ರಾಜ್ಯದೇಶರಾಜಕೀಯಕ್ರಿಕೆಟ್ವಿದೇಶವಾಣಿಜ್ಯ
ಸಿನಿಮಾ▾
ಅಂಕಣಗಳು
⋮
ರಾಯಚೂರು

ಬಿಎಸ್ಸಾರ್ ಕಾಂಗ್ರೆಸ್‌ಗೆ ಗುಡ್ ಬೈ

Srinivasa Murthy VN
Updated On : 3 May 2013, 11:20 am

ಜಿಲ್ಲಾ ಕಾಂಗ್ರೆಸ್ ಕಚೇರಿಯಲ್ಲಿ ಸೈಯದುದ್ದೀನ್ 'ಕೈ' ಸೇರ್ಪಡೆ
ಕನ್ನಡಪ್ರಭ ವಾರ್ತೆ ರಾಯಚೂರು  ಮೇ.2
ಬಿಎಸ್ಸಾರ್ ಕಾಂಗ್ರೆಸ್ ನಾಯಕರ ವರ್ತನೆಯಿಂದ ಬೇಸತ್ತ ನೂರಾರು ಕಾರ್ಯಕರ್ತರು ಗುರುವಾರ ಬಿಎಸ್ಸಾರ್ ಕಾಂಗ್ರೆಸ್ ತೊರೆದು ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷ ವಸಂತಕುಮಾರ್ ಮತ್ತಿತರ ಸಮ್ಮುಖದಲ್ಲಿ ಕಾಂಗ್ರೆಸ್ ಸೇರ್ಪಡೆಗೊಂಡರು.
ನಗರದ ಐಡಿಎಸ್ ಎಂಟಿ ಬಡಾವಣೆಯ ಪಕ್ಷದ ಕಚೇರಿಯಲ್ಲಿ ಜಿಲ್ಲಾ ಅಲ್ಪಸಂಖ್ಯಾತರ ಘಟಕದ ಅಧ್ಯಕ್ಷ ಸೈಯದುದ್ದೀನ್, ಉಪಾಧ್ಯಕ್ಷ ಸಾಬೀರ್ ಪಟೇಲ್ ಸೇರಿದಂತೆ ಸುಮಾರು 100ಕ್ಕೂ ಹೆಚ್ಚಿನ ಕಾರ್ಯಕರ್ತರು ಪಕ್ಷಕ್ಕೆ ರಾಜಿನಾಮೆ ಸಲ್ಲಿಸಿದರು.
ಈ ವೇಳೆ ಸುದ್ದಿಗಾರರೊಂದಿಗೆ ಮಾತನಾಡಿದ ಸೈಯದುದ್ದೀನ್, ಪಕ್ಷದ ಕೆಲ ಹಿರಿಯ ನಾಯಕರು ಜಿಲ್ಲೆಯಲ್ಲಿ ಪಕ್ಷವನ್ನು ಕಟ್ಟಿ ಬೆಳೆಸಿದ ಕಾರ್ಯಕರ್ತರನ್ನು ಕಡೆಗಣಿಸಿದ್ದಾರೆ. ಪಕ್ಷದ ಮುಂದಿನ ನಡೆಯನ್ನು ಕಾರ್ಯಕರ್ತರ ಕಡೆಗಣಿಸಿ ನಿರ್ಧಾರ ಕೈಗೊಳ್ಳಲಾಗುತ್ತಿದೆ ಎಂದು ಟೀಕಿಸಿದರು.
ಪಕ್ಷದ ಬೆಳವಣಿಗೆ ದುಡಿದ ಕಾರ್ಯಕರ್ತರನ್ನು ಸಮರ್ಥವಾಗಿ ಪ್ರಸಕ್ತ ಚುನಾವಣೆಯಲ್ಲಿ ಬಳಕೆ ಮಾಡದ ಹಿರಿಯ ನಾಯಕರು ಅನಗತ್ಯ ಗೊಂದಲ ಸೃಷ್ಟಿಸುವ ಕಾರ್ಯ ಮಾಡಿದ್ದಾರೆ. ಇದರಿಂದ ಬೇಸತ್ತು ಅಪಾರ ಬೆಂಬಲಿಗರೊಂದಿಗೆ ತಾವು ಕಾಂಗ್ರೆಸ್ ಸೇರಿರುವುದಾಗಿ ತಿಳಿಸಿದರು.
ಪ್ರತಿಕ್ರಿಯೆ: ಬಿಎಸ್ಸಾರ್ ಕಾಂಗ್ರೆಸ್ ನಗರ ಕ್ಷೇತ್ರದ ಅಭ್ಯರ್ಥಿ ಪೂಜಾ ಗಾಂಧಿ ಅವರು ಪಕ್ಷದ ಕಾರ್ಯಕರ್ತರ ರಾಜಿನಾಮೆ ಕುರಿತು ಪ್ರತಿಕ್ರಿಯಿಸಿ, ಪಕ್ಷದಲ್ಲಿ ಎಲ್ಲವೂ ಸರಿಯಾಗಿದೆ. ಕೆಲವರು ಪಕ್ಷ ತೊರೆದಿದ್ದು ಅವರ ವೈಯಕ್ತಿಕ ಅಭಿಪ್ರಾಯ. ಪಕ್ಷವನ್ನು ಅವರು ತೊರೆದಿದ್ದರಿಂದ ಯಾವುದೇ ಪ್ರತಿಕೂಲ ಪರಿಣಾಮವಾಗದು ಎಂದು ಸ್ಪಷ್ಟಪಡಿಸಿದರು.
ಪಕ್ಷಕ್ಕೆ ಕೆಲ ಆಸೆಗಳನ್ನು ಹೊತ್ತು ಬಂದವರು ಸದ್ಯ ಪಕ್ಷ ತೊರೆದಿದ್ದಾರೆ. ತಮ್ಮೊಂದಿಗೆ 2 ಸಾವಿರಕ್ಕೂ ಹೆಚ್ಚಿನ ಕಾರ್ಯಕರ್ತರಿದ್ದಾರೆ. ಅವರೆಲ್ಲರೂ ಚುನಾವಣೆಯಲ್ಲಿ ತಮ್ಮ ಗೆಲವಿಗೆ ದುಡಿಯುತ್ತಿದ್ದಾರೆಂದು ಹೇಳಿದರು.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Advertisement