ರಾಜ್ಯದೇಶರಾಜಕೀಯಕ್ರಿಕೆಟ್ವಿದೇಶವಾಣಿಜ್ಯ
ಸಿನಿಮಾ▾
ಅಂಕಣಗಳು
⋮
ರಾಯಚೂರು

ಮತ ಎಣಿಕೆಗೆ ಜಿಲ್ಲಾಡಳಿತ ಸಜ್ಜು: 714 ಸಿಬ್ಬಂದಿ ನಿಯೋಜನೆ

Vishwanath S
Updated On : 8 May 2013, 4:33 am

ರಾಯಚೂರು: ಜಿಲ್ಲೆಯ 7 ವಿಧಾನಸಭೆ ಕ್ಷೇತ್ರಗಳಿಗೆ ಈಚೆಗೆ ನಡೆದ ಚುನಾವಣೆಯ ಮತಗಳ ಎಣಿಕೆಗೆ ಜಿಲ್ಲಾಡಳಿತ ಸಕಲ ರೀತಿಯಿಂದ ಸಜ್ಜಾಗಿದೆ. ಮತಗಳ ಎಣಿಕೆ ಕಾರ್ಯಕ್ಕಗಾಗಿ 714 ಜನ ಸಿಬ್ಬಂದಿಯನ್ನು ನಿಯೋಜಿಸಲಾಗಿದೆ ಎಂದು ಜಿಲ್ಲಾಧಿಕಾರಿ ಹಾಗೂ ಜಿಲ್ಲಾ ಚುನಾವಣಾಧಿಕಾರಿ ಉಜ್ವಲ್‌ಕುಮಾರ್ ಘೋಷ್ ತಿಳಿಸಿದರು.
ಅವರು ನಗರದಲ್ಲಿ ಮಂಗಳವಾರ ಸುದ್ದಿಗಾರರೊಂದಿಗೆ ಮಾತನಾಡಿ, ನಗರದ ಎಲ್‌ವಿಡಿ ಮತ್ತು ಎಸ್‌ಆರ್ ಪಿಎಸ್ ಕಾಲೇಜಿನಲ್ಲಿ ಮತಗಳ ಎಣಿಕೆ ಕಾರ್ಯ ನಡೆಯಲಿದೆ. ಜಿಲ್ಲಾದ್ಯಂತ ಶಾಂತಿ ಸುವ್ಯವಸ್ಥೆ ಕಾಪಾಡುವ ಉದ್ದೇಶದಿಂದ ವಿಜಯೋತ್ಸವ ನಿಷೇಧಿಸಿ ಆದೇಶ ಹೊರಡಿಸಲಾಗಿದೆ ಎಂದು ತಿಳಿಸಿದರು.
ಮತಗಳ ಎಣಿಕೆ ಕಾರ್ಯಕ್ಕಾಗಿ ಜಿಲ್ಲೆಯ 714 ಸಿಬ್ಬಂದಿಯನ್ನು ನೇಮಿಸಲಾಗಿದೆ. ಪ್ರತಿ ಕೊಠಡಿಯಲ್ಲಿ 14 ಟೇಬಲ್‌ಗಳಿರಿಸಲಾಗಿದೆ. ಪ್ರತಿ ಟೇಬಲ್‌ಗೆ ಒಬ್ಬ ಮೈಕ್ರೋ ಅಬ್ಸರ್ವರ್, ಒಬ್ಬ ಸೂಪರ್ ವೈಸರ್ ಮತ್ತು ಒಬ್ಬ ಸಹಾಯಕರನ್ನು ನೇಮಿಸಲಾಗಿದೆ ಎಂದು ತಿಳಿಸಿದರು.
ಜಿಲ್ಲೆಯ ಲಿಂಗಸ್ಗೂರು ಉಪವಿಭಾಗದ ಲಿಂಗಸ್ಗೂರು, ಮಸ್ಕಿ ಮತ್ತು ಸಿಂಧನೂರು ಕ್ಷೇತ್ರಗಳ ಮತ ಎಣಿಕೆಯನ್ನು ನಗರದ ಎಲ್‌ವಿಡಿ ಕಾಲೇಜಿನಲ್ಲಿ ನಡೆಸಲಾಗುತ್ತದೆ. ಅದೇ ರೀತಿ ರಾಯಚೂರು ನಗರ, ರಾಯಚೂರು ಗ್ರಾಮೀಣ, ದೇವದುರ್ಗ ಮತ್ತು ಮಾನವಿ ಕ್ಷೇತ್ರದ ಮತಗಳ ಎಣಿಕೆ ಕಾರ್ಯ ಎಸ್‌ಆರ್‌ಪಿಎಸ್ ಕಾಲೇಜು ಆವರಣದಲ್ಲಿ ನಡೆಯಲಿದೆ ಎಂದು ತಿಳಿಸಿದರು. ಜಿಲ್ಲೆಯಲ್ಲಿ ಎಲ್ಲ ವಿಧಾನಸಭೆ ಕ್ಷೇತ್ರಗಳ ಮತ ಎಣಿಕೆ ಕಾರ್ಯವು 14ರಿಂದ 17 ಸುತ್ತುಗಳಲ್ಲಿ ಪೂರ  ,  ಗೊಳ್ಳವ ಸಾಧ್ಯತೆಯಿದೆ. ಈಗಾಗಲೇ ಮತ ಎಣಿಕೆ ಕೇಂದ್ರದಲ್ಲಿ ಅಗತ್ಯ ಸಿದ್ಧತೆ ಮಾಡಿಕೊಳ್ಳಲಾಗಿದೆ ಎಂದು ಅವರು ತಿಳಿಸಿದರು.

