ರಾಜ್ಯದೇಶರಾಜಕೀಯಕ್ರಿಕೆಟ್ವಿದೇಶವಾಣಿಜ್ಯ
ಸಿನಿಮಾ▾
ಅಂಕಣಗಳು
⋮
ರಾಯಚೂರು

ಕೆಜೆಪಿ ಮುಖಂಡನ ಮೇಲೆ ಕಾಂಗ್ರೆಸ್ಸಿಗರ ಹಲ್ಲೆ; ಆರೋಪ

Vishwanath S
Updated On : 5 May 2013, 12:42 pm

ಕನ್ನಡಪ್ರಭ ವಾರ್ತೆ  ,   ಲಿಂಗಸ್ಗೂರು  ,   ಮೇ 4
ಮಸ್ಕಿ ವಿಧಾನಸಭೆ ಕ್ಷೇತ್ರದ ಕೆಜೆಪಿ ಮುಖಂಡ ವಿಶ್ವನಾಥರಡ್ಡಿ ಇಲಾಲಪುರ ಅವರ ಮೇಲೆ ಕಾಂಗ್ರೆಸ್ ಕಾರ್ಯಕರ್ತರು ಹಲ್ಲೆ ನಡೆಸಿದ್ದು ಅಲ್ಲದೆ ಜೀವ ಬೆದರಿಕೆ ಹಾಕಿದ್ದಾರೆ. ಈ ಕುರಿತು ಪೊಲೀಸ್ ಠಾಣೆಯಲ್ಲಿ ದೂರು ನೀಡುವುದಾಗಿ ಮಸ್ಕಿ ಕ್ಷೇತ್ರದ ಕೆಜೆಪಿ ಅಭ್ಯರ್ಥಿ ಮಹಾದೇವಪ್ಪಗೌಡ ತಿಳಿಸಿದರು.
ಪಟ್ಟಣದ ನಾಗಪ್ಪ ವಕೀಲರ ನಿವಾಸದಲ್ಲಿ ಶನಿವಾರ ಸುದ್ದಿಗಾರರೊಂದಿಗೆ ಮಾತನಾಡಿ, ಕೆಜೆಪಿ ಮುಖಂಡರಾದ ವಿಶ್ವನಾಥರೆಡ್ಡಿ ಇಲಾಲಪುರ, ಬಾಬುಗೌಡ ಇಲಾಲಪುರ, ಮಲ್ಲಿಕಾರ್ಜುನಗೌಡ ಚಿಲ್ಕಾರಾಗಿ ಅವರು ಶನಿವಾರ ಪಕ್ಷದ ಅಭ್ಯರ್ಥಿ ಪರವಾಗಿ ಪ್ರಚಾರ ಕಾರ್ಯ ಮುಗಿಸಿ ರಾತ್ರಿ ತೆರಳುತ್ತಿರುವಾಗ ಅಮರಾವತಿ ಕ್ರಾಸ್ ಹತ್ತಿರ ಐದಾರು ಜನ ಕಾಂಗ್ರೆಸ್ ಕಾರ್ಯಕರ್ತರು ವಾಹನ ಅಡ್ಡಗಟ್ಟಿ ವಿಶ್ವನಾಥರೆಡ್ಡಿ ಅವರನ್ನು ಹೊರಗೆ ಎಳೆದು ಅವರ ಮೇಲೆ ಹಲ್ಲೆ ಮಾಡಿದ್ದು ಅಲ್ಲದೆ ಬಾಯಿಂದ ಕಚ್ಚಿದ್ದಾರೆ ಎಂದು ದೂರಿದರು.
ಕ್ಷೇತ್ರದಾದ್ಯಂತ ಶಾಂತಿಯುತವಾಗಿ ಪ್ರಚಾರದಲ್ಲಿ ತೊಡಗಿದ ಪಕ್ಷದ ಕಾರ್ಯಕರ್ತರಿಗೆ ಕಾಂಗ್ರೆಸ್ ಪಕ್ಷದವರು ಈ ರೀತಿ ಹಲ್ಲೆ ನಡೆಸಿದ್ದು ಅಲ್ಲದೆ ಜೀವ ಬೆದರಿಕೆ ಒಡ್ಡಿದ್ದಾರೆ. ಇದರಿಂದ ಪಕ್ಷದ ಮುಖಂಡರು ಮತ್ತು ಕಾರ್ಯಕರ್ತರು ಹಾಗೂ ಮತದಾರರಲ್ಲಿ ಆತಂಕ ಮೂಡಿಸಿದ್ದು, ಶಾಂತಿಯುತ ಮತದಾನಕ್ಕೆ ಸೂಕ್ತ ರಕ್ಷಣೆ ನೀಡುವಂತೆ ದೂರಿನಲ್ಲಿ ಮನವಿ ಮಾಡಲಾಗುವುದೆಂದು ತಿಳಿಸಿದರು.
ಈ ಸಂದರ್ಭದಲ್ಲಿ ಪಕ್ಷದ ಮುಖಂಡರಾದ ವಿಶ್ವನಾಥರೆಡ್ಡಿ ಇಲಾಲಪುರ, ವೀರನಗೌಡ ಕಾರಲಕುಂಟಿ ಸೇರಿದಂತೆ ಇನ್ನಿತರರು ಇದ್ದರು.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Advertisement