ರಾಜ್ಯದೇಶರಾಜಕೀಯಕ್ರಿಕೆಟ್ವಿದೇಶವಾಣಿಜ್ಯ
ಸಿನಿಮಾ▾
ಅಂಕಣಗಳು
⋮
ರಾಯಚೂರು

ಎರಡು ಕಡೆ ಹೆಸರು; ನೋಟಿಸ್ ಜಾರಿ

Rashmi Kasaragodu
Updated On : 30 Mar 2013, 12:39 pm

ರಾಯಚೂರು: ರಾಯಚೂರು ನಗರ ವಿಧಾನಸಭೆ ಕ್ಷೇತ್ರದ ಎರಡು ಭಾಗಗಳಲ್ಲಿ ಹೆಸರು ಹೊಂದಿರುವ 150ಕ್ಕೂ ಹೆಚ್ಚಿನ ಜನ ಮತದಾರರಿಗೆ ಜಿಲ್ಲಾಡಳಿತ ನೋಟಿಸ್ ಜಾರಿ ಮಾಡಿದೆ. ಈ ಕುರಿತು ಸಹಾಯಕ ಆಯುಕ್ತೆ ಮಂಜುಶ್ರೀ ಅವರು ಮಾ. 31ರೊಳಗೆ ಖುದ್ದಾಗಿ ಒಂದು ಭಾಗದಲ್ಲಿ ಮಾತ್ರ ಹೆಸರು ಉಳಿಸಿಕೊಳ್ಳುವಂತೆ ನೋಟಿಸ್ನಲ್ಲಿ ಸೂಚಿಸಿದ್ದು, ಹಾಗೊಂದು ವೇಳೆ ಎರಡು ಭಾಗಗಳಲ್ಲಿ ಮುಂದಿನ ದಿನಗಳಲ್ಲಿ ಒಬ್ಬನೇ ವ್ಯಕ್ತಿಯ ಹೆಸರುಗಳು ಕಂಡುಬಂದಲ್ಲಿ ಪ್ರಜಾ ಪ್ರಾತಿನಿಧ್ಯ ಕಾಯಿದೆ ಅನುಸಾರ ಕ್ರಮ ಕೈಗೊಳ್ಳುವ ಬಗ್ಗೆ ಎಚ್ಚರಿಕೆಯ ಸಂದೇಶ ರವಾನಿಸಿದ್ದಾರೆಂದು ಗೊತ್ತಾಗಿದೆ. ಕಳೆದ ಕೆಲ ದಿನಗಳಿಂದ ನಗರ ಕ್ಷೇತ್ರದಲ್ಲಿ ಜಾರಿಯಲ್ಲಿರುವ ವಿಧಾನಸಭೆ ಕ್ಷೇತ್ರ ವ್ಯಾಪ್ತಿಯ ಮತದಾರರ ಪಟ್ಟಿ ಪರಿಷ್ಕರಣೆಯ ಪ್ರಕ್ರಿಯೆಯಲ್ಲಿ 150ಕ್ಕೂ ಹೆಚ್ಚಿನ ಸಂಖ್ಯೆಯಲ್ಲಿ ಮತದಾರರ ಹೆಸರುಗಳು ಒಂದಕ್ಕೂ ಹೆಚ್ಚಿನ ಭಾಗಗಳಲ್ಲಿ ಕಂಡುಬಂದಿದ್ದು, ಅಂಥವರಿಗೆ ನೋಟಿಸ್ ನೀಡಲಾಗಿದೆ ಎಂದು ಜಿಲ್ಲಾಡಳಿತದ ಮೂಲಗಳು ತಿಳಿಸಿವೆ. ಮತದಾರರ ಪಟ್ಟಿಯಿಂದ ಎರಡು ಕಡೆ ಹೆಸರು ಹೊಂದಿದವರು ಹೆಸರು ತೆಗೆದು ಹಾಕುವಂತೆ ಕೋರಿ ಫಾರ್ಮ್-7 ಸಲ್ಲಿಸಬೇಕು. ಮಾ.31ರ ಗಡುವು ನಿಗದಿ ಮಾಡಿ ನೋಟಿಸ್ನಲ್ಲಿ ಎಚ್ಚರಿಕೆ ನೀಡಲಾಗಿದೆ.
ಸಹಾಯವಾಣಿ
