ರಾಜ್ಯದೇಶರಾಜಕೀಯಕ್ರಿಕೆಟ್ವಿದೇಶವಾಣಿಜ್ಯ
ಸಿನಿಮಾ▾
ಅಂಕಣಗಳು
⋮
ರಾಯಚೂರು

ನಿಷೇಧಾಜ್ಞೆ: ವಿಜಯೋತ್ಸವಕ್ಕೆ ನಿರ್ಬಂಧ

Vishwanath S
Updated On : 8 May 2013, 4:34 am

ರಾಯಚೂರು: ವಿಧಾನಸಭೆ ಚುನಾವಣೆಯ ಮತ ಎಣಿಕೆ ಕಾರ್ಯ ಮೇ 8ರಂದು ನಗರದಲ್ಲಿ ನಡೆಯಲಿದ್ದು, ಕಾನೂನು ಸುವ್ಯವಸ್ಥೆ ಮತ್ತು ಶಾಂತಿ ಪಾಲನೆಯ ಉದ್ದೇಶದಿಂದ ಮುಂಜಾಗ್ರತಾ ಕ್ರಮವಾಗಿ ಜಿಲ್ಲಾದ್ಯಂತ ನಿಷೇಧಾಜ್ಞೆ ಜಾರಿಗೊಳಿಸಿ ಜಿಲ್ಲಾಧಿಕಾರಿ ಉಜ್ವಲ್‌ಕುಮಾರ್ ಘೋಷ್ ಆದೇಶ ಹೊರಡಿಸಿದ್ದಾರೆ.
ಈ ಕುರಿತು ಪ್ರಕಟಣೆ ನೀಡಿರುವ ಅವರು, ಮತ ಎಣಿಕೆಯ ನಂತರ ಗೆದ್ದ ಅಭ್ಯರ್ಥಿಗಳು ವಿಜಯೋತ್ಸವ ಆಚರಿಸುವುದು, ಮೆರವಣಿಗೆ ನಡೆಸುವುದು ಹಾಗೂ ಪಟಾಕಿ ಸಿಡಿಸುವುದರಿಂದ, ಚುನಾವಣೆಯಲ್ಲಿ ಸೋತ ಅಭ್ಯರ್ಥಿಗಳು, ಕಾರ್ಯಕರ್ತರು ಗಲಾಟೆ ನಡೆಸಿ ಶಾಂತಿ ಕದಡುವ ಸಂಭವವಿದೆ.
ಈ ಹಿನ್ನೆಲೆ ಜಿಲ್ಲೆಯಲ್ಲಿ ಕಾನೂನು ಸುವ್ಯವಸ್ಥೆ ಹಾಗೂ ಶಾಂತಿ ಪಾಲನೆಯ ಉದ್ದೇಶದಿಂದ ಮೇ 8 ರ ಬೆಳಿಗ್ಗೆ 6ರಿಂದ ಮೇ 9 ರ ಬೆಳಗ್ಗೆ 6ರವರೆಗೆ ಜಿಲ್ಲಾದ್ಯಂತ 144ನೇ ಕಲಂ ಅನ್ವಯ ನಿಷೇಧಾಜ್ಞೆ ಜಾರಿಗೊಳಿಸಿದ್ದಾರೆ. ಗೆದ್ದ ಅಭ್ಯರ್ಥಿಗಳು ಮೆರವಣಿಗೆ ನಡೆಸುವುದು, ಪಟಾಕಿ ಸಿಡಿಸುವುದರ ಮೂಲಕ ವಿಜಯೋತ್ಸವ ಆಚರಿಸುವುದನ್ನು ಈ ಅವಧಿಯಲ್ಲಿ ನಿರ್ಬಂಧಿಸಲಾಗಿದೆ. ನಿಷೇಧಾಜ್ಞೆ ಅನ್ವಯ ಮತ ಎಣಿಕೆ ಕೇಂದ್ರದ 200 ಮೀಟರ್ ಸುತ್ತುವರೆದ ಪ್ರದೇಶ ಹೊರತುಪಡಿಸಿ ನಿಷೇಧಾಜ್ಞೆ ಜಾರಿಗೊಳಿಸಲಾಗಿದೆ ಎಂದು ಜಿಲ್ಲಾಧಿಕಾರಿ ತಿಳಿಸಿದ್ದಾರೆ.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Advertisement