ಅಕ್ರಮ ಮದ್ಯ: ಇಬ್ಬರ ಬಂಧನ
ರಾಯಚೂರು: ಸಿಂಧನೂರು ತಾಲೂಕಿನ ತುರಕಟ್ಟಿ ಕ್ಯಾಂಪಿನಲ್ಲಿ ಬೈಕ್ ನಲ್ಲಿ ಸಾಗಿಸುತ್ತಿದ್ದ ಮದ್ಯ ಜಪ್ತಿ ಮಾಡಲಾಗಿದೆ.ಗ್ರಾಮದ ಕಾಳಿದಾಸ, ತಪೋಸ್ ಎಂಬುವವರು ಬೈಕ್‌ನಲ್ಲಿ ಅಕ್ರಮವಾಗಿ ಮದ್ಯ ಸಾಗಿಸುತ್ತಿದ್ದ ವೇಳೆ ಮಾರ್ಗ ಮಧ್ಯೆ ತಡೆದ ತನಿಖಾ ತಂಡ ತಪಾಸಣೆ ನಡೆಸಿದ ವೇಳೆ ವಿವಿಧ ಕಂಪನಿಗಳ ಮದ್ಯ 2112 ರು. ಬೆಲೆಯದ್ದು ಪತ್ತೆಯಾಗಿದೆ. ಈ ಇಬ್ಬರನ್ನು ಬಂಧಿಸಿರುವ ಪೊಲೀಸರು ಬಳಗಾನೂರು ಪೊಲೀಸ್ ಠಾಣೆಯಲ್ಲಿ ಕೇಸ್ ದಾಖಲಿಸಿದ್ದಾರೆ.
ಅಕ್ರಮ ಮದ್ಯ ಜಪ್ತಿ
ರಾಯಚೂರು: ತಾಲೂಕಿನ ಫತ್ತೆಪೂರ ಗ್ರಾಮದ ಬಳಿ ಆಟೋದಲ್ಲಿ ಅಕ್ರಮವಾಗಿ ಸಾಗಿಸುತ್ತಿದ್ದ ಮದ್ಯವನ್ನು ಜಪ್ತಿ ಮಾಡಲಾಗಿದೆ. ಆಟೋದಲ್ಲಿ ಮಂಜುನಾಥ, ಮಹೇಶ್ ಎಂಬುವವರು ಅಕ್ರಮವಾಗಿ ಮದ್ಯ ಸಾಗಿಸುತ್ತಿದ್ದ ವೇಳೆ ದಾಳಿ ಮಾಡಿದ ಪೊಲೀಸರು ಆರೋಪಿಯನ್ನು ಬಂಧಿಸಿ, ಅವರಿಂದ ಒಟ್ಟು 15ಬಾಕ್ಸ್‌ಗಳಲ್ಲಿದ್ದ ರು. 31,910 ಬೆಲೆಯ ವಿವಿಧ ಕಂಪನಿಗಳ ಮದ್ಯ ಜಪ್ತಿ ಮಾಡಲಾಗಿದೆ. ರಾಯಚೂರು ಗ್ರಾಮೀಣ ಠಾಣೆಯಲ್ಲಿ ಕೇಸ್ ದಾಖಲಾಗಿದೆ.
ಬೈಕ್‌ನಲ್ಲಿ ಮದ್ಯ ಸಾಗಣೆ: ಬಂಧನ
ರಾಯಚೂರು: ತಾಲೂಕಿನ ದೇವಸೂಗೂರು ಗ್ರಾಮದ ಜನತಾ ಕಾಲನಿಯಲ್ಲಿ ಬೈಕ್‌ನಲ್ಲಿ ಮದ್ಯ ಸಾಗಿಸುತ್ತಿದ್ದ ವ್ಯಕ್ತಿಯನ್ನು ಬಂಧಿಸಲಾಗಿದೆ. ಬಂಧಿತನನ್ನು ಆಂಜಿನಪ್ಪ ಎಂದು ಗುರುತಿಸಲಾಗಿದೆ. ಈತ ಬೈಕ್‌ನಲ್ಲಿ ಮದ್ಯ ಸಾಗಿಸುತ್ತಿದ್ದ ವೇಳೆ ದಾಳಿ ಮಾಡಿದ ಪೊಲೀಸರು ಆರೋಪಿಯನ್ನು ಬಂಧಿಸಿ ಅವನಿಂದ ವಿವಿಧ ಕಂಪನಿಗಳ ಒಟ್ಟು ರು. 2610 ಬೆಲೆಯ ಮದ್ಯ ಜಪ್ತಿ ಮಾಡಿದ್ದಾರೆ. ಶಕ್ತಿನಗರ ಠಾಣೆಯಲ್ಲಿ ಕೇಸ್ ದಾಖಲಾಗಿದೆ.
ಮದ್ಯ ಮಾರಾಟ: ವ್ಯಕ್ತಿ ಬಂಧನ
ರಾಯಚೂರು: ಲಿಂಗಸ್ಗೂರು ತಾಲೂಕಿನ ಯರದೊಡ್ಡಿ ಗ್ರಾಮದಲ್ಲಿ ಅಕ್ರಮವಾಗಿ ಮದ್ಯ ಮಾರಾಟ ಮಾಡುತ್ತಿದ್ದ ವ್ಯಕ್ತಿಯನ್ನು ಬಂಧಿಸಲಾಗಿದೆ. ಬಂಧಿತನನ್ನು ಶ್ರೀನಿವಾಸ ಎಂದು ಗುರುತಿಸಲಾಗಿದೆ. ಈತ ತನ್ನ ಮನೆಯ ಮುಂದೆ ಮದ್ಯ ಮಾರಾಟ ಮಾಡುತ್ತಿದ್ದ ವೇಳೆ ದಾಳಿ ಮಾಡಿದ ಪೊಲೀಸರು ಆರೋಪಿಯನ್ನು ಬಂಧಿಸಿದ್ದಾರೆ.