ರಾಯಚೂರು: ವಿಧಾನಸಭೆ ಚುನಾವಣೆಯ ಹಿನ್ನೆಲೆಯಲ್ಲಿ ನೀತಿ ಸಂಹಿತೆ ಈಗಾಗಲೇ ಜಾರಿಯಾಗಿದ್ದು, ನೀತಿ ಸಂಹಿತೆಯ ಸಮರ್ಪಕ ಜಾರಿ ಮತ್ತು ಶಾಂತಿಯುತ ಚುನಾವಣೆ ನಿರ್ವಹಣೆಗೆ ಜಿಲ್ಲಾಡಳಿತ ಸಹಾಯವಾಣಿ ಮತ್ತು ದೂರು ಸ್ವೀಕೃತಿ ಕೇಂದ್ರದ ವ್ಯವಸ್ಥೆ ಮಾಡಿದೆ. ದಿನದ 24 ಗಂಟೆಗಳ ಕಾಲ ಕಾರ್ಯನಿರ್ವಹಿಸುವ ಈ ಸಹಾಯ ವಾಣಿ ಕೇಂದ್ರಕ್ಕೆ ನೀತಿ ಸಂಹಿತೆ ಉಲ್ಲಂಘನೆ ಸೇರಿದಂತೆ ಚುನಾವಣೆ ಸಂಬಂಧಿ ವಿವಿಧ ದೂರುಗಳನನು ಸಲ್ಲಿಸಬಹುದಾಗಿದೆ. ಈಗಾಗಲೇ ಸಹಾಯ ಕೇಂದ್ರಕ್ಕೆ ಅಗತ್ಯ ಸಿಬ್ಬಂದಿಯನ್ನು ನೇಮಿಸಿದ್ದು, ಒಬ್ಬ ಹಿರಿಯ ಅಧಿಕಾರಿಯನ್ನು ನೋಡಲ್ ಅಧಿಕಾರಿಯಾಗಿ ನಿಯೋಜಿಸಲಾಗಿದೆ ಎಂದು ಜಿಲ್ಲಾಡಳಿತ ತಿಳಿಸಿದೆ. ಸಾರ್ವಜನಿಕರು ಚುನಾವಣೆ ಸಂಬಂಧಿ ದೂರುಗಳನ್ನು ದೂ. 08532 226363 ಇಲ್ಲಿಗೆ ಸಲ್ಲಿಸಬಹುದಾಗಿದೆ.
ಆಯುಧಗಳನ್ನುಹಿಂದಿರುಗಿಸಿ: ಡಿಸಿ
ರಾಯಚೂರು: ಜಿಲ್ಲೆಯಲ್ಲಿ ವಿಧಾನಸಭೆ ಚುನಾವಣೆಯನ್ನು ಶಾಂತಿಯುತವಾಗಿ ಮತ್ತು ಸುಗಮವಾಗಿ ನಿರ್ವಹಿಸುವ ನಿಟ್ಟಿನಲ್ಲಿ ಜಿಲ್ಲೆಯಲ್ಲಿ ಅನುಮತಿ ಪಡೆದು ಆಯುಧ ಹೊಂದಿರುವವರು ಕೂಡಲೇ ತಮ್ಮ ಬಳಿಯಿರುವ ಆಯುಧವನ್ನು ತಮ್ಮ ವ್ಯಾಪ್ತಿಯ ಪೊಲೀಸ್ ಠಾಣೆಗೆ ಹಿಂದಿರುಗಿಸಲು ಜಿಲ್ಲಾಡಳಿತ ಸೂಚಿಸಿದೆ. ಈ ಕುರಿತು ಜಿಲ್ಲಾಧಿಕಾರಿಗಳ ಕಚೇರಿ ಪ್ರಕಟಣೆ ನೀಡಿದ್ದು, ಬ್ಯಾಂಕ್ ಗಳನ್ನು ಹೊರತುಪಡಿಸಿ ಇನ್ನುಳಿದಂತೆ ಭದ್ರತೆಗೆ ಪರವಾನಗಿ ಪಡೆದು ಬಳಕೆ ಮಾಡುತ್ತಿದ್ದ ಸಾರ್ವಜನಿಕರು ಕೂಡಲೇ ತಮ್ಮಲ್ಲಿರುವ ಆಯುಧಗಳನ್ನು ಚುನಾವಣೆ ಪ್ರಕ್ರಿಯೆ ಪೂರ್ಣಗೊಳ್ಳುವವರೆಗೆ ಸಮೀಪದ ಪೊಲೀಸ್ ಠಾಣೆಗೆ ಹಿಂದಿರುಗಿಸುವಂತೆ ಸೂಚಿಸಿದ್ದಾರೆ.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Advertisement