್ದಾಣದಲ್ಲಿ ಕೊಳವೆಬಾವಿ ಕೊರೆಯಿಸುತ್ತಿದ್ದ ಸ್ಥಳದಲ್ಲಿ ನಿಂತಿದ್ದಾಗ ಹಿಂದಿನಿಂದ ವೇಗವಾಗಿ ಬಂದ ಹುಬ್ಬಳ್ಳಿ- ಹೈದರಾಬಾದ್ ಬಸ್ ವೇಗವಾಗಿ ಬಂದು ಚಾಲಕನ ನಿರ್ಲಕ್ಷ್ಯದಿಂದ ಡಿಕ್ಕಿ ಹೊಡೆದಿದೆ. ್ದರಿಂದ ಆಕೆ ಸ್ಥಳದಲ್ಲಿಯೇ ಸಾವಿಗೀಡಾಗಿದ್ದಾಳೆಂದು ಪೊಲೀಸರು ತಿಳಿಸಿದ್ದಾರೆ. ಈ ಕುರಿತು ಮಾನವಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಯುವತಿ ಆತ್ಮಹತ್ಯೆ
ರಾಯಚೂರು: ಸಿಂಧನೂರು ತಾಲೂಕಿನ ರೌಡಕುಂದಾ ಗ್ರಾಮದಲ್ಲಿ ಅತೀಯಾದ ತಲೆನೋವಿನಿಂದ ಬೇಸತ್ತ ಯುವತಿಯೊಬ್ಬಳು ಆತ್ಮಹತ್ಯೆ ಮಾಡಿಕೊಂಡಿದ್ದಾಳೆ. ಮೃತಳನ್ನು ಭುವನೇಶ್ವರಿ ಎಂದು ಗುರುತಿಸಲಾಗಿದೆ. ಕಳೆದ ಮೂರು ವರ್ಷಗಳಿಂದ ಅತೀಯಾದ ತಲೆನೋವಿನಿಂದ ಬಳಲುತ್ತಿದ್ದು ಅದರಿಂದ ಜೀವನದಲ್ಲಿ ಜಿಗುಪ್ಸೆಗೊಂಡಿದ್ದ ಆಕೆ ತಲೆನೋವಿನ ಬಾಧೆ ತಾಳದೆ ಕ್ರಿಮಿನಾಶಕ ಮಾತ್ರೆ ಸೇವಿಸಿದ್ದು ಆಸ್ಪತ್ರೆಯಲ್ಲಿ ಚಿಕಿತ್ಸೆ ಫಲಿಸದೇ ಮೃತಪಟ್ಟಿದ್ದಾಳೆಂದು ಪೊಲೀಸರು ತಿಳಿಸಿದ್ದಾರೆ.


Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Advertisement