ರಾಜ್ಯದೇಶರಾಜಕೀಯಕ್ರಿಕೆಟ್ವಿದೇಶವಾಣಿಜ್ಯ
ಸಿನಿಮಾ▾
ಅಂಕಣಗಳು
⋮
ರಾಯಚೂರು

'ಸಮಾಜದ ಪ್ರಗತಿಗೆ ಸಮಾನತೆ ಅವಶ್ಯ'

Rashmi Kasaragodu
Updated On : 28 Mar 2013, 11:38 am

ರಾಯಚೂರು: ತಾಲೂಕಿನ ಹೂಗನಹಳ್ಳಿ ಗ್ರಾಮದಲ್ಲಿ ಎಲ್‌ಐಸಿ ವಿಭಾಗೀಯ ಕಚೇರಿಯ ವಿಮಾ ನೌಕರರ ಸಂಘದ ಮಹಿಳಾ ಘಟಕದಿಂದ ಈಚೆಗೆ ಅಂತಾರಾಷ್ಟ್ರೀಯ ಮಹಿಳಾ ದಿನಾಚರಣೆ ಸಮಾರಂಭ ಆಯೋಜಿಸಲಾಗಿತ್ತು.
ಸಮಾರಂಭದಲ್ಲಿ ರಾಯಚೂರಿನ ಸರ್ಕಾರಿ ಪದವಿ ಪೂರ್ವ ಕಾಲೇಜಿನ ಪ್ರಾಧ್ಯಾಪಕ ಅಮರೇಗೌಡರು ಮಾತನಾಡಿ, ಮಾನವ ಸಮಾಜವು ಸರ್ವತೋಮುಖ ಅಭಿವೃದ್ಧಿ ಹೊಂದಿದಾಗ ಮಾತ್ರ ಸಮಾನತೆ ಕಾಣಬಹುದು. ಪುರುಷ ಮತ್ತು ಸ್ತ್ರೀಯರಿಗೆ ಸಮಾನ ಅವಕಾಶಗಳಿರಬೇಕು. ಆಗ ಮಾತ್ರ ಸಮಾಜದ ಅಭಿವೃದ್ಧಿ ಸಾಧ್ಯ ಎಂದರು.
ವಿಮಾ ನೌಕರರ ಸಂಘದ ಪ್ರಧಾನ ಕಾರ್ಯದರ್ಶಿ ರವಿ ಮಾತನಾಡಿ, ಸಂಘವು ಕಳೆದ ಅನೇಕ ವರ್ಷಗಳಿಂದ ಅಂಬೇಡ್ಕರ್ ಜಯಂತಿ, ಮಹಿಳಾ ದಿನಾಚರಣೆ ಮತ್ತಿತರೆ ಕಾರ್ಯಕ್ರಮಗಳನ್ನು ಆಯೋಜಿಸುವ ಮೂಲಕ ಸಮಾಜದ ಕಟ್ಟಕಡೆಯ ವ್ಯಕ್ತಿಗೆ ನೆರವು ನೀಡುವ ಕಾರ್ಯ ಮಾಡುತ್ತಿದೆ ಎಂದು ಮೆಚ್ಚುಗೆ ವ್ಯಕ್ತಪಡಿಸಿದರು.
ಮಹಿಳಾ ಘಟಕದ ಶೋಭಾ ಕಟ್ಟಿ, ಅಂಗನವಾಡಿ ನೌಕರರ ಸಂಘದ ಎಚ್.ಪದ್ಮಾ ಈ ವೇಳೆ ಮಾತನಾಡಿದರು.
ಈ ಸಂದರ್ಭ ಸಮಿತಿಯಿಂದ ವಸ್ತ್ರ ಹಾಗೂ ಸಿಹಿ ವಿತರಿಸಲಾಯಿತು. ಸಮಾರಂಭದ ಅಧ್ಯಕ್ಷತೆಯನ್ನು ಎಂ.ಶರಣಗೌಡ ವಹಿಸಿದ್ದರು.
ವೇದಿಕೆಯಲ್ಲಿ ನಿಖತ್ ಸುಲ್ತಾನ್, ಚಂದ್ರಿಕಾ, ವರಲಕ್ಷ್ಮಿ ಸೇರಿದಂತೆ ಅನೇಕರಿದ್ದರು. ಗ್ರಾಮದ ಹಿರಿಯರು ಹಾಗೂ ಮಹಿಳೆಯರು ಕಾರ್ಯಕ್ರಮದಲ್ಲಿ ಪಾಲ್ಗೊಂಡಿದ್ದರು.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Advertisement