ರಾಜ್ಯದೇಶರಾಜಕೀಯಕ್ರಿಕೆಟ್ವಿದೇಶವಾಣಿಜ್ಯ
ಸಿನಿಮಾ▾
ಅಂಕಣಗಳು
⋮
ರಾಯಚೂರು

ದೇವದುರ್ಗ; ಶೇ.62 ಮತದಾನ

Lingaraj Badiger
Updated On : 6 May 2013, 11:48 am

ಕ.ಪ್ರ. ವಾರ್ತೆ, ದೇವದುರ್ಗ, ಮೇ 5
ದೇವದುರ್ಗ ವಿಧಾನಸಭೆ ಕ್ಷೇತ್ರಕ್ಕೆ ಭಾನುವಾರ ನಡೆದ ಮತದಾನ ಸಣ್ಣಪುಟ್ಟ ಘಟನೆಗಳ ಹೊರತಾಗಿ ಬಹುತೇಕ ಶಾಂತಿ ಯುತವಾಗಿ ಪೂರ್ಣಗೊಂಡಿದೆ. ಕ್ಷೇತ್ರದಲ್ಲಿ ಶೇ.62.44ರಷ್ಟು ಮತದಾನವಾದ ಬಗ್ಗೆ ವರದಿಯಾಗಿದೆ.
ಪಟ್ಟಣ ಸೇರಿದಂತೆ ತಾಲೂಕಿನ ಎಲ್ಲ ಗ್ರಾಮಗಳಲ್ಲಿ ಬೆಳಗ್ಗೆಯಿಂದಲೇ ಮತದಾನಕ್ಕಾಗಿ ಮತದಾರರು ಮತಗಟ್ಟೆಗಳತ್ತ ಧಾವಿಸಿ ಸಾಲಾಗಿ ನಿಂತು ಮತದಾನ ಮಾಡಿದರು. ಕಾಂಗ್ರೆಸ್ ಅಭ್ಯರ್ಥಿ ಹಾಗೂ ಮಾಜಿ ಸಂಸದ ವೆಂಕಟೇಶ್ ನಾಯಕ ಅವರು ಅರಕೇರಾ ಗ್ರಾಮದ ಮತಗಟ್ಟೆಯಲ್ಲಿ ತಮ್ಮ ಮತದಾನ ಮಾಡಿದರು. ಅದೇ ರೀತಿ ಸಿಎಂ ರಾಜಕೀಯ ಕಾರ್ಯದರ್ಶಿ ಹಾಗೂ ಬಿಜೆಪಿ ಅಭ್ಯರ್ಥಿ ಶಿವನಗೌಡ ನಾಯಕ ಅರಕೇರಾ ಗ್ರಾಮದಲ್ಲಿ ಮತದಾನ ಮಾಡಿದರು.
ಕ್ಷೇತ್ರವು ಜಿಲ್ಲೆಯಲ್ಲಿಯೇ ಜಿದ್ದಾಜಿದ್ದಿ ಕಣವಾಗಿದ್ದರಿಂದ ಮತದಾನ ಬೆಳಗ್ಗೆ ಬಿರುಸಿನಿಂದ ಆರಂಭಗೊಂಡಿತು. ಮಧ್ಯಾಹ್ನದ ವೇಳೆ ಸ್ವಲ್ಪ ಮಂದವಾಗಿದ್ದು, ಆನಂತರ ರಾತ್ರಿಯ ವೇಳೆಗೆ ಶೇ.62.44ರಷ್ಟು ಮತದಾನವಾಗಿದೆ ಎಂದು ಚುನಾವಣೆ ವಿಭಾಗ ತಿಳಿಸಿದೆ.
ಚುನಾವಣೆಯ ಮತದಾನದ ಹಿನ್ನೆಲೆಯಲ್ಲಿ ಪೊಲೀಸ್ ಮತ್ತು ಕೇಂದ್ರ ಮೀಸಲು ಪಡೆಯ ಸಿಬ್ಬಂದಿ ಭಾರೀ ಬಂದೋಬಸ್ತ್ ವ್ಯವಸ್ಥೆ ಮಾಡಿದ್ದರು. ಮತದಾನದ ವೇಳೆ ಯಾವುದೇ ಅಹಿತಕರ ಘಟನೆ ನಡೆಯದಂತೆ ಕಟ್ಟೆಚ್ಚರ ವಹಿಸಲಾಗಿತ್ತು.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Advertisement