ಚುನಾವಣೆಯಲ್ಲಿ ಗೆಲವು ನನ್ನದೇ: ನಾಯಕಮುದಗಲ್: ಲಿಂಗಸ್ಗೂರು ವಿಧಾನಸಭೆ ಕ್ಷೇತ್ರದ ಚುನಾವಣೆ ಮತದಾನ ಮುಗಿದಿದ್ದು, ಮತದಾರರು ನನ್ನ ಪರ ಮತ ಚಲಾಯಿಸಿದ್ದಾರೆ ಆದ್ದರಿಂದ ಗೆಲವು ನನ್ನದೆ ಎಂದು ಬಿಜೆಪಿ ಅಭ್ಯರ್ಥಿ ಟಿ.ಆರ್. ನಾಯಕ್ ವಿಶ್ವಾಸ ವ್ಯಕ್ತಪಡಿಸಿದರು.
ಪಟ್ಟಣದಲ್ಲಿ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿ, ಕ್ಷೇತ್ರದಲ್ಲಿ ಶಾಂತಿಯುತವಾಗಿ ಮತದಾನ ಮಾಡಿದ ಎಲ್ಲಾ ಮತದಾರ ದೇವರುಗಳಿಗೆ, ಎಲ್ಲ ಪಕ್ಷದ ಮುಖಂಡರುಗಳಿಗೆ ಮತ್ತು ಪ್ರತ್ಯಕ್ಷ, ಪರೋಕ್ಷವಾಗಿ  ತಮಗೆ ಸಹಕರಿಸಿದ ಎಲ್ಲರಿಗೂ ಅಭಿನಂದನೆ ಎಂದು ತಿಳಿಸಿದರು. ಲಿಂಗಸ್ಗೂರು ವಿಧಾನಸಭೆ ಕ್ಷೇತ್ರದ ಮತದಾರರು ಬುದ್ದಿವಂತರು, ಪ್ರಜ್ಞಾವಂತರು, ನಿಷ್ಠಾವಂತರಾಗಿದ್ದು, ಯಾವುದೇ ಅಹಿತಕರ ಘಟನೆಗೆ ಅವಕಾಶ ಕೊಡದೆ ಮತದಾನ ಮಾಡಿದ್ದಾರೆ. ಅವರಿಗೆ ತಾವು ಸದಾ ಋಣಿಯಾಗಿರುವುದಾಗಿ ತಿಳಿಸಿದರು.
ರಾಜ್ಯದಲ್ಲಿ ಬಿಜೆಪಿ ಸರ್ಕಾರ ಅಧಿಕಾರದಲ್ಲಿದ್ದಾಗ ಮಾಡಿ ಸಾಧನೆಗಳು, ಅಭಿವೃದ್ಧಿ ಕೆಲಸಗಳು ತಮ್ಮ ಗೆಲವಿಗೆ ಶ್ರೀರಕ್ಷೆ. ಈ ಚುನಾವಣೆಯಲ್ಲಿ ಯಾವುದೇ ದೂರು, ನೋಟಿಸ್‌ಗಳನ್ನು ಪಡೆಯದೆ ಮಾದರಿ ಅಭ್ಯರ್ಥಿಯಾಗಿರುವುದಕ್ಕೆ ಹೆಮ್ಮೆ ಎನಿಸುತ್ತದೆ. ನಾನು ಬಿಜೆಪಿ ನಿಷ್ಠಾವಂತನಾಗಿರಲು ಬಯಸುತ್ತೇನೆ ಎಂದರು. ಪತ್ರಿಕಾಗೋಷ್ಠಿಯಲ್ಲಿ ಡಾ.ಎಂ.ವಿ. ಜೋಷಿ, ಡಾ.ಗುರುರಾಜ ದೇಶಪಾಂಡೆ, ಗುರುಬಸಪ್ಪ ಸಜ್ಜನ್, ಟಿ.ಶೇಷಣ  ,  , ಡಾ.ಪ್ರಕಾಶ, ಸಿದ್ದಯ್ಯ ತಾತ ಮೇಗಳಪೇಟೆ ಉಪಸ್ಥಿತರಿದ್ದರು.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Advertisement