ಕಾಂಗ್ರೆಸ್ ಗೆಲವು ನಿಶ್ಚಿತ: ಹೂಲಗೇರಿ
ಕನ್ನಡಪ್ರಭವಾರ್ತೆ, ಲಿಂಗಸ್ಗೂರು, ಮೇ 6
ಲಿಂಗಸ್ಗೂರು ಕ್ಷೇತ್ರದಲ್ಲಿ ಕಾಂಗ್ರೆಸ್ ಗೆಲವು ನಿಶ್ಚಿತ ಎಂದು ಕಾಂಗ್ರೆಸ್ ಅಭ್ಯರ್ಥಿ ಡಿ.ಎಸ್.ಹೂಲಗೇರಿ ವಿಶ್ವಾಸ ವ್ಯಕ್ತಪಡಿಸಿದರು.
ಸ್ಥಳೀಯ ಅಮರೇಗೌಡ ಬಯ್ಯಾಪುರರ ನಿವಾಸದಲ್ಲಿ ಸೋಮವಾರ ಸುದ್ದಿಗೋಷ್ಠಿ ನಡೆಸಿ ಮಾತನಾಡಿದ ಅವರು, ಕೇಂದ್ರ ಸರ್ಕಾರದ ಅಭಿವೃದ್ಧಿ ಯೋಜನೆಗಳು ಹಾಗೂ ಅಮರೇಗೌಡ ಬಯ್ಯಾಪುರರ ಅಭಿವೃದ್ಧಿ ಕಾರ್ಯಗಳೇ ನನಗೆ ಶ್ರೀರಕ್ಷೆಯಾಗಿದ್ದು, ಚುನಾವಣೆಯಲ್ಲಿ ಪಕ್ಷ ವಿರೋಧಿ ಚಟುವಟಿಕೆಯಲ್ಲಿ ತೊಡಗಿದ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷರ ವಿರುದ್ಧ ಹೈಕಮಾಂಡ್ಗೆ ಲಿಖಿತ ದೂರು ಸಲ್ಲಿಸಲಾಗುವುದು. ಚುನಾವಣೆ ಸಂದರ್ಭದಲ್ಲಿ ತಮಗೆ ಪ್ರತ್ಯಕ್ಷ ಮತ್ತು ಪರೋಕ್ಷವಾಗಿ ಸಹಕಾರ ನೀಡಿದ ಹಿರಿಯ ನಾಯಕರು, ಮುಖಂಡರು, ಕಾರ್ಯಕರ್ತರು ಹಾಗೂ ಮತದಾರರಿಗೆ ಅಭಿನಂದನೆ ಸಲ್ಲಿಸಿದರು.